ಸಾರಾಂಶ
ಹೆಗ್ಗುಂಜೆ ರಾಜೀವ ಶೆಟ್ಟಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಹಾಗೂ ಉಡುಪಿ ಜಿಲ್ಲಾಡಳಿತ ಮತ್ತು ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ರಾಜ್ಯಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಶೇಷ ಚೇತನ ವಿದ್ಯಾರ್ಥಿಗಳ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಹಿಸಿ ಕ್ರೀಡಾಕೂಟಕ್ಕೆ ಶುಭಹಾರೈಸಿದರು.
ಕನ್ನಡಪ್ರಭ ವಾರ್ತೆ ಬ್ರಹ್ಮಾವರ
ಇಲ್ಲಿನ ಹೆಗ್ಗುಂಜೆ ರಾಜೀವ ಶೆಟ್ಟಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಹಾಗೂ ಉಡುಪಿ ಜಿಲ್ಲಾಡಳಿತ ಮತ್ತು ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ರಾಜ್ಯಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಶೇಷ ಚೇತನ ವಿದ್ಯಾರ್ಥಿಗಳ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಹಿಸಿ ಕ್ರೀಡಾಕೂಟಕ್ಕೆ ಶುಭಹಾರೈಸಿದರು.ಸಮಾರಂಭದಲ್ಲಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಕೆ., ವಾರಂಬಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಿತ್ಯಾನಂದ ಬಿ. ಆರ್., ಗಣ್ಯರಾದ ರಾಜೇಶ್ ಶೆಟ್ಟಿ ಬಿರ್ತಿ, ಅರುಣ್ ಭಂಡಾರಿ, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಭೂಸುರಕ್ಷಾ ಚಾಲನೆ:ಬ್ರಹ್ಮಾವರ ತಾಲೂಕು ಕಚೇರಿಯಲ್ಲಿ ಭೂ ಸುರಕ್ಷಾ ಯೋಜನೆಯಡಿ ಕಂದಾಯ ದಾಖಲೆಗಳನ್ನು ಗಣಕೀಕರಣಗೊಳಿಸುವ ಕಾರ್ಯಕ್ರಮಕ್ಕೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ಪಾಲ್ ಸುವರ್ಣ ಚಾಲನೆ ನೀಡಿದರು.ಈ ಸಮಾರಂಭದಲ್ಲಿ ಬ್ರಹ್ಮಾವರ ತಾಲೂಕು ತಹಸೀಲ್ದಾರ್ ಶ್ರೀಕಾಂತ ಹೆಗ್ಡೆ, ಇಲಾಖೆಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.