ಶ್ವಾನಗಳ ಸಾಕಾಣಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು

| Published : Jan 31 2024, 02:17 AM IST

ಸಾರಾಂಶ

ನನ್ನ ಕ್ಷೇತ್ರದಲ್ಲಿ ಜಿಲ್ಲೆಗೆ ಪ್ರಥಮ ಬಾರಿ ಶ್ವಾನಗಳ ಪ್ರದರ್ಶನವನ್ನು ಪಶು ಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಆಯೋಜಿಸಿರುವುದು ಖುಷಿ ತಂದಿದೆ. ನಿಯತ್ತಿಗೆ ಮತ್ತೊಂದು ಹೆಸರೇ ನಾಯಿ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಹೇಳಿದರು.

ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ

ನನ್ನ ಕ್ಷೇತ್ರದಲ್ಲಿ ಜಿಲ್ಲೆಗೆ ಪ್ರಥಮ ಬಾರಿ ಶ್ವಾನಗಳ ಪ್ರದರ್ಶನವನ್ನು ಪಶು ಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಆಯೋಜಿಸಿರುವುದು ಖುಷಿ ತಂದಿದೆ. ನಿಯತ್ತಿಗೆ ಮತ್ತೊಂದು ಹೆಸರೇ ನಾಯಿ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಹೇಳಿದರು.

ಪಟ್ಟಣದ ಪಶು ಆಸ್ಪತ್ರೆಯ ಆವರಣದಲ್ಲಿ ಪಶು ಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಪ್ರಥಮ ಬಾರಿಗೆ ಆಯೋಜಿಸಿದ್ದ ತಾಲೂಕು ಮಟ್ಟದ ಶ್ವಾನ ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.

ಶ್ವಾನಗಳ ಸಾಕಾಣಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಪಶು ಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯು ಶ್ವಾನ ಪ್ರದರ್ಶನ ಅಚ್ಚು ಕಟ್ಟಾಗಿ ಆಯೋಜಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ನನಗೂ ಸಾಕು ಪ್ರಾಣಿಗಳು ಕಂಡ್ರೆ ಬಹಳ ಇಷ್ಟ. ಚಿಕ್ಕವನಿದ್ದಾಗ ಬಹಳ ಪ್ರೀತಿಸುತ್ತಿದ್ದೇ.

ನಗರ ಪ್ರದೇಶಗಳಲ್ಲಿ ಪ್ರಸ್ತುತ ವಾಕಿಂಗ್‌ ಸಮಯದಲ್ಲಿ ನಾಯಿಗಳೊಂದಿಗೆ ತೆರಳುತ್ತಿದ್ದಾರೆ. ನಗರ ಪ್ರದೇಶದಲ್ಲಿ ನಾಯಿಗಳನ್ನು ಕೂಡಿಟ್ಟು ಸಾಕುತ್ತಿದ್ದಾರೆ ಇದು ಹಿಂಸೆಯಾದರೂ ಏನು ಮಾಡಲು ಆಗುವುದಿಲ್ಲ ಎಂದರು.

ಇಲ್ಲಿನ ಪಶು ಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್‌ ಗಮನಕ್ಕೆ ತಂದು ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ವಹಿಸುವ ಭರವಸೆ ನೀಡಿದರು.

ಆಸ್ಪತ್ರೆಯ ಆವರಣದಲ್ಲಿ ನಡೆದ ಶ್ವಾನಗಳ ಪ್ರದರ್ಶನದಲ್ಲಿ 36 ಬಗೆಯ ವಿವಿಧ ತಳಿಗಳ ನಾಯಿಗಳು ಭಾಗವಹಿಸಿದ್ದವು.೧೮ ನಾಯಿಗಳಿಗೆ ಪ್ರಥಮ,ದ್ವಿತೀಯ ಪ್ರಶಸ್ತಿಗಳನ್ನು ಶಾಸಕರು ನಾಯಿಗಳ ಮಾಲೀಕರಿಗೆ ವಿತರಿಸಿದರು.

ಸಮಾರಂಭದಲ್ಲಿ ಪಶು ಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ.ಹನುಮೇಗೌಡ,‌ ತಾಪಂ ಇಒ ರಾಮಲಿಂಗಯ್ಯ, ಪುರಸಭೆ ಸದಸ್ಯ ಎಚ್.ಆರ್.ರಾಜಗೋಪಾಲ್‌, ಅಣ್ಣಯ್ಯಸ್ವಾಮಿ, ಗೌಡ್ರ ಮಧು, ಅಲ್ಲಾಹು, ಪುರಸಭೆ ಮಾಜಿ ಉಪಾಧ್ಯಕ್ಷ ಎಸ್‌ಆರ್‌ಎಸ್‌ ರಾಜಶೇಖರ್‌, ಪಶು ಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಸಹಾಯಕ ನಿರ್ದೇಶಕ (ಆಡಳಿತ) ಡಾ.ಬಿ.ಎಚ್.ಮೋಹನ್‌ ಕುಮಾರ್ ಹಾಗೂ ಮತ್ತಿತರರಿದ್ದರು.