ಹು-ಧಾ ಬಿಆರ್‌ಟಿಎಸ್ ಕಾರಿಡಾರ್‌ನಲ್ಲಿ ಸಂಚಾರ ನಿಯಮ ಉಲ್ಲಂಘಿಸಿ ಅನಧಿಕೃತವಾಗಿ ಸಂಚರಿಸುತ್ತಿದ್ದ ಖಾಸಗಿ ವಾಹನಗಳ ವಿರುದ್ಧ ಗುರುವಾರ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದರು.
ಹುಬ್ಬಳ್ಳಿ:
ಹು-ಧಾ ಬಿಆರ್‌ಟಿಎಸ್ ಕಾರಿಡಾರ್‌ನಲ್ಲಿ ಸಂಚಾರ ನಿಯಮ ಉಲ್ಲಂಘಿಸಿ ಅನಧಿಕೃತವಾಗಿ ಸಂಚರಿಸುತ್ತಿದ್ದ ಖಾಸಗಿ ವಾಹನಗಳ ವಿರುದ್ಧ ಗುರುವಾರ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದರು. ಒಟ್ಟು 53 ಪ್ರಕರಣ ದಾಖಲಿಸಿ ₹26,500 ದಂಡ ವಿಧಿಸಿದ್ದಾರೆ.ನಗರದ ಮಧ್ಯಭಾಗದ ಬಿಆರ್‌ಟಿಎಸ್ ಕಾರಿಡಾರ್‌ನಲ್ಲಿ ಚಿಗರಿ ಬಸ್‌ಗಳು, ಆ್ಯಂಬುಲೆನ್ಸ್ ಹಾಗೂ ನಿಯಮಾನುಸಾರ ಅನುಮತಿ ಹೊಂದಿರುವ ಸರ್ಕಾರಿ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶವಿದೆ. ಆದರೆ, ನಿಯಮ ಉಲ್ಲಂಘಿಸಿ ಕೆಲವು ಖಾಸಗಿ ವಾಹನಗಳು ಕಾರಿಡಾರ್‌ನಲ್ಲಿ ಸಂಚರಿಸುತ್ತಿರುವುದು ಕಂಡುಬಂದಿದೆ. ಇದರಿಂದ ಚಿಗರಿ ಬಸ್‌ಗಳ ಸುಗಮ ಸಂಚಾರಕ್ಕೆ ಅಡಚಣೆಯಾಗುವ ಜತೆಗೆ ಅಪಘಾತಗಳ ಆತಂಕವೂ ಎದುರಾಗಿದೆ.
ಈ ಹಿನ್ನೆಲೆಯಲ್ಲಿ ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಅವರ ಆದೇಶದ ಮೇರೆಗೆ ಸಂಚಾರ ಪೊಲೀಸರು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ. ಟ್ರಾಫಿಕ್ ಎಸಿಪಿ ವೀರೇಶ ಅವರ ನೇತೃತ್ವದಲ್ಲಿ ಗುರುವಾರ ವಿಶೇಷ ಕಾರ್ಯಾಚರಣೆ ನಡೆಸಿ, ಬಿಆರ್‌ಟಿಎಸ್ ಕಾರಿಡಾರ್‌ನಲ್ಲಿ ನಿಯಮ ಮೀರಿ ಸಂಚರಿಸುತ್ತಿದ್ದ ವಾಹನಗಳನ್ನು ತಡೆದು ಪರಿಶೀಲಿಸಲಾಯಿತು. ಮೋಟಾರು ವಾಹನ ಕಾಯ್ದೆಯಡಿ ಒಟ್ಟು 53 ಪ್ರಕರಣ ದಾಖಲಿಸಿ, ₹26,500 ದಂಡ ವಿಧಿಸಲಾಗಿದೆ.ಬಿಆರ್‌ಟಿಎಸ್ ಕಾರಿಡಾರ್‌ನಲ್ಲಿ ಅನಧಿಕೃತ ವಾಹನಗಳ ಸಂಚಾರ ತಡೆಗಟ್ಟಲು ಮುಂದಿನ ದಿನಗಳಲ್ಲಿಯೂ ಇಂತಹ ವಿಶೇಷ ಕಾರ್ಯಾಚರಣೆ ಮುಂದುವರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಸಾರ್ವಜನಿಕರು ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಬಿಆರ್‌ಟಿಎಸ್ ಕಾರಿಡಾರ್‌ನಲ್ಲಿ ಅನುಮತಿಯಿಲ್ಲದೆ ಖಾಸಗಿ ವಾಹನ ಚಲಾಯಿಸಬಾರದು. ನಿಯಮ ಉಲ್ಲಂಘಿಸಿದರೆ ದಂಡ ವಿಧಿಸುವ ಜತೆಗೆ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಸಂಚಾರ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.