ವಿದ್ಯಾರ್ಥಿಗಳು ಸದಾ ಚೈತನ್ಯಶೀಲರಾಗಿ ತಮ್ಮಲ್ಲಿರುವ ಕಲೆ ಹಾಗೂ ಪ್ರತಿಭೆಗಳಿಗೆ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಂಡು ಸತ್ಪ್ರಜೆಗಳಾಗಬೇಕು ಎಂದು ಮಡಿಕೇರಿ ತಾಲೂಕು ಕಸಾಪ ಅಧ್ಯಕ್ಷ ಕಡ್ಲೇರ ತುಳಸಿ ಮೋಹನ್ ಹೇಳಿದರು.

ನಾಪೋಕ್ಲು: ವಿದ್ಯಾರ್ಥಿಗಳು ಸದಾ ಚೈತನ್ಯಶೀಲರಾಗಿ ತಮ್ಮಲ್ಲಿರುವ ಕಲೆ ಹಾಗೂ ಪ್ರತಿಭೆಗಳಿಗೆ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಂಡು ಸತ್ಪ್ರಜೆಗಳಾಗಬೇಕು ಎಂದು ಮಡಿಕೇರಿ ತಾಲೂಕು ಕಸಾಪ ಅಧ್ಯಕ್ಷ ಕಡ್ಲೇರ ತುಳಸಿ ಮೋಹನ್ ಹೇಳಿದರು.

ಇಲ್ಲಿಗೆ ಸಮೀಪದ ಮುರ್ನಾಡು ವಿದ್ಯಾ ಸಂಸ್ಥೆಯ ಪದವಿ ಕಾಲೇಜಿನಲ್ಲಿ ಆಯೋಜಿಸಲಾದ ಪ್ರತಿಭಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಡಾ. ಚೌರೀರ ಜಗತ್ ತಿಮ್ಮಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರತಿಯೊಬ್ಬರಲ್ಲೂ ಪ್ರತಿಭೆ ಇದ್ದೇ ಇರುತ್ತದೆ. ಅದನ್ನು ಪ್ರದರ್ಶಿಸಲು ವೇದಿಕೆ ಹುಡುಕಬೇಕು ಎಂದರು.

ಪ್ರಾಂಶುಪಾಲ ಕಲ್ಪನಾ ಸಾಮ್ರಾಟ್ ಅವರು ಕಾಲೇಜಿನ ವಾರ್ಷಿಕ ವರದಿ ಓದಿದರು. ಸಂಸ್ಥೆಯ ಕಾರ್ಯದರ್ಶಿ ಪೆಮ್ಮುಡಿಯಂಡ ವೇಣು ಅಪ್ಪಣ್ಣ, ಜಾಂಚಿ ವಿ.ಎ. ಯತೀಶ್, ನಿರ್ದೇಶಕ ಕೆ.ಜಿ. ರಾಮಮೂರ್ತಿ, ಎಂ.ಕೆ. ಚಂಗಪ್ಪ, ಪಿ.ಎ. ದೇವಯ್ಯ ಇದ್ದರು.

ಅಂತಿಮ ಬಿಕಾಂ ವಿದ್ಯಾರ್ಥಿಗಳಾದ ದಿವಿನ್ ಬೋಪಯ್ಯ ಹಾಗೂ ಆಫೀಫಾ ಅವರು ಉತ್ತಮ ನಿರ್ಗಮನ ವಿದ್ಯಾರ್ಥಿಗಳಾಗಿ ಪ್ರಶಸ್ತಿ ಪಡೆದರು. ಪೊನ್ನಮ್ಮ ಹಾಗೂ ತಂಡದವರು ಪ್ರಾರ್ಥಿಸಿದರು. ಭವ್ಯ ಸಿ.ಡಿ. ಸ್ವಾಗತಿಸಿದರು. ಅಂತಿಮ ಬಿಕಾಂ ವಿದ್ಯಾರ್ಥಿಗಳಾದ ದಿಲನ್ ತಿಮ್ಮಯ್ಯ ಹಾಗೂ ತರುಣ್ ತಮ್ಮಯ್ಯ ನಿರ್ವಹಿಸಿದು. ವಿಭಾ ವಂದಿಸಿದರು.