ಸಾರಾಂಶ
ಬ್ರಹ್ಮಾವರ ಜಿ.ಎಂ. ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ನಲ್ಲಿ ಶನಿವಾರ ಅಂತಾರಾಷ್ಟ್ರೀಯ ಯೋಗ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.
ಕನ್ನಡಜಪ್ರಭ ವಾರ್ತೆ ಬ್ರಹ್ಮಾವರ
ಇಲ್ಲಿನ ಜಿ.ಎಂ. ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ನಲ್ಲಿ ಶನಿವಾರ ಅಂತಾರಾಷ್ಟ್ರೀಯ ಯೋಗ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.ಮುಖ್ಯ ಅತಿಥಿ ಯೋಗ ಶಿಕ್ಷಕಿ ಪ್ರಿಯಾಂಕ ದೀಕ್ಷಿತ್ ಮಾತನಾಡಿ, ಯೋಗಾಸನವು ನಮ್ಮ ದೈಹಿಕ ಹಾಗೂ ಮಾನಸಿಕ ಸ್ಥಿತಿಯನ್ನು ನಿಯಂತ್ರಿಸುವ ಉತ್ತಮ ಮಾರ್ಗವಾಗಿದೆ. ಯೋಗಾಭ್ಯಾಸವು ಕೇವಲ ಆಚರಣೆಯ ಸಲುವಾಗಿ ಅದು ಒಂದು ದಿನಕ್ಕೆ ಸೀಮಿತವಾಗಿರದೇ ಪ್ರತಿನಿತ್ಯ ಯೋಗಾಸನವನ್ನು ಮಾಡಿ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಶಾಲಾ ಪ್ರಾಂಶುಪಾಲ ಜಾರ್ಜ್ ಕುರಿಯನ್ ವಿದ್ಯಾರ್ಥಿಗಳಿಂದ ಯೋಗಾಭ್ಯಾಸದ ಪ್ರತಿಜ್ಞೆಯನ್ನು ಸ್ವೀಕರಿಸಿ ಮಾತನಾಡಿ ಯೋಗದ ಇತಿಹಾಸ, ಆಚರಣೆಯ ಮಹತ್ವವನ್ನು ತಿಳಿಸಿ ಉತ್ತಮ ಅರೋಗ್ಯಕ್ಕೆ, ನೆಮ್ಮದಿಗೆ ಯೋಗ ಅನಿವಾರ್ಯ ಎಂದರು.ಸಂಸ್ಥೆಯ ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಅತಿಥಿಗಳ ನಿರ್ದೇಶನದಲ್ಲಿ ಯೋಗಾಸನಗಳನ್ನು ಮಾಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಡಾ. ಅನುಷಾ ಸುಬ್ರಹ್ಮಣ್ಯಂ, ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.