ಸಾರಾಂಶ
ಮಂಡ್ಯ ತಾಲೂಕಿನ ಬೂದನೂರು ಗ್ರಾಮದಲ್ಲಿ ಮಾ.೨ ಮತ್ತು ೩ ರಂದು ಬೂದನೂರು ಉತ್ಸವ ಹಮ್ಮಿಕೊಳ್ಳಲಾಗಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಅಧಿಕಾರಿಗಳಿಗೆ ಸೂಚಿಸಿದರು.
ಕನ್ನಡಪ್ರಭ ವಾರ್ತೆ, ಮಂಡ್ಯ ತಾಲೂಕಿನ ಬೂದನೂರು ಗ್ರಾಮದಲ್ಲಿ ಮಾ.೨ ಮತ್ತು ೩ ರಂದು ಬೂದನೂರು ಉತ್ಸವ ಹಮ್ಮಿಕೊಳ್ಳಲಾಗಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ವೇದಿಕೆ, ಆಹಾರ, ಸ್ವಾಗತ, ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಕಾರ್ಯಕ್ರಮಗಳು ಉತ್ತಮವಾಗಿ ಸಂಘಟಿಸಲು ಕಾರ್ಯ ಪ್ರವೃತ್ತರಾಗಬೇಕು ಎಂದು ಹೇಳಿದರು.ಕಾರ್ಯಕ್ರಮ ನಡೆಯುವ ಸ್ಥಳ ಹಾಗೂ ಸುತ್ತಮುತ್ತಲಿನ ಪ್ರದೇಶದ ಸ್ವಚ್ಛತೆ ಕೆಲಸಗಳು ಪ್ರಾರಂಭವಾಗಬೇಕು. ಸಣ್ಣ ಪುಟ್ಟ ರಸ್ತೆ ದುರಸ್ತಿ ಕೆಲಸಗಳಿದ್ದಲ್ಲಿ ಅವುಗಳನ್ನು ಶೀಘ್ರವಾಗಿ ಪ್ರಾರಂಭಿಸಿ ಪೂರ್ಣಗೊಳಿಸಬೇಕು. ವಾಹನಗಳ ನಿಲುಗಡೆ ಪ್ರದೇಶವನ್ನು ಸಮತಟ್ಟುಗೊಳಿಸಿ ವಿದ್ಯುತ್ ದೀಪಗಳ ವ್ಯವಸ್ಥೆ ಮಾಡುವುದು. ಕಾರ್ಯಕ್ರಮ ನಡೆಯುವ ಸ್ಥಳ ಹಾಗೂ ಅವಶ್ಯಕತೆ ಇರುವ ಪ್ರದೇಶಗಳಲ್ಲಿ ಸಿ.ಸಿ.ಟಿ.ವಿ ವ್ಯವಸ್ಥೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು.
ಇದೇ ಮೊದಲ ಬಾರಿಗೆ ಗ್ರಾಮ ಮಟ್ಟದಲ್ಲಿ ಉತ್ಸವ ಆಯೋಜನೆ ಮಾಡಲಾಗುತ್ತಿದ್ದು, ಕುಡಿಯುವ ನೀರು ಹಾಗೂ ತಾತ್ಕಾಲಿಕ ಶೌಚಾಲಯದ ವ್ಯವಸ್ಥೆ ಮಾಡುವ ಅವಶ್ಯಕತೆ ಇದೆ. ಎಲ್ಲಾ ಜಿಲ್ಲೆಗಳ ವಿಶೇಷತೆಯುಳ್ಳ ವಿವಿಧ ಆಹಾರ ಖಾದ್ಯ ತಯಾರಿಸುವ ಆಹಾರ ಮೇಳವನ್ನು ಆಯೋಜಿಸಿ ಮಳಿಗೆಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಸೂಚಿಸಿದರು.ಸಭೆಯಲ್ಲಿ ಜಿಪಂ ಸಿಇಒ ಶೇಖ್ ತನ್ವಿರ್ ಆಸಿಫ್, ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್ ನಾಗರಾಜು, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ರಾಘವೇಂದ್ರ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))