ಎಸ್ಸಿ ಎಸ್ಟಿ ಅನುದಾನ ದುರ್ಬಳಕೆ ಖಂಡಿಸಿ ಬಿಎಸ್ಪಿ ಪ್ರತಿಭಟನೆ

| Published : Aug 15 2024, 01:59 AM IST

ಸಾರಾಂಶ

ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿ-ವರ್ಗಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ ಕೋಟ್ಯಂತರ ರು. ಹಣವನ್ನು ದುರ್ಬಳಕೆ ಮಾಡಿಕೊಂಡ ಬಗ್ಗೆ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ರಾಜ್ಯಪಾಲರಿಗೆ ಮಾಡಿಕೊಂಡ ಮನವಿಯನ್ನು, ಗ್ರೇಡ್ ೨ ಪ್ರಭಾರ ತಹಸೀಲ್ದಾರ್ ಲೋಕೇಶ್ ಅವರಿಗೆ ಮನವಿ ಸಲ್ಲಿಸಿ, ಬಿಎಸ್ಪಿ ಜಿಲ್ಲಾಧ್ಯಕ್ಷ ಹರೀಶ್ ಅತ್ನಿ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಹೊಳೆನರಸೀಪುರ

೨೦೧೩-೧೪ರಲ್ಲಿ ರೂಪಿಸಿದ ಎಸ್‌ಸಿ ಎಸ್‌ಟಿ ಮತ್ತು ಟಿಎಸ್‌ಪಿ ಕಾಯ್ದೆಯಡಿ ರಾಜ್ಯ ಯೋಜನಾ ವೆಚ್ಚದ ಒಂದು ಭಾಗವನ್ನು ಮೀಸಲಿಡುವ ಅವಕಾಶ ಕಲ್ವಿಸಿದೆ. ಈ ಯೋಜನೆಯು ಪರಿಶಿಷ್ಟ ಜಾತಿ-ವರ್ಗಗಳ ಅಭಿವೃದ್ಧಿಗೆ ಪೂರಕವೆಂದು ಆಶಾಭಾವನೆ ಇತ್ತು. ಆದರೆ ಕರ್ನಾಟಕ ರಾಜ್ಯವನ್ನಾಳಿದ ಸರ್ಕಾರಗಳು ಈ ಅಧಿನಿಯಮದ ಆಶಯಗಳನ್ನು ಜಾರಿ ಮಾಡದೇ ಗಾಳಿಗೆ ತೂರಿದೆ ಎಂದು ಬಿಎಸ್ಪಿ ಜಿಲ್ಲಾಧ್ಯಕ್ಷ ಹರೀಶ್ ಅತ್ನಿ ಟೀಕಿಸಿದರು.

ಪಟ್ಟಣದ ಡಾ. ಅಂಬೇಡ್ಕರ್‌ ವೃತ್ತದಲ್ಲಿ ಕರ್ನಾಟಕ ರಾಜ್ಯ ಬಿಎಸ್ಪಿ ಉಪಾಧ್ಯಕ್ಷ ಗಂಗಾಧರ್ ಬಹುಜನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿ-ವರ್ಗಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ ಕೋಟ್ಯಂತರ ರು. ಹಣವನ್ನು ದುರ್ಬಳಕೆ ಮಾಡಿಕೊಂಡ ಬಗ್ಗೆ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ರಾಜ್ಯಪಾಲರಿಗೆ ಮಾಡಿಕೊಂಡ ಮನವಿಯನ್ನು, ಗ್ರೇಡ್ ೨ ಪ್ರಭಾರ ತಹಸೀಲ್ದಾರ್ ಲೋಕೇಶ್ ಅವರಿಗೆ ಮನವಿ ಸಲ್ಲಿಸಿ, ಮಾತನಾಡಿದರು. ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಯೋಜನೆಯ ಮೀಸಲು ಹಣವನ್ನು ದುರ್ಬಳಕೆ ಮಾಡಿರುವವರ ವಿರುದ್ಧ ಕಾನೂನಿನ ಅಡಿಯಲ್ಲಿ ಶಿಕ್ಷೆಗೆ ಗುರಿಪಡಿಸಬೇಕೆಂದು ಒತ್ತಾಯಿಸಿದರು.

ಬಿಎಸ್ಪಿ ತಾ. ಆದ್ಯಕ್ಷ ತಾರೇಶ್ ಎಚ್.ಎಸ್., ಮುಖಂಡರಾದ ಸಿ.ಜಿ.ಸೋಮಶೇಖರ್, ಹರೀಶ್ ತಾತನಹಳ್ಳಿ, ಶಿವಮ್ಮ ಡಿ, ಯಶವಂತಕುಮಾರ್ ಎಲ್.ಆರ್., ಹೇಮಂತ ಕುಮಾರ್ ಬಿ.ಕೆ. ಇತರರು ಇದ್ದರು.