ಸಾರಾಂಶ
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ 2025- 26ನೇ ಸಾಲಿನ ಬಜೆಟ್ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅಭಿಪ್ರಾಯಿಸಿದ್ದಾರೆ.
ಕನ್ನಡಪ್ರಭ ವಾರ್ತೆ, ದಾವಣಗೆರೆ
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ 2025- 26ನೇ ಸಾಲಿನ ಬಜೆಟ್ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅಭಿಪ್ರಾಯಿಸಿದ್ದಾರೆ.ದಾವಣಗೆರೆ ಜಿಲ್ಲಾ ಆಸ್ಪತ್ರೆ ಸೇರಿದಂತೆ ಇತರೆ ಜಿಲ್ಲೆಗಳ ಒಟ್ಟು 8 ತಾಲೂಕು ಆಸ್ಪತ್ರೆಗಳನ್ನು ₹650 ಕೋಟಿ ವೆಚ್ಚದಲ್ಲಿ ನವೀಕರಣ ಉತ್ತಮವಾಗಿದೆ. ಬಂಜಾರ ಸಮುದಾಯದ ಪ್ರಮುಖ ಧಾರ್ಮಿಕ ಸ್ಥಳವಾದ ಜಿಲ್ಲೆಯ ಸಂತ ಸೇವಾಲಾಲ್ ಪುಣ್ಯಕ್ಷೇತ್ರ ಸೂರಗೊಂಡನಕೊಪ್ಪದಲ್ಲಿ ವಸತಿ ಶಾಲೆಯನ್ನು ಕೈಸ್ ವತಿಯಿಂದ ಪ್ರಾರಂಭಿಸಲಾಗುತ್ತಿದೆ. ಕೊಂಡಜ್ಜಿ ಬೆಟ್ಟದ ಪರಿಸರದಲ್ಲಿ ಸ್ಥಾಪಿಸಲಾಗಿರುವ ವೃತ್ತಿರಂಗಭೂಮಿ ರಂಗಾಯಣದಲ್ಲಿ ₹3 ಕೋಟಿ ವೆಚ್ಚದಲ್ಲಿ ಮೂಲಸೌಕರ್ಯ, ವೃತ್ತಿ ರಂಗಾಯಣ ಸಮುಚ್ಛಯ ಹಾಗೂ ಥಿಯೇಟರ್ ಮ್ಯೂಸಿಯಂ ನಿರ್ಮಾಣ, ಜಗಳೂರು ಕೆರೆ ತುಂಬಿಸುವ ಯೋಜನೆ, ಹೊನ್ನಾಳಿಯ ಬೆನಕನಹಳ್ಳಿ. ಗೋವಿನಕೋವಿ ಮತ್ತು ಹನುಮಸಾಗರ ಕೆರೆಗಳ ತುಂಬಿಸುವ ಯೋಜನೆ ಹಾಗೂ ರಾಜ್ಯ ಸರ್ಕಾರವು ರೈಲ್ವೆ ಸಹಯೋಗದೊಂದಿಗೆ ತುಮಕೂರು- ದಾವಣಗೆರೆ ಸೇರಿದಂತೆ 9 ವಿವಿಧ ರೈಲ್ವೆ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಪ್ರಗತಿಯಲ್ಲಿದೆ ಎಂದಿದ್ದಾರೆ.
ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಲು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ರಾಜ್ಯದ 31 ಜಿಲ್ಲೆಗಳಲ್ಲಿ 6ನೇ ತರಗತಿಯಿಂದ 12ನೇ ತರಗತಿಯವರೆಗಿನ ವಸತಿ ಶಾಲೆಗಳ ನಿರ್ಮಾಣ ಹೀಗೆ ಎಲ್ಲ ವಲಯಕ್ಕೂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಪೂರಕವಾಗಿದೆ ಎಂದಿದ್ದಾರೆ.- - - -7ಕೆಡಿವಿಜಿ32: ಡಾ.ಪ್ರಭಾ ಮಲ್ಲಿಕಾರ್ಜುನ್, ಸಂಸದೆ
;Resize=(128,128))
;Resize=(128,128))
;Resize=(128,128))
;Resize=(128,128))