ಬ್ರಹ್ಮಾವರ: ತಾಲೂಕು ಪ್ರೌಢಶಾಲಾ ಕ್ರೀಡಾಕೂಟಕ್ಕೆ ಚಾಲನೆ

| Published : Oct 26 2024, 12:52 AM IST

ಸಾರಾಂಶ

ಮಿಲಾಗ್ರಿಸ್ ಆಂಗ್ಲ ಮಾಧ್ಯಮ ಶಾಲೆಯ ಆಶ್ರಯದಲ್ಲಿ ಬ್ರಹ್ಮಾವರ ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟವನ್ನು ಮಿಲಾಗ್ರಿಸ್ ಕಾಲೇಜಿನ ಕ್ರೀಡಾಂಗಣದಲ್ಲಿ ಆಯೋಜಿಸಲಾಯಿತು.

ಕನ್ನಡಪ್ರಭ ವಾರ್ತೆ ಬ್ರಹ್ಮಾವರ

ಇಲ್ಲಿನ ಮಿಲಾಗ್ರಿಸ್ ಆಂಗ್ಲ ಮಾಧ್ಯಮ ಶಾಲೆಯ ಆಶ್ರಯದಲ್ಲಿ ಬ್ರಹ್ಮಾವರ ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟವನ್ನು ಮಿಲಾಗ್ರಿಸ್ ಕಾಲೇಜಿನ ಕ್ರೀಡಾಂಗಣದಲ್ಲಿ ಆಯೋಜಿಸಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಮಿಲಾಗ್ರಿಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕ ಫರ್ಡಿನೆಂಡ್ ಗೊನ್ಸಾಲ್ವಿಸ್‍ ಅವರು ಕ್ರೀಡಾ ತಂಡಗಳ ಪಥಸಂಚಲನವನ್ನು ವೀಕ್ಷಿಸಿ, ಗೌರವವನ್ನು ಸ್ವೀಕರಿಸಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಶಾಲೆಯ ಹಳೆವಿದ್ಯಾರ್ಥಿ ಆಭಿನ್ ದೇವಾಡಿಗ ಅವರು ಕ್ರೀಡಾಜ್ಯೋತಿಯನ್ನು ಬೆಳಗಿ, ಧ್ವಜಾರೋಹಣವನ್ನು ನೆರವೇರಿಸಿದರು. ಭಾಗವಹಿಸಿದ ಎಲ್ಲಾ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಅತಿಥಿಗಳಾಗಿ ಬ್ರಹ್ಮಾವರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಶಬನಾ ಅಂಜುಮ್, ವಲಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಜಗದೀಶ್, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ವಿಜಯ್ ಕುಮಾರ್ ಶೆಟ್ಟಿ, ಬ್ರಹ್ಮಾವರ ವಲಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಸನ್ನ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

ಪಥಸಂಚಲನದ ನಿರ್ಣಾಯಕರಾಗಿ ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕ ರೋಹಿತ್, ಸಹಾಯಕ ಉಪನಿರೀಕ್ಷಕರಾದ ವಿಜಯ್ ಕುಮಾರ್ ಹಾಗೂ ವಿಶ್ವನಾಥ್‍ ಅವರು ಆಗಮಿಸಿದ್ದರು. ಆಗಮಿಸಿದ ಅತಿಥಿ ಗಣ್ಯರನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಸಿ. ಶಾಂತಿ ಪ್ರಮೀಳಾ ಡಿಸೋಜಾ ಸ್ವಾಗತಿಸಿದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ವಿನಯ್ ಶೇಟ್ ವಂದಿಸಿದರು.