ಭಾರತ ಸರ್ಕಾರವು ಕೇಂದ್ರ ಸರ್ಕಾರಿ ನೌಕರರು ಮತ್ತು ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ವರ್ಷ ನಡೆಸುವ ಅಖಿಲ ಭಾರತ ನಾಗರಿಕ ಸೇವಾ ಅಥ್ಲೆಟಿಕ್ಸ್ ಕ್ರೀಡಾಕೂಟದ 2025-26 ನೇ ಸಾಲಿನ ಸ್ಪರ್ಧೆಯಲ್ಲಿ ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕು ಕಾಶಿಪಟ್ಣ ಸರ್ಕಾರಿ ಪ್ರೌಢಶಾಲೆಯ ಸಮಾಜ ವಿಜ್ಞಾನ ಶಿಕ್ಷಕಿ ಸೌಮ್ಯಾ ಕೆ. ಅವರು ಕಂಚಿನ ಪದಕ ಗಳಿಸಿದ್ದಾರೆ.
ಬೆಳ್ತಂಗಡಿ: ಭಾರತ ಸರ್ಕಾರವು ಕೇಂದ್ರ ಸರ್ಕಾರಿ ನೌಕರರು ಮತ್ತು ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ವರ್ಷ ನಡೆಸುವ ಅಖಿಲ ಭಾರತ ನಾಗರಿಕ ಸೇವಾ ಅಥ್ಲೆಟಿಕ್ಸ್ ಕ್ರೀಡಾಕೂಟದ 2025-26 ನೇ ಸಾಲಿನ ಸ್ಪರ್ಧೆಯಲ್ಲಿ ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕು ಕಾಶಿಪಟ್ಣ ಸರ್ಕಾರಿ ಪ್ರೌಢಶಾಲೆಯ ಸಮಾಜ ವಿಜ್ಞಾನ ಶಿಕ್ಷಕಿ ಸೌಮ್ಯಾ ಕೆ. ಅವರು ಕಂಚಿನ ಪದಕ ಗಳಿಸಿದ್ದಾರೆ.ಬಿಹಾರದ ಪಾಟ್ನಾದಲ್ಲಿರುವ ಪಾಟಲಿಪುತ್ರ ಕ್ರೀಡಾಂಗಣದಲ್ಲಿ ಡಿ. 13ರಿಂದ 15ವರೆಗೆ ನಡೆದ ಅಥ್ಲೆಟಿಕ್ ಸ್ಪರ್ಧೆಯಲ್ಲಿ ಅವರು ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದರು. ಕೂಟದ 400 ಮೀಟರ್ ಓಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಗಳಿಸಿದ ಅವರು ಕಂಚಿನ ಪದಕ ಪಡೆದಿದ್ದಾರೆ.ಈ ಬಾರಿ ಕರ್ನಾಟಕ ರಾಜ್ಯಕ್ಕೆ ದೊರೆತ ಆರು ಪದಕಗಳಲ್ಲಿ ದಕ್ಷಿಣ ಕನ್ನಡ ಪಡೆದ ಏಕೈಕ ಪದಕವಾಗಿದ್ದು, ಬೆಳ್ತಂಗಡಿ ತಾಲೂಕಿನಿಂದ ಸ್ಪರ್ಧಿಸಿ ಗೆಲುವು ಪಡೆದ ಮೊದಲ ದಾಖಲೆಯಾಗಿದೆ.ಶಿಕ್ಷಕಿ ಸೌಮ್ಯಾ ಕೆ. ಅವರು ಇಂದಬೆಟ್ಟು ಇರ್ತಿಲಾಲು ನಿವಾಸಿ, ಸಹಕಾರಿ ಧುರೀಣ, ಬಂಗಾಡಿ ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷ ಎನ್. ಲಕ್ಷ್ಮಣ ಗೌಡ ಅವರ ಪುತ್ರಿ.