ಸಾರಾಂಶ
ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಎರಡನೇ ಸುತ್ತಿನ ಪ್ರವಾಸ ಕೈಗೊಂಡು ಪ್ರಮುಖರ ಮನೆ ಭೇಟಿ ಮಾಡಿ ಮಾತನಾಡಿದರು.
ಕನ್ನಡಪ್ರಭ ವಾರ್ತೆ ಬಂಟ್ವಾಳ
ರಾಷ್ಟ್ರದ ಹಿತಾಸಕ್ತಿಯ ದೃಷ್ಟಿಯಿಂದ, ವಿಕಸಿತ ಭಾರತದ ಸಂಕಲ್ಪಕ್ಕೆ ಮತ್ತೊಮ್ಮೆ ಮೋದಿಯವರು ಪ್ರಧಾನಿಯಾಗಬೇಕು, ಈ ನಿಟ್ಟಿನಲ್ಲಿ ರಾಜ್ಯದ ಪ್ರತಿಯೊಂದು ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಗೆಲುವು ಸಾಧಿಸಬೇಕಾಗಿದೆ ಎಂದು ಮಂಗಳೂರು ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಹೇಳಿದರು.ಅವರು ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಎರಡನೇ ಸುತ್ತಿನ ಪ್ರವಾಸ ಕೈಗೊಂಡು ಪ್ರಮುಖರ ಮನೆ ಭೇಟಿ ಮಾಡಿ ಮಾತನಾಡಿದರು.
ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಮಾತನಾಡಿ, ಉತ್ತಮ ಫಲಿತಾಂಶಕ್ಕಾಗಿ ಕಾರ್ಯಕರ್ತರು ಜೊತೆಯಾಗಿ ಶ್ರಮಿಸಬೇಕು ಎಂದರು.ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತುಂಗಪ್ಪ ಬಂಗೇರ ಮಾತನಾಡಿದರು.
ಕಲ್ಲಡ್ಕ ಶ್ರೀರಾಮ ಮಂದಿದರಲ್ಲಿ ಶ್ರೀ ರಾಮನಿಗೆ ಪೂಜೆ ಸಲ್ಲಿಸಿ ಬಳಿಕ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಎರಡನೇ ಸುತ್ತಿನ ಮತಯಾಚನೆ ನಡೆಸಿದರು. ಬಿ.ಸಿ. ರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.ಬಂಟ್ವಾಳ ಮಂಡಲದ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್, ಮಾಜಿ ಶಾಸಕರಾದ ಎ. ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ಬಿಜೆಪಿ ಪ್ರಮುಖರಾದ ಜಗದೀಶ್ ಶೇಣವ, ಪೂಜಾ ಪೈ, ಹರಿಕೃಷ್ಣ ಬಂಟ್ವಾಳ, ಸುಲೋಚನಾ ಜಿ.ಕೆ. ಭಟ್ ಮತ್ತಿತರರು ಉಪಸ್ಥಿತರಿದ್ದರು.