ಆರ್ಥಿಕ ಸಮಾನತೆಗೆ ಒತ್ತು ನೀಡಿರುವ ಬಜೆಟ್: ಜಿ.ಶಿವಣ್ಣ

| Published : Feb 17 2024, 01:17 AM IST

ಆರ್ಥಿಕ ಸಮಾನತೆಗೆ ಒತ್ತು ನೀಡಿರುವ ಬಜೆಟ್: ಜಿ.ಶಿವಣ್ಣ
Share this Article
  • FB
  • TW
  • Linkdin
  • Email

ಸಾರಾಂಶ

ರಾಮನಗರ: ಕೇಂದ್ರ ಸರ್ಕಾರದ ಯೋಜನೆಗಳ ಅಡಿಯಲ್ಲೇ ರಾಜ್ಯದ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿ ಪ್ರಸಕ್ತ ಸಾಲಿನಲ್ಲಿ 3,71,383 ಕೋಟಿ ರು.ಗಾತ್ರದ ಪೂರ್ಣ ಆಯವ್ಯಯ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಕೆಲವು ಹೊಸ ಜನಪರ ಯೋಜನೆಗಳನ್ನು ಪ್ರಕಟಿಸಿ ಆರ್ಥಿಕ ಸಮಾನತೆಗೆ ಒತ್ತು ನೀಡಿದ್ದಾರೆ ಎಂದು ಅರ್ಥಶಾಸ್ತ್ರ ಉಪನ್ಯಾಸಕ ಜಿ.ಶಿವಣ್ಣ ತಿಳಿಸಿದರು.

ರಾಮನಗರ: ಕೇಂದ್ರ ಸರ್ಕಾರದ ಯೋಜನೆಗಳ ಅಡಿಯಲ್ಲೇ ರಾಜ್ಯದ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿ ಪ್ರಸಕ್ತ ಸಾಲಿನಲ್ಲಿ 3,71,383 ಕೋಟಿ ರು.ಗಾತ್ರದ ಪೂರ್ಣ ಆಯವ್ಯಯ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಕೆಲವು ಹೊಸ ಜನಪರ ಯೋಜನೆಗಳನ್ನು ಪ್ರಕಟಿಸಿ ಆರ್ಥಿಕ ಸಮಾನತೆಗೆ ಒತ್ತು ನೀಡಿದ್ದಾರೆ ಎಂದು ಅರ್ಥಶಾಸ್ತ್ರ ಉಪನ್ಯಾಸಕ ಜಿ.ಶಿವಣ್ಣ ತಿಳಿಸಿದರು.

ಆಯವ್ಯಯ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಕೃಷಿ, ನೀರಾವರಿ, ನಗರಾಭಿವೃದ್ಧಿ, ಆರೋಗ್ಯ ಮತ್ತು ಸಮಾಜ ಕಲ್ಯಾಣ ಇಲಾಖೆಗೆ ಆದ್ಯತೆ ನೀಡಿರುವುದು. ಕೆಲವು ಹಳೆಯ ಯೋಜನೆಗಳಿಗೆ ಮರುಜೀವ ನೀಡುವುದರ ಜೊತೆಗೆ ಹೊಸ ಕಾರ್ಯಕ್ರಮಗಳನ್ನು ತೆಗೆದುಕೊಂಡಿದ್ದಾರೆ ಎಂದು ಹೇಳಿದರು.

ಪರಿಸರ ಸಂರಕ್ಷಿತ ಕೃಷಿ ಉತ್ಪಾದನೆ ಕೈಗೊಳ್ಳಲು ಸುಸ್ಥಿರ ಕೃಷಿ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ವಿವಿಧ ರೈತಪರ ಯೋಜನೆಗಳನ್ನು ಒಗ್ಗೂಡಿಸಿ ಕರ್ನಾಟಕ ರೈತ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಿರುವುದು, ಕೃಷಿ ಮತ್ತು ತೋಟಗಾರಿಕೆ, ಮೀನುಗಾರಿಕೆ, ರೇಷ್ಮೆ, ಪಶುಸಂಗೋಪನೆ ಇನ್ನಿತರೆ ಇಲಾಖೆಗಳ ನಡುವೆ ಸಮನ್ವಯ ಸಾಧಿಸಲು ಕೃಷಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಲು ಸರ್ಕಾರ ಮುಂದಾಗಿರುವುದು ಶ್ಲಾಘನೀಯ.

ದೇಶೀ ತಳಿ ಬೀಜ ಸಂರಕ್ಷಣೆಗೆ ಸಮುದಾಯ ಬೀಜ ಬ್ಯಾಂಕ್ ಸ್ಥಾಪನೆ, ಅಧಿಕ ಪೌಷ್ಠಿಕಾಂಶ ಉಳ್ಳ ಸಿರಿಧಾನ್ಯದ ಬೆಳೆ ಮತ್ತು ಮೌಲ್ಯವರ್ಧಿತ ಉತ್ಪನ್ನಗಳಿಗೆ ಪ್ರೋತ್ಸಾಹ ನೀಡುವ ನಮ್ಮ ಮಿಲ್ಲೆಟ್ ಯೋಜನೆ, ಬರಪೀಡಿತ ಮತ್ತು ಮಳೆಯಾಶ್ರಿತ ಪ್ರದೇಶಗಳಲ್ಲಿ ಸುಸ್ಥಿರ ಕೃಷಿ ಕೈಗೊಳ್ಳಲು ನರೇಗಾ ಯೋಜನೆಯಡಿಯಲ್ಲಿ ೫ ಸಾವಿರ ಸಣ್ಣ ಸರೋವರಗಳ ನಿರ್ಮಾಣ. ಮಂಡ್ಯದಲ್ಲಿ ಕೃಷಿ ವಿಶ್ವ ವಿದ್ಯಾಲಯ ಸ್ಥಾಪನೆ.

ರೈತರು ಬೆಳೆದ ಉತ್ಪನ್ನಗಳನ್ನು ಮಧ್ಯವರ್ತಿಗಳ ಹಾವಳಿ ತಪ್ಪಿಸಿ ಗ್ರಾಹಕರಿಗೆ ನೇರವಾಗಿ ಮಾರಾಟ ಮಾಡಲು ಕಿಸಾನ್ ಮಾಲ್‌ಗಳ ಸ್ಥಾಪನೆ. ವಾಣಿಜ್ಯ ಪುಷ್ಪ ಮಾರುಕಟ್ಟೆ ಆರಂಭಿಸಲು ಮುಂದಾಗಿರುವುದು ರೈತರ ಆರ್ಥಿಕ ಸ್ಥಿತಿ ಬಲವರ್ಧನೆಗೆ ಪೂರಕವಾಗಿವೆ ಎಂದು ಜಿ.ಶಿವಣ್ಣ ಹೇಳಿದರು.ಶಾಸಕರ ಅನುದಾನ ತರುವಲ್ಲಿ ವಿಫಲ: ನಿಖಿಲ್ ಕುಮಾರಸ್ವಾಮಿ

ರಾಮನಗರ: ರಾಮನಗರ ಅಭಿವೃದ್ಧಿಗೆ ಸ್ಥಳೀಯ ಶಾಸಕರು ಹೋರಾಟ ಮಾಡಿ ಯಾವುದೇ ಅನುದಾನ ತಂದಿಲ್ಲ. ರಾಮನಗರ ಜಿಲ್ಲೆ ಹಾಗೂ ತಾಲೂಕು ಅಭಿವೃದ್ಧಿಗೆ ಸ್ಥಳೀಯ ಶಾಸಕರು ಮತ್ತು ಕಾಂಗ್ರೆಸ್ ಪಕ್ಷ ಗಮನಹರಿಸಿಲ್ಲ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಟೀಕಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮನಗರದಲ್ಲಿ ಹಿಂದಿನ ಶಾಸಕರು ನೀಡಿದ ಅನುದಾನವನ್ನೆ ಇಟ್ಟಕೊಂಡು ಈಗಿನ ಶಾಕರು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ ಎಂದರು.

ತನ್ನ ಐದು ಗ್ಯಾರಂಟಿ ಯೋಜನೆ ಪೂರೈಸಲು ಸರ್ಕಾರದ ಖಜಾನೆಯಲ್ಲಿ ಹಣ ಇಲ್ಲ. ಇಂತಹ ಪರಿಸ್ಥಿತಿಗೆ ಕಾಂಗ್ರೆಸ್ ಪಕ್ಷ ಸಿಲುಕಿಸಿದೆ. ಹಾಗಾಗಿ, ಬಜೆಟ್ ಬಗ್ಗೆ ಆಶ್ಚರ್ಯ ಪಡುವಂತದ್ದು ಏನು ಇಲ್ಲ ಎಂದು ತಿಳಿಸಿದರು.