ಶರನ್ನವರಾತ್ರಿ ಮತ್ತು ದಸರಾ ಕಾರ್ಯಕ್ರಮದಲ್ಲಿ ಶ್ರೀದೇವಿ ಪುರಾಣ ಪ್ರವಚನದೊಂದಿಗೆ ನಾಡಿನ ವಿವಿಧ ಮಠಾಧೀಶರಿಂದ ಉಪದೇಶಾಮೃತಗಳು, ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸಗಳು ನಡೆಯಲಿವೆ. ಪೋಷಕರು ಮಕ್ಕಳೊಂದಿಗೆ ಪಾಲ್ಗೊಳ್ಳಬೇಕು ಎಂದು ಡಾ.ಒಡೆಯರ್‌ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದ್ದಾರೆ.

ಹೊನ್ನಾಳಿ: ಶರನ್ನವರಾತ್ರಿ ಮತ್ತು ದಸರಾ ಕಾರ್ಯಕ್ರಮದಲ್ಲಿ ಶ್ರೀದೇವಿ ಪುರಾಣ ಪ್ರವಚನದೊಂದಿಗೆ ನಾಡಿನ ವಿವಿಧ ಮಠಾಧೀಶರಿಂದ ಉಪದೇಶಾಮೃತಗಳು, ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸಗಳು ನಡೆಯಲಿವೆ. ಪೋಷಕರು ಮಕ್ಕಳೊಂದಿಗೆ ಪಾಲ್ಗೊಳ್ಳಬೇಕು ಎಂದು ಡಾ.ಒಡೆಯರ್‌ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು.

ಪಟ್ಟಣದ ಹಿರೇಕಲ್ಮಠದಲ್ಲಿ ಭಾನುವಾರ ರಾತ್ರಿ ಹಮ್ಮಿಕೊಂಡಿದ್ದ ಶರನ್ನವರಾತ್ರಿ ಮತ್ತು ದಸರಾ ಮಹೋತ್ಸದ ಕಾರ್ಯಕ್ರಮದ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ದಸರಾದಲ್ಲಿ ಕಲಾವಿದರಿಂದ ಹಾಗೂ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಅನಾವರಣಗೊಳ್ಳುತ್ತವೆ. ಇದರಿಂದ ನೆತ್ತಿಗೆ ಜ್ಞಾನದ ಬುತ್ತಿಯೊಂದಿಗೆ ಮನಸ್ಸಿಗೆ ಮುದು ನೀಡುವ ವ್ಯವಸ್ಥೆ ಆಗುತ್ತದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಮುಷ್ಟೂರು ಮಠದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ರಾಜ್ಯದಲ್ಲಿ ಹಿಂದೆಂದೂ ಕಾಣದಂತಹ ಭೀಕರ ಬರಗಾಲವಿದೆ. ಇಂದಿನ ರಾಜಕೀಯ ನಾಯಕರು ಎಚ್ಚೆತ್ತು ಕೆಲಸ ಮಾಡಬೇಕು. ರಾಜ್ಯದಲ್ಲಿ ಅನಿಶ್ಚಿತತೆ ಕಾಡುತ್ತಿದೆ, ಆಳುವವರಲ್ಲಿ ಹಾಗೂ ಆಳಿಸಿಕೊಳ್ಳುವವರಲ್ಲಿ ಉತ್ತಮ ಬಾಂಧವ್ಯವಿಲ್ಲದೇ ಸಮಾಜ ಹಾಳಾಗುವ ಸ್ಥಿತಿಗೆ ತಲುಪದೆ ಎಂದು ವಿಷಾದ ವ್ಯಕ್ತಪಡಿಸಿದರು.

ಕೆಎಂಎಫ್ ನಿರ್ದೇಶಕ ಬಸವರಾಜಪ್ಪ ಹನುಮನಹಳ್ಳಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಬಸವರಾಜಪ್ಪ, ಅಖಿಲ ಭಾರತೀಯ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷ ಚನ್ನವೀರಪ್ಪಗೌಡ, ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ಎಚ್.ಎ. ಉಮಾಪತಿ ಮಾತನಾಡಿದರು.

ಉಪನ್ಯಾಸಕ ಮಂಜುನಾಥ ಗೊಲ್ಲರಹಳ್ಳಿ ಉಪನ್ಯಾಸ ನೀಡಿದರು. ಮಂಜುನಾಥ ದೇವರು ಶ್ರೀದೇವಿ ಪುರಾಣ ಪ್ರವಚನ ಮಾಡಿದರು. ಗಣ್ಯರಿಗೆ ಶ್ರೀಗಳಿಂದ ಗುರುರಕ್ಷೆ ನಡೆಯಿತು. ಹಿರಿಯ ಮುಖಂಡರಾದ ಗಂಗಾಧರಯ್ಯ, ದಾನಪ್ಪ ಸೇರಿದಂತೆ ಅನೇಕರು ಇದ್ದರು.

ನಿಜಗುಣ ಶಿವಯೋಗಿ ಶಾಸ್ತ್ರಿ ವೇದಘೋಷ ನಡೆಸಿಕೊಟ್ಟರು. ಕೋರಿ ಮಲ್ಲಿಕಾರ್ಜುನಪ್ಪ ಸ್ವಾಗತಿಸಿ, ಶ್ರೀ ಚನ್ನಪ್ಪಸ್ವಾಮಿ ವಿದ್ಯಾಪೀಠದ ಕಾರ್ಯದರ್ಶಿ ಚನ್ನಯ್ಯಬೆನ್ನೂರುಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ನಿವೃತ್ತ ಮುಖ್ಯೋಪಾಧ್ಯಾಯ ಎಂ.ಪಿ.ಎಂ. ವಿಜಯಾನಂದ ಕುಮಾರ ಸ್ವಾಮಿ ನಿರೂಪಿಸಿದರು. ಸುರಹೊನ್ನೆ ಶ್ರೀ ಒಡೆಯರ್ ಚಂದ್ರಶೇಖರ ಶಿವಾಚಾರ್ಯ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

- - -

-12ಎಚ್.ಎಲ್.ಐ2: