ಬಜಪೆಯ ಸ್ಯೆ ಗಾರ್ಡನ್ ನಲ್ಲಿ ಇತ್ತೀಚೆಗೆ ನಡೆದ ಬಜಪೆ ಹಾಗೂ ಕಿನ್ನಿಗೋಳಿ ಪಟ್ಟಣ ಪಂಚಾಯಿತಿಯ ಚುನಾಯಿತ ಅಭ್ಯರ್ಥಿಗಳಿಗೆ ಬಿಜೆಪಿಯ ಮೂಲ್ಕಿ-ಮೂಡಬಿದಿರೆ ಮಂಡಲ ವತಿಯಿಂದ ನಡೆದ ಅಭಿನಂದನಾ ಸಮಾರಂಭ
ಕನ್ನಡಪ್ರಭ ವಾರ್ತೆ ಮೂಲ್ಕಿ
ರಾಜ್ಯದಲ್ಲಿ ಇತ್ತೀಚೆಗೆ ನಡೆದ ಕಿನ್ನಿಗೋಳಿ, ಬಜಪೆ ಸೇರಿದಂತೆ ನಾಲ್ಕು ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟ ಆಡಳಿತಕ್ಕೆ ಜನತೆ ತಕ್ಕ ಉತ್ತರ ನೀಡಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ತನಕ ಕಾರ್ಯಕರ್ತರು ವಿರಮಿಸಬಾರದು ಎಂದು ಸಂಸದ ಕ್ಯಾಪ್ತನ್ ಬೃಜೇಶ್ ಚೌಟ ಹೇಳಿದರು.ಬಜಪೆಯ ಸ್ಯೆ ಗಾರ್ಡನ್ ನಲ್ಲಿ ಇತ್ತೀಚೆಗೆ ನಡೆದ ಬಜಪೆ ಹಾಗೂ ಕಿನ್ನಿಗೋಳಿ ಪಟ್ಟಣ ಪಂಚಾಯಿತಿಯ ಚುನಾಯಿತ ಅಭ್ಯರ್ಥಿಗಳಿಗೆ ಬಿಜೆಪಿಯ ಮೂಲ್ಕಿ-ಮೂಡಬಿದಿರೆ ಮಂಡಲ ವತಿಯಿಂದ ನಡೆದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಕಿನ್ನಿಗೋಳಿ ಮತ್ತು ಬಜಪೆ ಪಟ್ಟಣ ಪಂಚಾಯಿತಿಯ ವಿಜೇತ ಅಭ್ಯರ್ಥಿಗಳನ್ನು ಗೌರವಿಸಲಾಯಿತು. ಈ ಸಂದರ್ಭ ಶಾಸಕ ಉಮಾನಾಥ ಕೋಟ್ಯಾನ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮಂಡಲಾಧ್ಯಕ್ಷ ದಿನೇಶ್ ಪುತ್ರನ್, ಕಾರ್ಯದರ್ಶಿ ಹರಿಪ್ರಸಾದ್, ರಂಜಿತ್ ಪೂಜಾರಿ ತೋಡಾರ್, ಜಿಲ್ಲಾ ಉಪಾಧ್ಯಕ್ಷ ಶಾಂತಿ ಪ್ರಸಾದ್ ಹೆಗ್ಡೆ, ಸುನೀಲ್ ಅಳ್ವ, ಕಿನ್ನಿಗೋಳಿ ಮಹಾ ಶಕ್ತಿ ಕೇಂದ್ರ ಅಧ್ಯಕ್ಷ ಅಭಿಲಾಷ್ ಶೆಟ್ಟಿ ಕಟೀಲ್, ಬಜಪೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಿಜಯ್ ಕೆಂಜಾರ್, ಜಿಲ್ಲಾ ಯುವ ಮೋರ್ಚದ ಕಾರ್ಯದರ್ಶಿ ಭರತ್ ರಾಜ್ ಕೃಷ್ಣಾಪುರ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು. ಗೋಪಾಲ ಶೆಟ್ಟಿಗಾರ್ ಮತ್ತು ವಿನೋದ್ ಸಾಲ್ಯಾನ್ ಬೆಳ್ಳಾಯರು ಕಾರ್ಯಕ್ರಮ ನಿರೂಪಿಸಿದರು. ಮಂಡಲಾಧ್ಯಕ್ಷ ದಿನೇಶ್ ಪುತ್ರನ್ ಸ್ವಾಗತಿಸಿದರು.ವಿಜಯೋತ್ಸವ ಮೆರವಣಿಗೆ:
ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ವಿಜಯೋತ್ಸವಕ್ಕೆ ಪುನರೂರು ದ್ವಾರದ ಬಳಿ ಶಾಸಕ ಉಮಾನಾಥ ಕೋಟ್ಯಾನ್ ಚಾಲನೆ ನೀಡಿದರು. ಪುನರೂರುವಿನಿಂದ ರಂಭಗೊಂಡು ಕಟೀಲು ದೇವಸ್ಥಾನದವರೆಗೆ ವಿಜಯೋತ್ಸವ ಮೆರವಣಿಗೆ ನಡೆಯಿತು. ಬಜಪೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ವಿಜಯೋತ್ಸವವು ಮರವೂರಿನಿಂದ ಪ್ರಾರಂಭಗೊಂಡು ಸ್ವಾಮಿಲಪದವು ಜಂಕ್ಷನ್ ನಲ್ಲಿ ಸಂಪನ್ನಗೊಂಡಿತು. ಬಳಿಕ ಬಜಪೆ ಸೈ ಗಾರ್ಡನ್ ಸಭಾಭವನದಲ್ಲಿ ಅಭಿನಂದನಾ ಸಭೆ ನಡೆಯಿತು.(ಚಿತ್ರ: 4ಕಿನ್ನಿಗೋಳಿ ಬಿಜೆಪಿ4)