ಸಾರಾಂಶ
ಸಿಇಟಿ ವಿದ್ಯಾರ್ಥಿಗೆ ಜನಿವಾರ ತೆಗೆದು ಪರೀಕ್ಷಾ ಕೊಠಡಿಗೆ ತೆರಳುವಂತೆ ಹೇಳಿ ಮಾನಸಿಕ ಹಿಂಸೆ ನೀಡಿದ ಘಟನೆಯನ್ನು ಬ್ರಾಹ್ಮಣ ಸಮಾಜ ತೀವ್ರವಾಗಿ ಖಂಡಿಸಿದೆ.
ಕನ್ನಡಪ್ರಭವಾರ್ತೆ ಸೋಮವಾರಪೇಟೆ
ರಾಜ್ಯದ ಬೀದರ್ ಹಾಗೂ ಶಿವಮೊಗ್ಗದಲ್ಲಿ ಸಿಇಟಿ ವಿದ್ಯಾರ್ಥಿಗೆ ಜನಿವಾರ ತೆಗೆದು ಪರೀಕ್ಷಾ ಕೊಠಡಿಗೆ ತೆರಳುವಂತೆ ಹೇಳಿ ಮಾನಸಿಕ ಹಿಂಸೆ ನೀಡಿದ ಘಟನೆಯನ್ನು ಬ್ರಾಹ್ಮಣ ಸಮಾಜ ತೀವ್ರವಾಗಿ ಖಂಡಿಸಿದೆ.ಸಿಇಟಿ ಪರೀಕ್ಷೆ ಬರೆಯಲಾಗದೆ ಭವಿಷ್ಯವನ್ನೇ ಕಳೆದುಕೊಳ್ಳುವ ಆತಂಕದಲ್ಲಿ ವಿದ್ಯಾರ್ಥಿಗಳು ಇದ್ದಾರೆ. ಇಂತಹ ಅಮಾನವೀಯ ಘಟನೆಯನ್ನು ಖಂಡಿಸಿದ ಬ್ರಾಹ್ಮಣ ಸಮಾಜ, ಅಧಿಕಾರಿಗಳ ಕ್ರಮವನ್ನು ಪ್ರಶ್ನಿಸಿ ಘೋಷಣೆಗಳನ್ನು ಕೂಗುತ್ತಾ, ಪಟ್ಟಣದ ಸೋಮೇಶ್ವರ ದೇವಾಲಯದ ಬಳಿಯಿಂದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ಮೂಲಕ ಸಾಗಿ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಬ್ರಾಹ್ಮಣ ಸಮಾಜದ ಅಧ್ಯಕ್ಷ ಎಂ.ಆರ್. ನಂದಕುಮಾರ್ , ಕಾರ್ಯದರ್ಶಿ ಶ್ರೀಕಾಂತ್ ಸೇರಿದಂತೆ ಪದಾಧಿಕಾರಿಗಳು, ಸಮಾಜದ ಪ್ರಮುಖರು ಪಾಲ್ಗೊಂಡಿದ್ದರು.