23ರಂದು ಗಾಂಧಾರ ಬುದ್ಧ ವಿಹಾರದಲ್ಲಿ ಬುದ್ಧ ಪೂರ್ಣಿಮೆ

| Published : May 22 2024, 12:50 AM IST

23ರಂದು ಗಾಂಧಾರ ಬುದ್ಧ ವಿಹಾರದಲ್ಲಿ ಬುದ್ಧ ಪೂರ್ಣಿಮೆ
Share this Article
  • FB
  • TW
  • Linkdin
  • Email

ಸಾರಾಂಶ

ಈ ಪೂರ್ಣ ಕಾರ್ಯಕ್ರಮಕ್ಕೆ ಬುದ್ಧ, ಬಸವ, ಅಂಬೇಡ್ಕರ್ ರವರ ಅಭಿಮಾನಿಗಳು ಹಾಗೂ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೇಲೂರು

ತಾಲೂಕಿನ ಪ್ರವಾಸಿ ತಾಣವಾದ ಬಿಕ್ಕೋಡು ಹೋಬಳಿ ಮಧಘಟ್ಟದ ಗಾಂಧಾರ ಬುದ್ಧ ವಿಹಾರದಲ್ಲಿ ಮೇ 23ರಂದು ಗುರುವಾರ 2568ನೇ ವೈಶಾಖ ಬುದ್ಧ ಪೂರ್ಣಿಮೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಗಾಂಧಾರ ಬುದ್ಧ ವಿಹಾರ ಚಾರಿಟೇಬಲ್ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಗಳು ಹಾಗೂ ವಕೀಲ ರಾಜು ಅರೇಹಳ್ಳಿ ತಿಳಿಸಿದ್ದಾರೆ

ಅಂದು ಬೆಳಗ್ಗೆ 9 ಗಂಟೆಗೆ ಬೇಲೂರು ಪಟ್ಟಣದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಬೈಕ್ ಜಾಥಾಕ್ಕೆ ಚಾಲನೆ ನೀಡಲಾಗುವುದು, ಭಗವಾನ್ ಬುದ್ಧರ ಕರುಣೆ, ಪ್ರೀತಿ, ಮೈತ್ರಿಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಇದಾಗಿದೆ. ಪೂಜ್ಯ ಭಂತೆ ಭೋದಿದತ್ತ ಮಹಾಧೇರಾ ರವರ ದಿವ್ಯ ಸಾನಿಧ್ಯದಲ್ಲಿ ವಿವಿಧ ಕಾರ್ಯಕ್ರಮಗಳಾದ ಬುದ್ಧ ಪೂಜೆ, ದೀಪ ಬೆಳಗಿಸುದು, ತ್ರಿರತ್ನ ಪೂಜಾ, ಪರಿತ್ತ ಪಠಣೆ, ತಿಸರಣ ಮತ್ತು ಪಂಚಶೀಲ ಬೋಧನೆ ಹಾಗೂ ಧಮ್ಮ ಪ್ರವಚನ ನಡೆಸಿ ಕೊಡಲಿದ್ದಾರೆ ಎಂದು ತಿಳಿಸಿದರು.

ಮಧ್ಯಾಹ್ನ 12 ಗಂಟೆಗೆ ಬೃಹತ್ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿದ್ದು ನಿವೃತ್ತ ಐಎಎಸ್ ಅಧಿಕಾರಿಗಳು ಹಾಗೂ ವಿಹಾರದ ಗೌರವ ಕಾರ್ಯದರ್ಶಿ ಸಿದ್ಧಯ್ಯರವರು ರಕ್ತದಾನ ಶಿಬಿರಕ್ಕೆ ಚಾಲನೆ ನೀಡಲಿದ್ದಾರೆ.ಈ ಪೂರ್ಣ ಕಾರ್ಯಕ್ರಮಕ್ಕೆ ಬುದ್ಧ, ಬಸವ, ಅಂಬೇಡ್ಕರ್ ರವರ ಅಭಿಮಾನಿಗಳು ಹಾಗೂ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದ್ದಾರೆ.