ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 125 ಆರೋಗ್ಯ ಮತ್ತು ಉಪ ಕೇಂದ್ರವನ್ನು ಪ್ರಾರಂಭಿಸಲಾಗುತ್ತಿದ್ದು, ಪ್ರತಿಯೊಂದು ಕೇಂದ್ರಕ್ಕೆ 65 ಲಕ್ಷ ರೂ. ಅನುದಾನ ಬಿಡುಗಡೆ
ಮೂಲ್ಕಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 125 ಆರೋಗ್ಯ ಮತ್ತು ಉಪ ಕೇಂದ್ರವನ್ನು ಪ್ರಾರಂಭಿಸಲಾಗುತ್ತಿದ್ದು, ಪ್ರತಿಯೊಂದು ಕೇಂದ್ರಕ್ಕೆ 65 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗುತ್ತಿದೆ ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು.
ಮೂಲ್ಕಿ ಸಮೀಪದ ಅತಿಕಾರಿ ಬೆಟ್ಟು ಗ್ರಾಪಂ ವ್ಯಾಪ್ತಿಯ ಶಿಮಂತೂರು ಗ್ರಾಮದಲ್ಲಿ 65 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಆರೋಗ್ಯ ಮತ್ತು ಕ್ಷೇಮ ಕೇಂದ್ರಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ನರೇಂದ್ರ ಮೋದಿಯವರು ಗ್ರಾಮೀಣ ಪ್ರದೇಶದ ಅಭಿವೃದ್ದಿಗಾಗಿ ವಿಶೇಷ ಯೋಜನೆಗಳನ್ನು ಹಮ್ಮಿಕೊಂಡಿದ್ದು, ಸ್ವ ಉದ್ಯೋಗಕ್ಕೆ ಕೂಡ ಒತ್ತು ನೀಡುತ್ತಿದ್ದಾರೆ, 15 ನೇ ಹಣಕಾಸು ಯೋಜನೆಯಡಿ ಗ್ರಾಪಂಗಳಿಗೆ ನೇರ ಅನುದಾನ ನೀಡುವ ಕಾರಣ ಸಾಕಷ್ಟು ಗ್ರಾಪಂ ವ್ಯಾಪ್ತಿಯಲ್ಲಿ ಅಭಿವೃದ್ದಿ ಕಾರ್ಯಗಳು ನಡೆಯುತ್ತಿವೆ ಎಂದು ತಿಳಿಸಿದರು.ಶಾಸಕ ಉಮಾನಾಥ ಕೋಟ್ಯಾನ್, ಗುತ್ತಿನಾರ್ ಸುಧಾಕರ ಶೆಟ್ಟಿ ದೆಪ್ಪುಣಿಗುತ್ತು, ಅತಿಕಾರಿಬೆಟ್ಟು ಗ್ರಾಪಂ ಅಧ್ಯಕ್ಷೆ ಶಶಿಕಲಾ, ಗ್ರಾಪಂ ಉಪಾಧ್ಯಕ್ಷ ಮನೋಹರ್ ಕೋಟ್ಯಾನ್, ಸದಸ್ಯರಾದ ಪದ್ಮಿನಿ ವಿಜಯ ಕುಮಾರ್ ಶೆಟ್ಟಿ, ಜಯ ಕುಮಾರ್ ಮಟ್ಟು, ವೇದಾವತಿ, ಗೀತಾ, ಕೃಷ್ಣ ಶೆಟ್ಟಿಗಾರ್, ಜನಾನಂದ ಶೆಟ್ಟಿ ತಿಂಗೊಳೆ ಮನೆ, ಮಾಜಿ ಸದಸ್ಯ ಹರೀಶ್ ಶೆಟ್ಟಿ, ಬಿಜೆಪಿ ನಾಯಕರಾದ ಸುನಿಲ್ ಅಳ್ವ, ರಂಗನಾಥ ಶೆಟ್ಟಿ, ವಿಠಲ ಎನ್.ಎಂ., ಲಕ್ಷಣ್ ಸಾಲ್ಯಾನ್ ಪುನರೂರು, ಭಾನುಮತಿ ಶೆಟ್ಟಿ ಕಕ್ವಗುತ್ತು, ರವೀಶ್ ಕಾಮತ್, ಗುತ್ತಿಗೆದಾರ ಅವಿನಾಶ್ ಅಂಚನ್, ಎಂಜಿನೀಯರ್ ಪ್ರವೀಣ್ ಮತ್ತಿತರರು ಉಪಸ್ಥಿತರಿದ್ದರು.