ತುಳುನಾಡು ವಿಶೇಷ ಪ್ರದೇಶ. ಪ್ರಧಾನಿ ನರೇಂದ್ರ ಮೋದಿ ‘ವಿಕಾಸ್ ಬಿ ವಿರಾಸತ್ ಬಿ’ ಎಂದಿದ್ದಾರೆ, ಅದಕ್ಕೆ ಆದರ್ಶ ತುಳುನಾಡು. ನಮ್ಮ ನೆಲದ ಸಂಸ್ಕೃತಿಯನ್ನು ಅಭಿವೃದ್ಧಿ ಜೊತೆಗೆ ಉಳಿಸುವ ಕೆಲಸ ಯಾವ ರೀತಿ ನಡೆಯುತ್ತಿದೆ ಎನ್ನುವುದಕ್ಕೆ ಇಂದಿನ ಪಿಲಿಪರ್ಬ ಉದಾಹರಣೆ ಎಂದು ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದರು.
ಮಂಗಳೂರು: ತುಳುನಾಡು ವಿಶೇಷ ಪ್ರದೇಶ. ಪ್ರಧಾನಿ ನರೇಂದ್ರ ಮೋದಿ ‘ವಿಕಾಸ್ ಬಿ ವಿರಾಸತ್ ಬಿ’ ಎಂದಿದ್ದಾರೆ, ಅದಕ್ಕೆ ಆದರ್ಶ ತುಳುನಾಡು. ನಮ್ಮ ನೆಲದ ಸಂಸ್ಕೃತಿಯನ್ನು ಅಭಿವೃದ್ಧಿ ಜೊತೆಗೆ ಉಳಿಸುವ ಕೆಲಸ ಯಾವ ರೀತಿ ನಡೆಯುತ್ತಿದೆ ಎನ್ನುವುದಕ್ಕೆ ಇಂದಿನ ಪಿಲಿಪರ್ಬ ಉದಾಹರಣೆ ಎಂದು ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದರು.ಅವರು ಭಾನುವಾರ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನದಲ್ಲಿ ಹಾಗೂ ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ನಗರದ ಕೇಂದ್ರ ಮೈದಾನದಲ್ಲಿ ‘ಕುಡ್ಲದ ಪಿಲಿಪರ್ಬ-2026’ ಸೀಸನ್- 5 ಉದ್ಘಾಟಿಸಿ ಮಾತನಾಡಿದರು.
ಪಿಲಿಪರ್ಬ ಭಕ್ತಿ, ಶ್ರದ್ಧೆ, ನಂಬಿಕೆಯ ಭಾಗ. ಇದನ್ನು ಮುಂದಿನ ಪೀಳಿಗೆಗೆ ಉಳಿಸುವ ದೊಡ್ಡ, ಅಪರೂಪದ ವೇದಿಕೆ ಇದಾಗಿದೆ. ಸಾಂಪ್ರದಾಯಿಕ ಕಲೆಯಾಗಿರುವ ಈ ಹುಲಿವೇಷಕ್ಕೆ ಇಂದು ಸ್ಪರ್ಧಾಕೂಟದ ಸ್ಪರ್ಶ ಲಭಿಸಿದೆ ಎಂದರು.ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ತುಳುನಾಡಿನ ಸಂಸ್ಕೃತಿಯನ್ನು ಉಳಿಸಿ ಇಲ್ಲಿನ ಆಚಾರ-ವಿಚಾರಗಳನ್ನು ದೇಶ-ವಿದೇಶಕ್ಕೆ ವಿಸ್ತರಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸುತ್ತಿದೆ. ಅದರಂತೆ ಪಿಲಿಪರ್ಬವನ್ನು ವಿಶೇಷ ರೀತಿಯಲ್ಲಿ ಆಯೋಜಿಸಿ, ಅದರಲ್ಲೂ ಹೊಸ ಹೊಸ ಚಿಂತನೆ, ಪ್ರಯತ್ನಗಳು ನಡೆಯುತ್ತಿದೆ. ವಿನೂತನ ಶೈಲಿಯ ಹುಲಿವೇಷ ಸ್ಪರ್ಧೆಗೂ ಚಿಂತನೆ ನಡೆದಿದೆ ಎಂದರು.
ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷ ಗಿರಿಧರ್ ಶೆಟ್ಟಿ, ಅಧ್ಯಕ್ಷ ದಿವಾಕರ್ ಪಾಂಡೇಶ್ವರ, ಪ್ರಮುಖರಾದ ನರೇಶ್ ಶೆಣೈ, ಲಲಿತ್ ಮೆಂಡನ್, ಕಿರಣ್ ಶೆಣೈ, ಚೇತನ್ ಕಾಮತ್, ಜಗದೀಶ್ ಕದ್ರಿ, ಅಶ್ವಿತ್ ಕೊಟ್ಟಾರಿ, ನರೇಶ್ ಪ್ರಭು, ಸಹಾನ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಮಂಡಲದ ಅಧ್ಯಕ್ಷ ರಮೇಶ್ ಕಂಡೆಟ್ಟು ಮತ್ತಿತರರು ಇದ್ದರು.ಆರ್ಜೆ ಅಭಿಷೇಕ್ ನಿರೂಪಿಸಿದರು.11 ತಂಡಗಳಿಂದ ಪ್ರದರ್ಶನ: ಪಿಲಿಪರ್ಬದಲ್ಲಿ ಹನುಮಾನ್ ಟೈಗರ್ಸ್ ಉಪ್ಪಳ, ಪಾಂಡೇಶ್ವರ ಶಾರದಾ ಹುಲಿ, ಶಿವಶಕ್ತಿ ಟೈಗರ್ಸ್ ಕುಂಜತ್ತೂರು ಮಂಜೇಶ್ವರ, ಕೊಡಿಯಾಲ್ ಬೈಲ್ ಫ್ರೆಂಡ್ಸ್ ಲೆಜೆಂಡ್ ಟೈಗರ್ಸ್, ಪೊಳಲಿ ದ ಕಿಂಗ್ ಟೈಗರ್ಸ್ ರಾಜ್ ಫ್ರೆಂಡ್ಸ್, ಫ್ರೆಂಡ್ಸ್ ಬಪ್ಪಲ್ ಶ್ರೀ ದುರ್ಗಾಪರಮೇಶ್ವರಿ ಹುಲಿ, ಟ್ಯಾಲೆಂಟ್ ಟೈಗರ್ಸ್ ಎಂವೈಬಿ ಕಚ್ಚೂರು ಮಾಲ್ತಿದೇವಿ ಅಪ್ಪೆನ ಮೋಕೆದ ಜೋಕುಲು, ಫ್ರೆಂಡ್ಸ್ ಅಂಗಾರಗುಡ್ಡೆ ಟೈಗರ್ಸ್ ಮೂಲ್ಕಿ, ಪುರಲ್ದ ಅಪ್ಪೆನ ಮೋಕೆದ ಬೊಳ್ಳಿಲು ಪೊಳಲಿ ಟೈಗರ್ಸ್, ನಂದಿಗುಡ್ಡ ಫ್ರೆಂಡ್ಸ್ ಹುಲಿ ಬಾಬುಗುಡ್ಡ ಹಾಗೂ ಕಾರ್ಕಳ ಟೈಗರ್ಸ್ ಪ್ರಶಾಂತ್ ಕಾಮತ್ ಅಭಿಮಾನಿ ಬಳಗ ತಂಡಗಳು ಕ್ರಮವಾಗಿ ಪ್ರದರ್ಶನ ನೀಡಿದರು.
----