ಸಾರಾಂಶ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಕೆಲ ದಿನಗಳಿಂದ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಶನಿವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಕನ್ನಡಪ್ರಭ ವಾರ್ತೆ ಬೆಂಗಳೂರು
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಕೆಲ ದಿನಗಳಿಂದ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಶನಿವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.ಆಸ್ಪತ್ರೆ ಭೇಟಿ ಬಗ್ಗೆ ಉಭಯ ನಾಯಕರು ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ. ನಮ್ಮ ದೇಶದ ಹಿರಿಯ ನಾಯಕ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಮಣಿಪಾಲ್ ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಲಾಯಿತು. ದೇಶ ಮತ್ತು ರೈತರ ಹಿತಕ್ಕಾಗಿ ಸದಾ ಶ್ರಮಿಸಿದ ಈ ಮಹಾನ್ ನಾಯಕ ಎಚ್.ಡಿ.ದೇವೇಗೌಡರು ಶೀಘ್ರ ಚೇತರಿಸಿಕೊಂಡು ಉತ್ತಮ ಆರೋಗ್ಯದಲ್ಲಿ ಇರಲಿ ಎಂದು ಹಾರೈಸುತ್ತೇನೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಆಸ್ಪತ್ರೆಗೆ ದಾಖಲಾಗಿರುವ ದೇಶ ಕಂಡ ಹಿರಿಯ ರಾಜಕೀಯ ಮುತ್ಸದ್ದಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಯಡಿಯೂರಪ್ಪ ಅವರೊಂದಿಗೆ ಭೇಟಿಯಾಗಿ ಆರೋಗ್ಯ ವಿಚಾರಿಸಲಾಯಿತು. ಸಂಪೂರ್ಣವಾಗಿ ಚೇತರಿಸಿಕೊಳ್ಳುತ್ತಿರುವ ದೇವೇಗೌಡರು ಎಂದಿನಂತೆ ಲವಲವಿಕೆಯಿಂದ ನಮ್ಮೊಂದಿಗೆ ಬೆರೆತು ಉಭಯ ಕುಶಲೋಪರಿ ವಿಚಾರಿಸಿದರು. ದೇವೇಗೌಡರು ಕರುನಾಡಿನ ಹೆಮ್ಮೆ, ಭಾರತದ ಹಿರಿಮೆ. ಅವರು ಸದಾ ಚೈತನ್ಯಶೀಲರಾಗಿ ದೇಶದ ಬೆಳವಣಿಗೆಗಳಲ್ಲಿ ಪಾಲ್ಗೊಳ್ಳಬೇಕೆಂಬುದು ನಮ್ಮೆಲ್ಲರ ಹಾರೈಕೆ. ಇಂದಿನ ಪೀಳಿಗೆಗೆ ಅವರ ಬದುಕು, ಹೋರಾಟ, ಜೀವನಶೈಲಿ ಸದಾ ಮಾರ್ಗದರ್ಶಿ. ಶತಾಯುಷ್ಯ ಪೂರೈಸಿ ಅವರು ದೀರ್ಘಕಾಲ ನಮ್ಮೊಂದಿಗೆ ಇರಬೇಕೆಂಬುದು ಕೋಟಿ ಕೋಟಿ ಕನ್ನಡಿಗರ ಹಾರೈಕೆಯಾಗಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.-ಚಿತ್ರ-
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಶನಿವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.---