ಸಾರಾಂಶ
ಬಿಎಸ್‌ಎಫ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸವದತ್ತಿ ಪಟ್ಟಣದ ಯೋಧ ಮಂಜುನಾಥ ರಾಮಚಂದ್ರ ಕುಂದರಗಿ (33) ಅನಾರೋಗ್ಯದಿಂದ ಬುಧವಾರ ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಗುರುವಾರ ಸಂಜೆ ಸರಕಾರಿ ಗೌರವಗಳೊಂದಿಗೆ ಪಟ್ಟಣದ ಶ್ರೀ ಕುಮಾರೇಶ್ವರ ರುದ್ರಭೂಮಿಯಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗಿದೆ.
ಕನ್ನಡಪ್ರಭ ವಾರ್ತೆ ಸವದತ್ತಿ
ಬಿಎಸ್‌ಎಫ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸವದತ್ತಿ ಪಟ್ಟಣದ ಯೋಧ ಮಂಜುನಾಥ ರಾಮಚಂದ್ರ ಕುಂದರಗಿ (33) ಅನಾರೋಗ್ಯದಿಂದ ಬುಧವಾರ ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಗುರುವಾರ ಸಂಜೆ ಸರಕಾರಿ ಗೌರವಗಳೊಂದಿಗೆ ಪಟ್ಟಣದ ಶ್ರೀ ಕುಮಾರೇಶ್ವರ ರುದ್ರಭೂಮಿಯಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗಿದೆ.2013ರ ಮೇ.22ರಂದು ಬಿಎಸ್‌ಎಫ್ ಪಡೆಯಲ್ಲಿ ಆಯ್ಕೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಯೋಧ ಮಂಜುನಾಥ ಕಳೆದ ವಾರ ಜು.4ರಂದು ರಜೆ ಮೇಲೆ ಸವದತ್ತಿಗೆ ಆಗಮಿಸಿದ್ದ ಎನ್ನಲಾಗಿದೆ. ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜು.12ರಂದು ಧಾರವಾಡದ ಖಾಸಗಿ ಆಸ್ಪತ್ರೆಗೆ ಯೋಧ ಚಿಕಿತ್ಸೆಗಾಗಿ ದಾಖಲಾಗಿದ್ದ. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾರೆ. ಮೃತ ಯೋಧನಿಗೆ ತಾಯಿ ಮತ್ತು ಪತ್ನಿ ಸುಜಾತ ಸೇರಿದಂತೆ ಓರ್ವ ಪುತ್ರ ಮತ್ತು ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಗಳಿದ್ದಾರೆ.
ತಹಸೀಲ್ದಾರ್ ಮಲ್ಲಿಕಾರ್ಜುನ ಹೆಗ್ಗನ್ನವರ, ಸಿಪಿಐ ಧರ್ಮಾಕರ ಧರ್ಮಟ್ಟಿ, ಪಿಎಸ್‌ಐ ಆನಂದ ಕ್ಯಾರಕಟ್ಟಿ, ಕಾಂಗ್ರೆಸ್ ಮುಖಂಡ ಅಶ್ವತ ವೈದ್ಯ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಮಹಾದೇವಪ್ಪ ರಂಕಲಕೊಪ್ಪ, ಮಂಜುನಾಥ ಕಟಗಿ, ಮಲ್ಲಿಕಾರ್ಜುನ ವನ್ನೂರ, ಕಲೀಮ ನದಾಫ, ಬಿ.ಎಸ್.ಎಫ್ ಬಟಾಲಿಯನ್, ಮಾಜಿ ಸೈನಿಕರ ಸಂಘದ ಸದಸ್ಯರು ಯೋಧನ ಅಂತಿಮ ಸಂಸ್ಕಾರದಲ್ಲಿ ಭಾಗವಹಿಸಿದ್ದರು.