ಬ್ರಹ್ಮಾವರ: ರುಕ್ಮಿಣಿ ಶೆಡ್ತಿ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ವಾಲಿಬಾಲ್‌ ಪಂದ್ಯಾಟ

| Published : Mar 22 2025, 02:02 AM IST

ಬ್ರಹ್ಮಾವರ: ರುಕ್ಮಿಣಿ ಶೆಡ್ತಿ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ವಾಲಿಬಾಲ್‌ ಪಂದ್ಯಾಟ
Share this Article
  • FB
  • TW
  • Linkdin
  • Email

ಸಾರಾಂಶ

ಬಾರ್ಕೂರಿನ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಸರ್ಕಾರಿ ಪದವಿ ಕಾಲೇಜುಗಳ ಪುರುಷರ ವಾಲಿಬಾಲ್ ಪಂದ್ಯಾಟ ನಡೆಯಿತು. ಆರು ಪದವಿ ಕಾಲೇಜುಗಳ ವಿದ್ಯಾರ್ಥಿಗಳ ವಾಲಿಬಾಲ್ ತಂಡಗಳು ಈ ಪಂದ್ಯಾಟದಲ್ಲಿ ಭಾಗವಹಿಸಿದ್ದವು.

ಕನ್ನಡಪ್ರಭ ವಾರ್ತೆ ಬ್ರಹ್ಮಾವರ

ಇಲ್ಲಿನ ಬಾರ್ಕೂರಿನ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಸರ್ಕಾರಿ ಪದವಿ ಕಾಲೇಜುಗಳ ಪುರುಷರ ವಾಲಿಬಾಲ್ ಪಂದ್ಯಾಟ ನಡೆಯಿತು. ಉಡುಪಿ ಜಿಲ್ಲೆಯ ಆರು ಪದವಿ ಕಾಲೇಜುಗಳ ವಿದ್ಯಾರ್ಥಿಗಳ ವಾಲಿಬಾಲ್ ತಂಡಗಳು ಈ ಪಂದ್ಯಾಟದಲ್ಲಿ ಭಾಗವಹಿಸಿದ್ದವು. ಉದ್ಯಮಿ ಶ್ರೀನಿವಾಸ ಶೆಟ್ಟಿಗಾರ್ ಪಂದ್ಯಾವಳಿಗೆ ಚಾಲನೆ ನೀಡಿದರು.

ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾಂಶುಪಾಲ ಪ್ರೊ. ಭಾಸ್ಕರ್ ಶೆಟ್ಟಿ ಎಸ್. ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯೂ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ. ನಿರಂತರ ಅಭ್ಯಾಸದ ಮೂಲಕ ಯಶಸ್ಸು ಗಳಿಸಲು ಸಾಧ್ಯ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಉದ್ಯಮಿ ಸುಜಯ್ ಶೆಟ್ಟಿ ತೆಕ್ಕಟ್ಟೆ ಮಾತನಾಡಿ, ಕ್ರೀಡೆಯಲ್ಲಿ ಸೋಲು ಗೆಲವು ಮುಖ್ಯವಲ್ಲ, ಭಾಗವಹಿಸುವುದು ಮುಖ್ಯ. ಕ್ರೀಡೆಯಲ್ಲಿ ಯಶಸ್ಸು ಗಳಿಸಲು ಪೂರ್ವಸಿದ್ಧತೆ ಅಗತ್ಯ ಎಂದು ಹೇಳಿದರು.

ದೈಹಿಕ ಶಿಕ್ಷಣ ನಿರ್ದೇಶಕಿ ಸುಮತಿ ಸ್ವಾಗತಿಸಿದರು. ಸಮಾಜ ಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಪಾಪಣ್ಣ ವಂದಿಸಿದರು. ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕಿ ಲೋಲಾಕ್ಷಿ ಕಾರ್ಯಕ್ರಮ ನಿರೂಪಿಸಿದರು. ಸಮಾರೋಪ ಸಮಾರಂಭದ ಮುಖ್ಯ ಅತಿಥಿ ಬಾರ್ಕೂರು ರೋಟರಿ ಕ್ಲಬ್ ಅಧ್ಯಕ್ಷ ಗಣೇಶ ಶೆಟ್ಟಿ ವಿಜೇತ ತಂಡಗಳಿಗೆ ಬಹುಮಾನವನ್ನು ವಿತರಿಸಿದರು.