ಸಾರಾಂಶ
ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ಸಂಪೂರ್ಣ ಅಭಿವೃದ್ಧಿಯ ಬಜೆಟ್ ಮಂಡಿಸಿದ್ದು, ಎಲ್ಲ ವರ್ಗಗಳಿಗೂ ಸಮಾನ ನ್ಯಾಯ ಕಲ್ಪಿಸಿದ್ದಾರೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ಸಂಪೂರ್ಣ ಅಭಿವೃದ್ಧಿಯ ಬಜೆಟ್ ಮಂಡಿಸಿದ್ದು, ಎಲ್ಲ ವರ್ಗಗಳಿಗೂ ಸಮಾನ ನ್ಯಾಯ ಕಲ್ಪಿಸಿದ್ದಾರೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಸಲ 4.9 ಲಕ್ಷ ಕೋಟಿ ರು. ಗಾತ್ರದ ಬಜೆಟ್ ಮಂಡಿಸಿದ್ದು, ಗ್ಯಾರಂಟಿ ಮೀರಿ ಅಭಿವೃದ್ಧಿಗೆ ಒತ್ತು ಕೊಟ್ಟಿದ್ದಾರೆ. ಅಹಿಂದ ವರ್ಗಕ್ಕೆ ಮಾತ್ರವಲ್ಲದೇ ಹಿಂದುಳಿದ ವರ್ಗಗಳಿಗೂ ಭರಪೂರ ಕೊಡುಗೆ ನೀಡಿದ್ದಾರೆ. ಯುವಸಬಲೀಕರಣ ಮತ್ತು ಕ್ರೀಡೆಗೆ ಒತ್ತುಕೊಟ್ಟಿದ್ದು, 2028ರ ಒಲಿಂಪಿಕ್ಸ್ ಕ್ರೀಡಾಪಟುಗಳ ತರಬೇತಿಗಾಗಿ 60 ಕ್ರೀಡಾಪಟುಗಳಿಗೆ ವಾರ್ಷಿಕ ತಲಾ 10 ಲಕ್ಷ ಪ್ರೋತ್ಸಾಹ ಧನ ಘೋಷಿಸಿದ್ದಾರೆ ಎಂದು ಅವರು ಶ್ಲಾಘಿಸಿದ್ದಾರೆ.ಪಂಚ ಗ್ಯಾರಂಟಿಗಳಿಗೆ ಒತ್ತು ಕೊಡುವ ಜೊತೆಗೆ ಎಲ್ಲ ಸಮುದಾಯಗಳಿಗೂ ಸಾಮಾಜಿಕ ನ್ಯಾಯ ಕಲ್ಪಿಸಿದ್ದಾರೆ. ಶಕ್ತಿ ಯೋಜನೆಗೆ 5,300 ಕೋಟಿ ರು. ಅನುದಾನ ಮೀಸಲಿಟ್ಟಿದ್ದಾರೆ. ಮೈಸೂರು ವಿಮಾನ ನಿಲ್ದಾಣ ರನ್ ವೇ ವಿಸ್ತರಣೆಗೆ ಭೂಸ್ವಾಧೀನಕ್ಕಾಗಿ 319 ಕೋಟಿ ರು. ಅನುದಾನ ಘೋಷಣೆ ಮಾಡಿದ್ದಾರೆ. ಮೈಸೂರು ನಗರದಲ್ಲಿ ಹೊಸದಾಗಿ ಕೆಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ಅಗ್ನಿಶಾಮಕ ಠಾಣೆ ನಿರ್ಮಾಣದ ಬಗ್ಗೆ ಬಜೆಟ್ ನಲ್ಲಿ ಘೋಷಿಸಿದ್ದಾರೆ. ಕರಾವಳಿ ಭಾಗದ ಮೀನುಗಾರರ ಅಭಿವೃದ್ಧಿಗೆ ಒತ್ತುಕೊಟ್ಟಿದ್ದಾರೆ.
ಇದು ಅಭಿವೃದ್ಧಿಯ ಬಜೆಟ್ ಅನ್ನೋದ್ರಲ್ಲಿ ಯಾವುದೇ ಸಂಶಯವಿಲ್ಲ ಎಂದು ಅವರು ಹೇಳಿದ್ದಾರೆ.