ಸಾರಾಂಶ
ಕಡೂರು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಹುಟ್ಟು ಹಬ್ಬದ ಅಂಗವಾಗಿ ಭಾರತೀಯ ಜನತಾ ಪಕ್ಷದ ಕಡೂರು ಘಟಕದಿಂದ ರೋಗಿಗಳಿಗೆ ಹಣ್ಣು ವಿತರಿಸಲಾಯಿತು.
ಕನ್ನಡಪ್ರಭ ವಾರ್ತೆ, ಕಡೂರು
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಹುಟ್ಟು ಹಬ್ಬದ ಅಂಗವಾಗಿ ಭಾರತೀಯ ಜನತಾ ಪಕ್ಷದ ಕಡೂರು ಘಟಕದಿಂದ ರೋಗಿಗಳಿಗೆ ಹಣ್ಣು ವಿತರಿಸಲಾಯಿತು.ಬಳಿಕ ಬಿಜೆಪಿ ಮಂಡಲ ಅಧ್ಯಕ್ಷ ಬಿ.ಪಿ.ದೇವಾನಂದ್ ಮಾತನಾಡಿ, ಕಡೂರು ಕ್ಷೇತ್ರದ ನಾಯಕ ಹಾಗೂ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿ ಪ್ರಕಾಶ್ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಹಕಾರದೊಂದಿಗೆ ಆಸ್ಪತ್ರೆ ಒಳ ರೋಗಿಗಳಿಗೆ ಹಣ್ಣು ವಿತರಣೆ ಮಾಡಿ ಯಡಿಯೂರಪ್ಪನವರ ಹುಟ್ಟುಹಬ್ಬ ಆಚರಿಸಲಾಗುತ್ತಿದೆ ಹಾಗು ಯಡಿಯೂರಪ್ಪನವರಿಗೆ ದೇವರು ಇನ್ನಷ್ಟು ಆಯುಷ್ಯ, ಆರೋಗ್ಯ ನೀಡುವಂತೆ ಪ್ರಾರ್ಥಿಸ ಲಾಗುತ್ತಿದೆ ಎಂದು ತಿಳಿಸಿದರು .
ಕರ್ನಾಟಕ ರಾಜ್ಯದ ಅಭಿವೃದ್ಧಿಗೆ ಮುಖ್ಯಮಂತ್ರಿಗಳಾಗಿ ಯಡಿಯೂರಪ್ಪನವರು ನೀಡಿರುವ ಕೊಡುಗೆ ಅಪಾರ. ರಾಜ್ಯ ಅಭಿವೃದ್ಧಿಗೆ ಕ್ರಾಂತಿಕಾರಕ ರೀತಿಯಲ್ಲಿ ಶ್ರಮಿಸಿದ್ದಾರೆ. ಪಕ್ಷದ ಕಾರ್ಯಕರ್ತರು, ಮುಖಂಡರು ಯಡಿಯೂರಪ್ಪನವರ ದಾರಿ ಯಲ್ಲಿ ಮತ್ತು ಅವರ ಮಾರ್ಗದರ್ಶನದಲ್ಲಿ ನಡೆಯುತ್ತಾ ಸೇವೆ ಸಲ್ಲಿಸೋಣ ಎಂದು ಶುಭ ಹಾರೈಸಿದರು.ಬಿಜೆಪಿ ಪಕ್ಷದ ಮುಖಂಡರಾದ ಕೆ.ಎನ್ ಬೊಮ್ಮಣ್ಣ, ಮಲ್ಲಿಕಾರ್ಜುನ್ (ಮಲ್ಲು,), ಶಾಮಿಯಾನ ಚಂದ್ರು, ರಾಜಾನಾಯ್ಕ, ಗೋವಿಂದರಾಜು, ಯತಿರಾಜ್,ಶೇಷಪ್ಪ,ಶ್ರೀನಿವಾಸ ನಾಯ್ಕ, ನಾಗೇಂದ್ರ ಅಗ್ನಿ, ಅಜೇಯ ಒಡೆಯರ್, ಸುರೇಶ್, ಹುಲ್ಲೇಹಳ್ಳಿ ಲಕ್ಷ್ಮಣ್, ಸಗುನಪ್ಪ,ಶೇಖರಪ್ಪ, ಹಣ್ಣು ವಿತರಣೆಯಲ್ಲಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಉಮೇಶ್,ಲ್ಯಾಬ್ ಸುರೇಶ್ ಮತ್ತಿತರರು ಹಾಜರಿದ್ದರು.27 ಕೆಕೆಡಿಯು1,1ಎ.. .
ಕಡೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಯಡಿಯೂರಪ್ಪ ಹುಟ್ಟುಹಬ್ಬದ ಅಂಗವಾಗಿ ಬಿಜೆಪಿ ಘಟಕದಿಂದ ರೋಗಿಗಳಿಗೆ ಹಣ್ಣು ವಿತರಣೆ ಮಾಡಲಾಯಿತು.