ಸಾರಾಂಶ
ಕನ್ನಡಪ್ರಭ ವಾರ್ತೆ ಕುಂದಾಪುರದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಡೀ ದೇಶವನ್ನು ಸ್ವಚ್ಛವಾಗಿರಿಸಲು ಅಂದು ಪೊರಕೆ ಹಿಡಿದರು. ಇದು ನಂತರ ದೇಶದ ಮೂಲೆ ಮೂಲೆಗಳಲ್ಲಿ ಯುವ ಸಮುದಾಯದಿಂದ ಹಿಡಿದು ವಯೋವೃದ್ಧರು ಆಂದೋಲನವನ್ನಾಗಿಸಿಕೊಂಡಿದ್ದಾರೆ. ಇದು ಸ್ಪಚ್ಛತೆಯ ಹೊಸ ಭಾಷ್ಯ ಬರೆಯುತ್ತಿದೆ ಎಂದು ಉಡುಪಿ-ಚಿಕ್ಕಮಗಳೂರು ಬಿಜೆಪಿ ಲೋಕಸಭಾ ಅಭ್ಯರ್ಥಿ, ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಅವರು ಇಲ್ಲಿನ ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ಇದರ ನೇತೃತ್ವದಲ್ಲಿ ಹಂದಟ್ಟು ಮಹಿಳಾ ಬಳಗ ಕೋಟ, ಮಣೂರು ಫ್ರೆಂಡ್ಸ್, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ ಸಹಯೋಗದೊಂದಿಗೆ ಪರಿಸರಸ್ನೇಹಿ ಸ್ಪಚ್ಛತಾ ಕಾರ್ಯಕ್ರಮಕ್ಕೆ ಭೇಟಿ ನೀಡಿ ಮಾತನಾಡಿದರು.ಕೋಟತಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡಾ. ಕೋಟ ಶಿವರಾಮ ಕಾರಂತ ಥೀಮ್ ಪಾರ್ಕ್ ರಸ್ತೆಯಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮಕ್ಕೆ ಆಗಮಿಸಿದ ಕೋಟ, ಪಂಚವರ್ಣ ಮತ್ತು ಇತರ ಸಹಭಾಗಿ ಸಂಘಟನೆಗಳು ಪ್ರತಿವಾರ ನಡೆಸುವ ಈ ಸಮಾಜಮುಖಿ ಕಾರ್ಯದಿಂದ ಪರಿಸರಪ್ರೇಮಿ ಕಾರಂತರ ಊರಿಗೆ ಹೆಮ್ಮೆಯನ್ನುಂಟು ಮಾಡಿದೆ ಎಂದರು.ಈ ಸಂದರ್ಭ ಪಂಚವರ್ಣ ಯುವಕ ಮಂಡಲ ಅಧ್ಯಕ್ಷ ಅಜಿತ್ ಆಚಾರ್, ಕಾರ್ಯದರ್ಶಿ ಸುಧೀಂದ್ರ ಜೋಗಿ, ಕಾರ್ಯಾಧ್ಯಕ್ಷ ರವೀಂದ್ರ ಕೋಟ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಕಾರ್ಯದರ್ಶಿ ವಸಂತಿ ಹಂದಟ್ಟು, ಸಂಚಾಲಕಿ ಸುಜಾತಾ ಬಾಯರಿ, ಮಣೂರು ಫ್ರೆಂಡ್ಸ್ ಅಧ್ಯಕ್ಷ ದಿನೇಶ್ ಆಚಾರ್, ಕೋಟ ಆಪ್ತಸಹಾಯಕ ರಾಘವೇಂದ್ರ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.