ಸಾರಾಂಶ
ಕನ್ನಡಪ್ರಭ ವಾರ್ತೆ ಹೊನ್ನಾಳಿ
ಅವಳಿ ತಾಲೂಕು ಕುರುಬ ಸಂಘದ ವತಿಯಿಂದ ಪಟ್ಟಣದ ಟಿ.ಬಿ.ವೃತ್ತದಲ್ಲಿ 9 ಅಡಿ ಎತ್ತರದ ₹10 ಲಕ್ಷ ವೆಚ್ಚದ ಕನಕದಾಸರ ಕಂಚಿನ ಪ್ರತಿಮೆ ಫೆ.3ರ ಶನಿವಾರ ಮಧ್ಯಾಹ್ನ 3 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕನಕ ಪ್ರತಿಮೆ ಅನಾವರಣಗೊಳಿಸಲಿದ್ದಾರೆ ಎಂದು ಅವಳಿ ತಾಲೂಕು ಕುರುಬ ಸಂಘದ ಗೌರವಾಧ್ಯಕ್ಷ ಹಾಗೂ ಸ್ವಾಗತ ಸಮಿತಿ ಅಧ್ಯಕ್ಷ ಬಿ.ಸಿದ್ದಪ್ಪ ಹೇಳಿದರು.ಪ್ರವಾಸಿ ಮಂದಿರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಟ್ಟಣದ ಖಾಸಗಿ ಬಸ್ ನಿಲ್ಲಾಣದಲ್ಲಿನ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಕನಕ ಪ್ರತಿಮೆ ಅನಾವರಣಗೊಳಿಸಲಿದ್ದಾರೆ ಸಮಾರಂಭದ ಅಧ್ಯಕ್ಷತೆ ಶಾಸಕ ಡಿ.ಜಿ.ಶಾಂತನಗೌಡ ವಹಿಸಲಿದ್ದಾರೆ ಎಂದರು.
ಮುಖ್ಯಮಂತ್ರಿಯವರು ಆಗಮಿಸುವ ಮುನ್ನ ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಟಿ.ಬಿ.ವೃತ್ತದವರಗೆ ವಿವಿಧ ಮಠಾಧೀಶರ 101 ಕುಂಭ ಹಾಗೂ ವಿವಿಧ ವಾದ್ಯಮೇಳಗಳೊಂದಿಗೆ ಮೆರವಣಿಗೆಯಲ್ಲಿ ಕರೆತಂದು ಕನಕ ಪ್ರತಿಮೆಗೆ ಪುಷ್ಪಾರ್ಚನೆ ನಡೆಯಲಿದೆ. ಕನಕದಾಸರ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮದ ಸಾನ್ನಿಧ್ಯವನ್ನು ಕಾಗಿನಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮಿಜಿ, ಕಾಗಿನಲೆ ಕನಕ ಗುರುಪೀಠದ ಹೊಸದುರ್ಗ ಶಾಖಾ ಮಠದ ಶ್ರೀಈಶ್ವರಾನಂದಪುರಿ ಸ್ವಾಮೀಜಿ, ಕಾಗಿನಲೆ ಕನಕ ಗುರುಪೀಠದ ತಿಂಥಿಣಿ ಬ್ರಿಜ್ ಶಾಖಾ ಮಠದ ಶ್ರೀ ಸಿದ್ದರಾನಂದಪುರಿ ಸ್ವಾಮೀಜಿ, ಸಾಣೇಹಳ್ಳಿ ಡಾ.ಪಂಡಿತಾರಾಧ್ಯ ಸ್ವಾಮೀಜಿ, ಹಿರೇಕಲ್ಮಠದ ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಸ್ವಾಮೀಜಿ, ರಾಜನಹಳ್ಳಿ ವಾಲ್ಮೀಕಿ ಗುರು ಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ, ಭೋವಿಪೀಠ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಮಾದಾರ ಚನ್ನಯ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು ಎಂದು ತಿಳಿಸಿದರು.ಸಮಾರಂಭದ ಉದ್ಘಾಟನೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಚಿವರಾದ ಸತೀಶ್ ಜಾರಕಿಹೊಳಿ, ಬೈರತಿ ಸುರೇಶ್, ಎಚ್.ಸಿ.ಮಹಾದೇವಪ್ಪ, ಮಧು ಬಂಗಾರಪ್ಪ, ಜಮೀರ್ ಅಹ್ಮದ್, ಸಂತೋಷ್ ಲಾಡ್, ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ, ಸಂಸದ ಜಿ.ಎಂ.ಸಿದ್ದೇಶ್ವರ್, ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ಕೆ.ಎಂ.ರಾಮಚಂದ್ರಪ್ಪ, ಇನ್ ಸೈಟ್ ತರಬೇತಿ ಕೇಂದ್ರದ ಅಧ್ಯಕ್ಷ ವಿನಯ್ ಕುಮಾರ್, ಶಾಸಕರಾದ ದೇವೇಂದ್ರಪ್ಪ, ಬಸವಂತಪ್ಪ, ಶಿವಗಂಗಾ ಬಸವರಾಜು, ಬಿ.ಪಿ.ಹರೀಶ್, ಲತಾಮಲ್ಲಿಕಾರ್ಜುನ್, ಡಿ.ಎಸ್.ಅರುಣ್ ಕುಮಾರ್, ವಿಶೇಷ ಆಹ್ವಾನಿತರಾಗಿ ಮಾಜಿ ಸಚಿವ ಎಂ.ಟಿ.ಬಿ.ನಾಗರಾಜ್ , ಶಾಸಕ ಭೈರತಿ ಬಸವರಾಜ್, ಎಚ್.ವಿಶ್ವನಾಥ್, ಎಚ್.ಎಂ.ರೇವಣ್ಣ, ಕೆ.ಎಸ್.ಈಶ್ವರಪ್ಪ, ಶಿವಮೊಗ್ಗ ಎಂ.ಶ್ರೀಕಾಂತ್, ಮಾಜಿ ಶಾಸಕರಾದ ಡಾ.ಡಿ.ಬಿ.ಗಂಗಪ್ಪ,ಎಸ್.ರಾಮಪ್ಪ,ಆರ್.ಪ್ರಸನ್ನಕುಮಾರ್, ಆಯನೂರು ಮಂಜುನಾಥ್ ಹಾಗೂ ತಾಲೂಕಿನ ಎಲ್ಲಾ ಸಮಾಜದ ಅಧ್ಯಕ್ಷರು ಹಾಗೂ ಸಮಾಜದ ಬಂಧುಗಳು-ಮುಖಂಡರು ಭಾಗವಹಿಸುವರು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಕುರುಬ ಸಮಾಜದ ಅಧ್ಯಕ್ಷರಾದ ಎಂ.ಎಸ್.ಪಾಲಾಕ್ಷಪ್ಪ, ಮರಿಕನ್ನಪ್ಪ,ಎಚ್.ಎ.ಉಮಾಪತಿ, ಎಚ್.ಬಿ.ಶಿವಯೋಗಿ, ದಿಡಗೂ ಪಾಲಾಕ್ಷಪ್ಪ, ಮರುಳ ಸಿದ್ದಪ್ಪ, ಶ್ರೀನಿವಾಸ್, ಪುರಸಭಾ ಸದಸ್ಯ ಬಾಬು ಹೋಬಳದಾರ್, ರಂಜಿತ್ ರಾಜು ಕಣಗಣ್ಣಾರ್, ಪಂಕಜ ಅರುಣ್ ಕುಮಾರ್, ಸೌಮ್ಯಾ ಇತರರಿದ್ದರು.