ತರೀಕೆರೆಪಟ್ಟಣದ ಸೂಕ್ತ ಸ್ಥಳದಲ್ಲಿ ಶ್ರೀ ಕನಕದಾಸರ ಕಂಚಿನ ಪ್ರತಿಮೆ ಸ್ಥಾಪಿಸಲಾಗುವುದು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.

101ನೇ ವರ್ಷದ ರಾಜ್ಯ ಮಟ್ಟದ ದಸರಾ ಬಯಲು ಜಂಗಿ ಕುಸ್ತಿ ಸಮಾರೋಪ ಸಮಾರಂಭ

ಕನ್ನಡಪ್ರಭ ವಾರ್ತೆ, ತರೀಕೆರೆ

ಪಟ್ಟಣದ ಸೂಕ್ತ ಸ್ಥಳದಲ್ಲಿ ಶ್ರೀ ಕನಕದಾಸರ ಕಂಚಿನ ಪ್ರತಿಮೆ ಸ್ಥಾಪಿಸಲಾಗುವುದು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.

ಶ್ರೀ ಗುರು ರೇವಣ ಸಿದ್ದೇಶ್ವರ ಕುರುಬರ ಸಮಾಜ, ಶ್ರೀ ಗುರು ರೇವಣಸಿದ್ದೇಶ್ವರ ಗರಡಿ ಕುಸ್ತಿ ಸಂಘ ತರೀಕೆರೆ, ಪುರಸಭೆ ತರೀಕೆರೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಚಿಕ್ಕಮಗಳೂರು ಮತ್ತು ಎಲ್ಲಾ ಸಮಾಜಗಳ ಸಂಯುಕ್ತಾ ಶ್ರಯದಲ್ಲಿ ಮಲೆನಾಡಿನ ಹೆಬ್ಬಾಗಿಲು ತರೀಕೆರೆ ಪಟ್ಟಣದ ಬಯಲು ರಂಗ ಮಂದಿರದಲ್ಲಿ 101ನೇ ವರ್ಷದ ರಾಜ್ಯ ಮಟ್ಟದ ದಸರಾ ಬಯಲು ಜಂಗಿ ಕುಸ್ತಿ ಸ್ಪರ್ಧೆಗಳ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಶ್ರೀ ಕನಕದಾಸರ ಕಂಚಿನ ಪ್ರತಿಮೆ ಅನಾವರಣಕ್ಕೆ ಮಾಜಿ ಮುಖ್ಯಮಂತ್ರಿ ಎಸ್.ಸಿದ್ದರಾಮಯ್ಯ ಅವರನ್ನು ಅಹ್ವಾನಿಸ ಲಾಗುವುದು. ಮುಂದಿನ ತಿಂಗಳು ತರೀಕೆರೆ ಪಟ್ಟಣಕ್ಕೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿವಿಧ ಅಭಿವೃದ್ಧಿ ಕಾಮ ಗಾರಿಗಳ ಉದ್ಘಾಟನೆ ನೆರವೇರಿಸಲಿದ್ದಾರೆ. ಪಟ್ಟಣದ ಬಯಲು ರಂಗ ಮಂದಿರದಲ್ಲಿ ₹1. 67 ಕೋಟಿಯಲ್ಲಿ ಸುಸಜ್ಜಿತ ಸ್ಟೇಡಿಯಂ ನಿರ್ಮಿಸಲಾಗುವುದು ಎಂದು ಹೇಳಿದರು.

ಶ್ರೀ ಗುರು ರೇವಣ ಸಿದ್ದೇಶ್ವರ ಕುರುಬರ ಸಮಾಜ, ಶ್ರೀ ಗುರು ರೇವಣಸಿದ್ದೇಶ್ವರ ಗರಡಿ ಕುಸ್ತಿ ಸಂಘ ತರೀಕೆರೆ, ಪುರಸಭೆ ತರೀಕೆರೆ ಮತ್ತು ಎಲ್ಲಾ ಸಮಾಜಗಳ ಸಂಯುಕ್ತಾಶ್ರಯದಲ್ಲಿ 101ನೇ ವರ್ಷದ ರಾಜ್ಯ ಮಟ್ಟದ ದಸರಾ ಬಯಲು ಜಂಗಿ ಕುಸ್ತಿ ಕ್ರೀಡಾಕೂಟವು ಲಕ್ಷಾಂತರ ರು.ಮೌಲ್ಯಗಳ ಬಹುಮಾನಗಳೊಂದಿಗೆ ಅತ್ಯಂತ ವಿಜೃಂಭಣೆಯಿಂದ ನೆಡೆದಿರುವುದು ಎಲ್ಲರಿಗೂ ಸಂತೋಷ ತಂದಿದೆ, ತರೀಕೆರೆ, ಅಜ್ಜಂಪುರ, ಶಿವನಿಯಲ್ಲಿ ಗರಡಿ ಮನೆಗಳನ್ನು ಸ್ಥಾಪಿಸಲಾಗುವುದು ಎಂದು ಅವರು ಹೇಳಿದರು.

ಕೆಪಿಸಿಸಿ ಸದಸ್ಯ ಟಿ.ವಿ.ಶಿವಶಂಕರರಪ್ಪ ಮಾತನಾಡಿ 101ನೇ ವರ್ಷದ ದಸರಾ ಬಯಲು ಜಂಗಿ ಕುಸ್ತಿಕ್ರೀಡಾಕೂಟ ವಿಜೃಂಭಣೆಯಿಂದ ನಡೆದಿದೆ ಎಂದು ಹೇಳಿದರು.

ಪುರಸಭಾ ಮಾಜಿ ಅಧ್ಯಕ್ಷ ಟಿ.ಜೆ.ಗೋಪಿಕುಮಾರ್ ಮಾತನಾಡಿ ಎಲ್ಲಾ ಸಮಾಜದವರ ಸಹಕಾರದಿಂದ ಕುಸ್ತಿ ಕ್ರೀಡಾಕೂಟ ಯಶಸ್ವಿಯಾಗಿ ನಡೆದಿದೆ. ಕುಸ್ತಿ ತರಬೇತಿ ಕೇಂದ್ರ ಸ್ಥಾಪಿಸಬೇಕು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಗೆ ಮನವಿ ಮಾಡಿದರು.

ಶ್ರೀ ಗುರು ರೇವಣಸಿದ್ದೇಶ್ವರ ಗರಡಿ ಕುಸ್ತಿ ಸಂಘ ತರೀಕೆರೆ ಅಧ್ಯಕ್ಷ ಟಿ.ಎಸ್.ರಮೇಶ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ಸರ್ವರ ಸಹಕಾರದಿಂದ 101ನೇ ವರ್ಷದ ದಸರಾ ಬಯಲು ಜಂಗಿ ಕುಸ್ತಿ ಸ್ಪರ್ಧೆಗಳು ಯಶಸ್ವಿಯಾಗಿ ನೆಡೆದಿದೆ, ಮೈಸೂರು ಸಂಸ್ಥಾನದ ಮಹಾರಾಜರು, ತರೀಕೆರೆ ಪಾಳ್ಳೆಗಾರ್ ಸರ್ಜಾ ಹನುಮಪ್ಪನಾಯಕರ ನೇತೃತ್ವದಲ್ಲಿ ಕುಸ್ತಿ ಕ್ರೀಡೆಗಳು ಪ್ರಾರಂಭವಾಗಿದೆ. ಇದು ತರೀಕೆರೆ ಹಬ್ಬ. ಇದರ ಯಶಸ್ಸಿಗೆ ಸಹಕರಿಸಿದ ಸರ್ವರಿಗೂ ಕೃತಜ್ಞತೆಗಳು ಎಂದು ಅವರು ಹೇಳಿದರು.

ನಿರ್ದೇಶಕ ಟಿ.ಜಿ.ಶಶಾಂಕ, ಮಾಜಿ ಪುರಸಭಾಧ್ಯಕ್ಷ ಟಿ.ಎಸ್.ಧರ್ಮರಾಜ್ , ಪುರಸಭಾ ಮಾಜಿ ಅಧ್ಯಕ್ಷ ಟಿ.ಎಸ್.ಪ್ರಕಾಶ್ ವರ್ಮ, ಹುಣಸಘಟ್ಟ ಸಮಾಜ ಸೇವಕ ಎಚ್.ಎಂ.ಗೋಪಿಕೃಷ್ಣ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ರವಿಕಿಶೋರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಯು.ಫಾರೂಕ್, ಅಜ್ಜಂಪುರ ಕೃಷ್ಣಮೂರ್ತಿ, ಸಮಾಜ ಸೇವಕರು ರಾಜಪ್ಪ ಸಿ.ಎಂ. ಕರ್ನಾಟಕ ಸರ್ಕಾರದ ಸೆನೆಟ್ ಸದಸ್ಯ ಭರತ್ ಅಂಚೆ, ಅಜ್ಜಂಪುರ ರಂಗಸ್ವಾಮಿ ಮತ್ತಿತರರು ಮಾತನಾಡಿದರು.

ಶ್ರೀ ಗುರು ರೇವಣಸಿದ್ದೇಶ್ವರ ಗರಡಿ ಕುಸ್ತಿ ಸಂಘ ಗೌರವಾಧ್ಯಕ್ಷ ವಗ್ಗಪ್ಪರ ಮಂಜಣ್ಣ, ಉಪಾಧ್ಯಕ್ಷ ಟಿ.ಡಿ.ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಟಿ.ಜಿ.ಹರೀಶ್ ಕುಮಾರ್, ಖಚಾಂಚಿ ಟಿ.ಎನ್.ಸೋಮಶೇಖರಯ್ಯ, ಸಮಿತಿ ಪದಾದಿಕಾರಿಗಳು, ನಿರ್ದೇಶಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

25ಕೆಟಿಆರ್.ಕೆ.1ಃ

ತರೀಕೆರೆಯಲ್ಲಿ ನಡೆದ 101ನೇ ವರ್ಷದ ರಾಜ್ಯ ಮಟ್ಟದ ದಸರಾ ಬಯಲು ಜಂಗಿ ಕುಸ್ತಿ ಸಮಾರೋಪ ಸಮಾರಂಭವನ್ನು ಶಾಸಕ ಜಿ.ಎಚ್.ಶ್ರೀನಿವಾಸ್ ಉದ್ಘಾಟಿಸಿದರು. ಶ್ರೀ ಗುರು ರೇವಣ ಸಿದ್ದೇಶ್ವರ ಗರಡಿ ಕುಸ್ತಿ ಸಂಘ ತರೀಕೆರೆ ಅಧ್ಯಕ್ಷ ಟಿ.ಎಸ್.ರಮೇಶ್ ಮತ್ತಿತರರು ಇದ್ದರು.