ಸಾರಾಂಶ
ಮಹಾಲಿಂಗಪುರ: ಮದಭಾಂವಿ ಗ್ರಾಮದಲ್ಲಿ ೧೧ ಅಡಿ ಎತ್ತರದ ಕಿತ್ತೂರು ಚನ್ನಮ್ಮನ ಬೃಹತ್ ಕಂಚಿನ ಮೂರ್ತಿ ಪ್ರತಿಷ್ಠಾಪನೆ ಅತ್ಯಂತ ವಿಜ್ರಂ ಶನಿವಾರ ಬೆಳಗ್ಗೆ ೧೦ ಗಂಟೆಗೆ ಸ್ಥಳೀಯ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯಲಿದೆ. ಕಾರ್ಯಕ್ರಮಕ್ಕೆ ಸಮಾಜ ಹಾಗೂ ವಿವಿಧ ಸಮಾಜದ ಮುಖಂಡರು, ರಾಜಕೀಯ ನಾಯಕರು, ಸಚಿವರು, ಶಾಸಕರು ಆಗಮಿಸಲಿದ್ದಾರೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಮಹಾಸ್ವಾಮಿಗಳು ತಿಳಿಸಿದರು. ಗುರುವಾರ ಪ್ರತಿಮೆ ಮತ್ತು ಸಭಾ ಕಾರ್ಯಕ್ರಮದ ಸ್ಥಳ ಪರಿಶೀಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ಜಿಲ್ಲಾ ಪಂಚಮಸಾಲಿ ಸಮಾಜದ ಅಧ್ಯಕ್ಷ ಧರೆಪ್ಪ ಸಾಂಗ್ಲಿಕರ ಮಾತನಾಡಿ, ಕಂಚಿನ ಮೂರ್ತಿಯನ್ನು ಗ್ರಾಮದಲ್ಲಿ ಎತ್ತಿನ ಗಾಡಿ ಮತ್ತು ಕುಂಭಮೇಳದೊಂದಿಗೆ ಪುರ ಮೆರವಣಿಗೆ ಹಮ್ಮಿಕೊಳ್ಳಲಾಗಿದ್ದು, ಸಂಗೊಳ್ಳಿ ರಾಯಣ್ಣ ಪ್ರಧಾನ ವೇದಿಕೆಗೆ ಸಭಿಕರನ್ನು ಆಹ್ವಾನಿಸಲಾಗುವುದು. ಸುಮಾರು ೧೫ ಸಾವಿರ ಜನರು ಪಾಲ್ಗೊಳ್ಳುವರು ಎಂದು ಹೇಳಿದರು. ಗ್ರಾಪಂ ಅಧ್ಯಕ್ಷರು ಹಾಗೂ ಸದಸ್ಯರು, ಕಿತ್ತೂರು ರಾಣಿ ಚನ್ನಮ್ಮ ಕಮಿಟಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.