ಬಜೆಟ್‌ ಸರ್ವತೋಮುಖ ಪ್ರಗತಿಯ ದಿಕ್ಸೂಚಿ: ಸಚಿವ ಮುನಿಯಪ್ಪ

| Published : Mar 08 2025, 12:32 AM IST

ಸಾರಾಂಶ

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ದಾಖಲೆಯ 16ನೇ ರಾಜ್ಯ ಆಯವ್ಯಯ ಸರ್ವತೋಮುಖ ಪ್ರಗತಿಯ ದಿಕ್ಸೂಚಿ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯಿಸಿದ್ದಾರೆ.

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ದಾಖಲೆಯ 16ನೇ ರಾಜ್ಯ ಆಯವ್ಯಯ ಸರ್ವತೋಮುಖ ಪ್ರಗತಿಯ ದಿಕ್ಸೂಚಿ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯಿಸಿದ್ದಾರೆ.

ಬಜೆಟ್‌ ಬಡವರ ಹಾಗೂ ಶ್ರಮಿಕರ ಪರವಾಗಿದ್ದು, ಎಲ್ಲ ವರ್ಗಗಳ ಪ್ರಗತಿಗೆ ಒತ್ತು ನೀಡಲಾಗಿದೆ. ರಾಜ್ಯದ ಬಡವರ ಹಸಿವು ನೀಗಿಸುವ ಉದ್ದೇಶದಿಂದ ಆರಂಭಿಸಲಾದ ಅನ್ನಭಾಗ್ಯ ಯೋಜನೆಯಡಿ ಇದುವರೆಗೂ ಹೆಚ್ವುವರಿ 5 ಕೆಜಿ ಆಹಾರ ಧಾನ್ಯಕ್ಕೆ ಪರ್ಯಾಯವಾಗಿ ನೀಡಲಾಗುತ್ತಿರುವ ಸಹಾಯಧನದ ಬದಲಾಗಿ 5 ಕೆಜಿ ಅಕ್ಕಿಯನ್ನು ವಿತರಿಸಲಾಗುವುದು. ಇದರಿಂದ 4.21 ಕೋಟಿ ಫಲಾನುಭವಿಗಳಿಗೆ ಹೆಚ್ಚುವರಿ ಅಕ್ಕಿ ಲಭ್ಯವಾಗಲಿದೆ. ಸಾರ್ವಜನಿಕ ವಿತರಣಾ ವ್ಯವಸ್ಥೆಯ ನ್ನು ಇನ್ನಷ್ಟು ಸುಧಾರಿಸಲು ತಂತ್ರಜ್ಞಾನ ವನ್ನು ಗರಿಷ್ಠ ಬಳಕೆ ಮಾಡಲಾಗುವುದು. ಇದಕ್ಕಾಗಿ ಒಟ್ಟಾರೆ 5 ಕೋಟಿ ರು ವೆಚ್ಚದಲ್ಲಿ ಸಗಟು ಗೋಧಾಮುಗಳಿಗೆ ಸಿಸಿಟಿವಿ ಅಳವಡಿಕೆ ಜಿಪಿಎಸ್‌ ಆಧಾರಿತ ವಾಹನ ಟ್ರಾಕಿಂಗ್‌ ವ್ಯವಸ್ಥೆ ಮತ್ತು ಕಮಾಂಡ್ಸ್ಥಾ ಕಂಟ್ರೋಲ್‌ ಕೇಂದ್ರ ಸ್ಥಾಪನೆ ಬಗ್ಗೆ ಪ್ರಸ್ತಾಪಿಸಲಾಗಿದೆ ಎಂದರು.

80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಮಾತ್ರ ಇರುವ ಮನೆಗಳಿಗೆ ಆಹಾರ ಧಾನ್ಯಗಳನ್ನು ತಲುಪಿಸಲು ಹಿಂದಿನ ವರ್ಷ ಅನ್ನ-ಸುವಿಧಾ ಯೋಜನೆ ಜಾರಿಗೊಳಿಸಲಾಗಿದೆ. ಈ ಯೋಜನೆಯಡಿ 2 ಲಕ್ಷ ಫಲಾನುಭವಿಗಳನ್ನು ಗುರುತಿಸಲಾಗಿದ್ದು75 ವಯಸ್ಸಿನ ಮೇಲ್ಪಟ್ಟ ಹಿರಿಯ ನಾಗರೀಕರು ಮಾತ್ರ ಇರುವ ಮನೆಗಳಿಗೂ ಈ ಸೇವೆ ವಿಸ್ತರಿಸಲಾಗುವುದು. ಇದರಿಂದ 3.30 ಲಕ್ಷ ಫಲಾನುಭವಿಗಳಿಗೆ ಅನುಕೂಲವಾಗಲಿದೆ. ಸಾರ್ವಜನಿಕ ವಿತರಣಾ ವ್ಯವಸ್ಥೆಯ ನ್ನು ಸಮರ್ಪಕವಾಗಿ ನಿಗಾವಹಿಸಲು ಸಾದ್ಯವಾಗುವಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಎಲೆಕ್ಟ್ರಾನಿಕ್‌ ತಕ್ಕಡಿಗಳನ್ನು ಅಳವಡಿಸಿ ಐಟಿ ವ್ಯವಸ್ಥೆಯೊಂದಿಗೆ ಸಂಯೋಜಿಸಲಾಗುವುದು. ಅನ್ನಭಾಗ್ಯ ಯೋಜನೆಯ ಸಗಟು ಲಾಭಾಂಶ ಪ್ರತಿ ಕ್ವಿಂಟಾಲ್ 35 ರು.ಗಳಿಂದ 45 ರು.ಗಳಿಗೆ ಹೆಚ್ಚಳ ಮಾಡಲಾಗಿದೆ ಎಂದು ವಿವರಿಸಿದರು.

ಫೋಟೋ-

7ಕೆಡಿಬಿಪಿ1- ಕೆ.ಎಚ್.ಮುನಿಯಪ್ಪ.