ಕೇಂದ್ರ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಮಂಡಿಸಿರುವ 2026-27ನೇ ಸಾಲಿನ ಕೇಂದ್ರ ಬಜೆಟ್ ಅಕ್ಷರಶಃ “ಜನಸ್ನೇಹಿ” ಬಜೆಟ್ ಆಗಿದೆ. ಭಾರತದ ಆರ್ಥಿಕತೆಯನ್ನು ಸಶಕ್ತಗೊಳಿಸಲು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ 3 ಮುಖ್ಯ ಕರ್ತವ್ಯಗಳ ಮೇಲೆ ಗಮನ ಹರಿಸುತ್ತಿದೆ. ಉತ್ಪಾದಕತೆಯನ್ನು ಹೆಚ್ಚಿಸುವುದು, ಜನರ ಆಶೋತ್ತರಗಳನ್ನು ಈಡೇರಿಸುವುದು ಮತ್ತು ಸಬ್‌ ಕಾ ಸಾಥ್ ಸಬ್‌ ಕಾ ವಿಕಾಸ್ ಮಂತ್ರದೊಂದಿಗೆ ಪ್ರತಿಯೊಂದು ಕುಟುಂಬಕ್ಕೂ ಸಂಪನ್ಮೂಲಗಳನ್ನು ತಲುಪಿಸುವ ಗುರಿಯನ್ನು ಹೊಂದಿದೆ ಎಂದು ಮಾಜಿ ಸಂಸದ ಡಾ. ಜಿ.ಎಂ.ಸಿದ್ದೇಶ್ವರ ಅಭಿಪ್ರಾಯ ತಿಳಿಸಿದ್ದಾರೆ.

ದಾವಣಗೆರೆ: ಕೇಂದ್ರ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಮಂಡಿಸಿರುವ 2026-27ನೇ ಸಾಲಿನ ಕೇಂದ್ರ ಬಜೆಟ್ ಅಕ್ಷರಶಃ “ಜನಸ್ನೇಹಿ” ಬಜೆಟ್ ಆಗಿದೆ. ಭಾರತದ ಆರ್ಥಿಕತೆಯನ್ನು ಸಶಕ್ತಗೊಳಿಸಲು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ 3 ಮುಖ್ಯ ಕರ್ತವ್ಯಗಳ ಮೇಲೆ ಗಮನ ಹರಿಸುತ್ತಿದೆ. ಉತ್ಪಾದಕತೆಯನ್ನು ಹೆಚ್ಚಿಸುವುದು, ಜನರ ಆಶೋತ್ತರಗಳನ್ನು ಈಡೇರಿಸುವುದು ಮತ್ತು ಸಬ್‌ ಕಾ ಸಾಥ್ ಸಬ್‌ ಕಾ ವಿಕಾಸ್ ಮಂತ್ರದೊಂದಿಗೆ ಪ್ರತಿಯೊಂದು ಕುಟುಂಬಕ್ಕೂ ಸಂಪನ್ಮೂಲಗಳನ್ನು ತಲುಪಿಸುವ ಗುರಿಯನ್ನು ಹೊಂದಿದೆ ಎಂದು ಮಾಜಿ ಸಂಸದ ಡಾ. ಜಿ.ಎಂ.ಸಿದ್ದೇಶ್ವರ ಅಭಿಪ್ರಾಯ ತಿಳಿಸಿದ್ದಾರೆ.

ಈ ಬಾರಿ ಆರೋಗ್ಯ ಕ್ಷೇತ್ರದಲ್ಲಿ ಹೊಸ ಕ್ರಾಂತಿ, ಕ್ಯಾನ್ಸರ್, ಮಧುಮೇಹದಂತಹ ಕಾಯಿಲೆಗಳಿಗೆ ಕೈಗೆಟುಕುವ ದರದಲ್ಲಿ ಔಷಧಿ, ಭಾರತವನ್ನು ಜಾಗತಿಕ ಬಯೋ-ಫಾರ್ಮಾ ಹಬ್ ಆಗಿ ರೂಪಿಸಲು ಮುಂದಿನ 5 ವರ್ಷಗಳಲ್ಲಿ ₹10 ಸಾವಿರ ಕೋಟಿ ಮೌಲ್ಯದ “ಬಯೋಫಾರ್ಮಾ ಶಕ್ತಿ” ಯೋಜನೆ ಘೋಷಿಸಿದ್ದಾರೆ. ಇಂಡಿಯಾ ಸೆಮಿಕಂಡಕ್ಟರ್ ಮಿಷನ್ 2.0 ಆರಂಭ, ಎಲೆಕ್ಟ್ರಾನಿಕ್ಸ್ ಉತ್ಪಾದನೆಗೆ ₹40 ಸಾವಿರ ಕೋಟಿ ವೆಚ್ಚ ವೃದ್ಧಿ, ಉದ್ಯೋಗ ಸೃಷ್ಟಿಗೆ ಬಲವಾದ ಉತ್ತೇಜನ, ಪ್ರಮುಖ ನಗರಗಳ ನಡುವೆ 7 ಹೊಸ ಹೈ-ಸ್ಪೀಡ್ ರೈಲು ಕಾರಿಡಾರ್‌ಗಳ ಘೋಷಿಸಿದ್ದಾರೆ. ಹೈದರಾಬಾದ್-ಬೆಂಗಳೂರು ಹಾಗೂ ಚೆನೈ-ಬೆಂಗಳೂರು ಹೈಸ್ಪೀಡ್ ರೈಲ್ವೆ ಮಾರ್ಗಗಳು ಕರ್ನಾಟಕದ ಸಂಪರ್ಕ ಕ್ರಾಂತಿಗೆ ಹೊಸ ವೇಗವನ್ನು ನೀಡಲಿದೆ ಎಂದಿದ್ದಾರೆ.

ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಉಪಕ್ರಮವನ್ನು ಘೋಷಿಸಿದ್ದು, ಈ ಯೋಜನೆಯು ಖಾದಿ, ಕೈಮಗ್ಗ ಮತ್ತು ಕರಕುಶಲ ಉದ್ಯಮಗಳಿಗೆ ಜಾಗತಿಕ ಮಾರುಕಟ್ಟೆ ಒದಗಿಸುವ ಮೂಲಕ ನೇಕಾರರು ಮತ್ತು ಗ್ರಾಮೀಣ ಕುಶಲಕರ್ಮಿಗಳಿಗೆ ಹೊಸ ಶಕ್ತಿ ನೀಡಲಿದೆ. ಹೀಗೆ ಇನ್ನೂ ಅನೇಕ ಕ್ಷೇತ್ರಗಳಿಗೆ ಕೊಡುಗೆಯನ್ನು ನೀಡಿರುವಂತಹದ್ದು ಅತ್ಯಂತ ಸ್ವಾಗತಾರ್ಹ ಮತ್ತು ಜನಸ್ನೇಹಿ ಬಜೆಟ್ ಇದಾಗಿರುವುದು ಎಂದು ಸಿದ್ದೇಶ್ವರ ತಿಳಿಸಿದ್ದಾರೆ.

- - -

-1ಕೆಡಿವಿಜಿ46 : ಡಾ.ಜಿ.ಎಂ.ಸಿದ್ದೇಶ್ವರ