ಸಾರಾಂಶ
ಮೆದುಳು ಜ್ವರ ಮಾರಕ ರೋಗವಾಗಿದ್ದು ಇದು 15 ವರ್ಷದೊಳಗಿನ ಮಕ್ಕಳನ್ನು ಹೆಚ್ಚಾಗಿ ಕಾಡುತ್ತದೆ, ಈ ಕುರಿತು ಮುನ್ನೆಚ್ಚರಿಕೆ ಆಗತ್ಯ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಜಿಲ್ಲಾ ಅಧಿಕಾರಿ ಡಾ. ನಾಗಪ್ಪ ತಿಳಿಸಿದರು. ಮೆದುಳು ಜ್ವರದ ವೈರಾಣುಗಳನ್ನು ಹೊಂದಿದ ಹಂದಿ ಮತ್ತು ಬೆಳ್ಳಕ್ಕಿಯನ್ನು ಕಚ್ಚಿದ ಕ್ಯೂಲೆಕ್ಸ್ ಜಾತಿಯ ಸೊಳ್ಳೆಗಳು ಮನುಷ್ಯರಿಗೆ ಕಚ್ಚುವುದರಿಂದ ಈ ರೋಗ ಹರಡುತ್ತದೆ ಎಂದರು. ಮೆದುಳು ಜ್ವರ ಹರಡುವ ವಿಧಾನ, ಇದನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮ, ಚಿಕಿತ್ಸೆ ಕುರಿತು ಮಾಹಿತಿ ನೀಡಿದರು.
ಕನ್ನಡಪ್ರಭ ವಾರ್ತೆ ಅರಕಲಗೂಡು
ಮೆದುಳು ಜ್ವರ ಮಾರಕ ರೋಗವಾಗಿದ್ದು ಇದು 15 ವರ್ಷದೊಳಗಿನ ಮಕ್ಕಳನ್ನು ಹೆಚ್ಚಾಗಿ ಕಾಡುತ್ತದೆ, ಈ ಕುರಿತು ಮುನ್ನೆಚ್ಚರಿಕೆ ಆಗತ್ಯ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಜಿಲ್ಲಾ ಅಧಿಕಾರಿ ಡಾ. ನಾಗಪ್ಪ ತಿಳಿಸಿದರು.ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ವಿಭಾಗ ತಾಲೂಕು ಮಟ್ಟದ ವಿವಿಧ ಸರ್ಕಾರಿ ಇಲಾಖೆ ಅಧಿಕಾರಿಗಳಿಗೆ ಏರ್ಪಡಿಸಿದ್ದ ಮೆದುಳು ಜ್ವರ ಕುರಿತು ಅರಿವು ಕಾರ್ಯಾಗಾರದಲ್ಲಿ ಮಾತನಾಡಿ, ಮೆದುಳು ಜ್ವರದ ವೈರಾಣುಗಳನ್ನು ಹೊಂದಿದ ಹಂದಿ ಮತ್ತು ಬೆಳ್ಳಕ್ಕಿಯನ್ನು ಕಚ್ಚಿದ ಕ್ಯೂಲೆಕ್ಸ್ ಜಾತಿಯ ಸೊಳ್ಳೆಗಳು ಮನುಷ್ಯರಿಗೆ ಕಚ್ಚುವುದರಿಂದ ಈ ರೋಗ ಹರಡುತ್ತದೆ. ಸೆಪ್ಟೆಂಬರ್‌ನಿಂದ ಡಿಸೆಂಬರ್ ಮಾಹೆಯವರೆಗೆ ಈ ರೋಗ ಹೆಚ್ಚಿಗೆ ಕಾಣಿಸಿಕೊಳ್ಳುತ್ತದೆ. ಈ ರೋಗವನ್ನು ತಡೆಗಟ್ಟಲು ಆರೋಗ್ಯ ಇಲಾಖೆ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಈ ಕುರಿತು ಜನರಲ್ಲಿ ಅರಿವು ಮೂಡಿಸಲು ವಿವಿಧ ಇಲಾಖೆ ಅಧಿಕಾರಿಗಳು ಕೈಜೋಡಿಸಬೇಕು ಎಂದರು.
ಇಲಾಖೆಯ ಕೀಟ ಶಾಸ್ತ್ರ ತಜ್ಞ ಡಾ. ರಾಜೇಶ್ ಕುಲಕರ್ಣಿ ಅವರು, ಮೆದುಳು ಜ್ವರ ಹರಡುವ ವಿಧಾನ ಇದನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮ, ಚಿಕಿತ್ಸೆ ಕುರಿತು ಮಾಹಿತಿ ನೀಡಿದರು. ತಾಪಂ ಸಹಾಯಕ ನಿರ್ದೇಶಕ ಶೇಖರ್ ಕಾರ್ಯಕ್ರಮ ಉದ್ಘಾಟಿಸಿದರು. ಪಪಂ ಉಪಾಧ್ಯಕ್ಷ ಸುಬಾನ್ ಷರೀಫ್, ತಾಲೂಕು ಆರೋಗ್ಯಾಧಿಕಾರಿ ಡಾ. ಪುಷ್ಪಲತಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಮಂಜುಳ, ತಾಲೂಕು ಅಧಿಕಾರಿ ಪರಮೇಶ್, ಪಶುವೈದ್ಯ ಡಾ. ಚೇತನ್, ತಾಲೂಕು ಆರೋಗ್ಯ ನಿರೀಕ್ಷಕ ಚಂದ್ರೇಗೌಡ, ಆಶಾ ಮೆಂಟರ್ ಕವಿತ, ವಿವಿಧ ಇಲಾಖೆ ಅಧಿಕಾರಿಗಳು, ಗ್ರಾಪಂ ಪಿಡಿಒಗಳು ಭಾಗವಹಿಸಿದ್ದರು.