ಬ್ರಹ್ಮಾವರ: ಜಿ.ಎಂ. ಶಾಲೆಯಲ್ಲಿ ಪುಸ್ತಕ ಮೇಳ

| Published : Dec 29 2024, 01:17 AM IST

ಸಾರಾಂಶ

ಜಿ.ಎಂ. ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‌ನಲ್ಲಿ ಪುಸ್ತಕ ಮೇಳ ನಡೆಯಿತು.

ಕನ್ನಡಪ್ರಭ ವಾರ್ತೆ ಬ್ರಹ್ಮಾವರ

ತಿಳಿವಳಿಕೆಯಿಲ್ಲದೆ ಜೀವನದಲ್ಲಿ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ತಂತ್ರಜ್ಞಾನದ ನೆಲೆಯಲ್ಲಿ ಜ್ಞಾನವನ್ನು ಗಳಿಸಿಕೊಳ್ಳಲು ಈವಾಗ ಅನೇಕ ಮಾರ್ಗಗಳಿವೆ. ನಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಅರಿವು ಎನ್ನುವುದು ಅತೀ ಅಗತ್ಯ. ಹಾಗಾಗಿ ಹೆಚ್ಚೆಚ್ಚು ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು ಎಂದು ಮಹಾಬಲೇಶ್ವರ್ ರಾವ್‌ ಹೇಳಿದರು.

ಅವರು ಜಿ.ಎಂ. ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‌ನಲ್ಲಿ ಆಯೋಜಿಸಲಾದ ಪುಸ್ತಕ ಮೇಳವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು.ಶಾಲಾ ಪ್ರಾಂಶುಪಾಲ ಜಾರ್ಜ್ ಕುರಿಯನ್ ಮಾತನಾಡಿ, ಈಗಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸನ್ನು ಪಡೆಯಲು ಜ್ಞಾನ ಅತೀ ಅವಶ್ಯಕ. ಆದ್ದರಿಂದ ನಾವು ಪುಸ್ತಕಗಳನ್ನು ಓದುವುದರ ಜೊತೆಗೆ ಬೇರೆಯವರಲ್ಲಿಯೂ ಪುಸ್ತಕವನ್ನು ಓದುವ ಅಭ್ಯಾಸವನ್ನು ಬೆಳೆಸಬೇಕು ಎಂದರು.ಜಿ.ಎಂ. ಗ್ಲೋಬಲ್ ಸ್ಕೂಲ್‌ನ ಪ್ರಾಂಶುಪಾಲ ಪ್ರಣವ್ ಶೆಟ್ಟಿ ಮಾತನಾಡಿ, ಸಾಮಾಜಿಕ ಜಾಲತಾಣದದಲ್ಲಿ ಅನಗತ್ಯವಾಗಿ ತಮ್ಮನ್ನು ತಾವು ತೊಡಗಿಸಿಕೊಂಡು ಸಮಯವನ್ನು ವ್ಯರ್ಥ ಮಾಡುವುದರ ಬದಲು ಪುಸ್ತಕವನ್ನು ಓದುವ ಹವ್ಯಾಸ ರೂಢಿಸಿಕೊಳ್ಳಿ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ರಕ್ಷಕ ಸಂಘ ಅಧ್ಯಕ್ಷೆ ಡಾ. ಅನುಷಾ ಸುಬ್ರಹ್ಮಣ್ಯಂ, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಡಿ.೩೦ರ ವರೆಗೆ ಪುಸ್ತಕ ಮೇಳ ನಡೆಯಲಿದ್ದು, ಪೋಷಕರು ಪುಸ್ತಕವನ್ನು ಖರೀದಿಸಲು ಅವಕಾಶ ಮಾಡಿಕೊಡಲಾಗಿದೆ.