Bribe for release of egg money: Teacher falls into Loka's trap

ಕಲಬುರಗಿ: ನಗರದ ಸ್ಟೇಷನ್ ಬಝಾರ್ ಅಂಗನವಾಡಿ ಕೇಂದ್ರದಲ್ಲಿ ಮೊಟ್ಟೆ ಹಣ ಬಿಡುಗಡೆ ಮಾಡುವುದಕ್ಕೆ ಲಂಚ ಪಡೆಯುತ್ತಿದ್ದ ವೇಳೆ ಅಂಗನವಾಡಿ ಟೀಚರ್ ಹಾಗೂ ಯು.ಎಫ್.ಡಬ್ಲ್ಯೂಸಿ ಸಿಬ್ಬಂದಿ ಲೋಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಬುಧವಾರ ನಡೆದಿದೆ. ಬಂಧಿತರನ್ನು ಅಂಗನವಾಡಿ ಟೀಚರ್ ಹೀನಾ ಹಾಗೂ ಯು.ಎಫ್.ಡಬ್ಲ್ಯೂಸಿ ಸಿಬ್ಬಂದಿ ಪಿಂಕುಬಾಯಿ ಗಾಯಕ್ವಾಡ್ ಎಂದು ಗುರುತಿಸಲಾಗಿದೆ. ಉದಯನಗರ ನಿವಾಸಿ ಸೌಭಾಗ್ಯ ಬಲಭೀಮ ರಾಠೋಡ ಅವರು ನೀಡಿದ ದೂರಿನ ಮೇರೆಗೆ, ಲೋಕಾಯುಕ್ತ ಎಸ್ಪಿ ಸಿದ್ಧರಾಜು ಅವರ ಮಾರ್ಗದರ್ಶನದಲ್ಲಿ, ಪೊಲೀಸ್ ಇನ್ಸ್‌ಪೆಕ್ಟರ್–2 ರಾಜಶೇಖರ ಬಡದೆಸಾರ ನೇತೃತದ ತಂಡ ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.ಫೋಟೋ- ಗಾಯಕವಾಡಫೋಟೋ- ಹೀನಾ