ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಲೋಕಾಯುಕ್ತ ಬಲೆಗೆ
KannadaprabhaNewsNetwork | Published : Oct 14 2023, 01:00 AM IST
ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಲೋಕಾಯುಕ್ತ ಬಲೆಗೆ
ಸಾರಾಂಶ
ಸ್ಮಶಾನದಲ್ಲಿ ₹15 ಸಾವಿರ ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಅಧಿಕಾರಿಯನ್ನು ಬಲೆಗೆ ಕೆಡವಿದ್ದಾರೆ
ಕನ್ನಡಪ್ರಭ ವಾರ್ತೆ ಶಿವಮೊಗ್ಗ ಸ್ಮಶಾನದಲ್ಲಿ ಕಾಮಗಾರಿಗೆ ಹಣ ಬಿಡುಗಡೆಗೆ ₹15 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಶಿವಮೊಗ್ಗದ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗೋಪಿನಾಥ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬುಕ್ಲಾಪುರ ಸಶ್ಮಾನ ಕಾಮಗಾರಿ ಹಣ ಬಿಡುಗಡೆ ಮತ್ತು ಸ್ಥಳ ಪರಿಶೀಲನೆ ಮಾಡಿ, ರಿಪೋರ್ಟ್ ಕೊಡಲು ₹15 ಸಾವಿರ ಹಣಕ್ಕೆ ಗೋಪಿನಾಥ್ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಶಿವಮೊಗ್ಗ ಲೋಕಾಯುಕ್ತರಿಗೆ ದೂರು ದಾಖಲಾಗಿತ್ತು. ಸ್ಮಶಾನದಲ್ಲಿ ₹15 ಸಾವಿರ ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಅಧಿಕಾರಿಯನ್ನು ಬಲೆಗೆ ಕೆಡವಿದ್ದಾರೆ. ದೂರಿನ ಅನ್ವಯ ಲೋಕಾಯುಕ್ತ ಡಿವೈಎಸ್ಪಿ ಉಮೇಶ್ ಈಶ್ವರ್ ನಾಯ್ಕ್ ನೇತೃತ್ವದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದು, ಗೋಪಿನಾಥ್ ಅವರನ್ನು ವಶಕ್ಕೆ ಪಡೆಯಲಾಗಿದೆ. - - - -13ಎಸ್‌ಎಂಜಿಕೆಪಿ03: ಗೋಪಿನಾಥ್