೭೭ನೇ ಗಣರಾಜ್ಯೋತ್ಸವವನ್ನು ಪ್ರವಾಸಿ ತಾಣ ಧಾರ್ಮಿಕ ಕ್ಷೇತ್ರದಲ್ಲಿ ಸಡಗರದಿಂದ ಆಚರಿಸಲಾಯಿತು.
ಧ್ವಜಾರೋಹಣ ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷೆ
ಕನ್ನಡಪ್ರಭ ವಾರ್ತೆ ಗೋಕರ್ಣ೭೭ನೇ ಗಣರಾಜ್ಯೋತ್ಸವವನ್ನು ಪ್ರವಾಸಿ ತಾಣ ಧಾರ್ಮಿಕ ಕ್ಷೇತ್ರದಲ್ಲಿ ಸಡಗರದಿಂದ ಆಚರಿಸಲಾಯಿತು.
ಇಲ್ಲಿನ ರಥಬೀದಿಯ ಸುಭಾಷ್ ಚೌಕದಲ್ಲಿ ನಡೆದ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷೆ ಸುಮನಾ ಗೌಡ ಧ್ವಜಾರೋಹಣ ನೆರವೇರಿಸಿದರು.ನಂತರ ಮಾತಾಡಿದ ಅವರು, ಸಂವಿಧಾನವನ್ನು ಅರಿತು ಗೌರವಿಸಿ ಅದರಂತೆ ನಾವು ಸಾಮರಸ್ಯದ ಬದುಕನ್ನು ಕಟ್ಟಿಕೊಂಡು ಸಮಾಜದ ಒಳಿತಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು. ಇದೇ ಸಂದರ್ಭದಲ್ಲಿ ಪ್ರವಾಸಿ ತಾಣದ ಸ್ವಚ್ಛತೆ ಪ್ರತಿಯೊಬ್ಬರ ಸಹಕಾರ ಕೋರಿದರು. ಇದಕ್ಕೂ ಮೊದಲು ಪೊಲೀಸ್ ಧ್ವಜವಂದನೆ ನಡೆಯಿತು.
ತಾರಮಕ್ಕಿ, ಆಡುಕಟ್ಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು, ಭದ್ರಕಾಳಿ ಸಂಯುಕ್ತ ಪದವಿ ಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗ, ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿಗಳು , ಗ್ರಾಮ ಪಂಚಾಯತ್ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಶಿಕ್ಷಕ ವೃಂದದವರು ನಾಗರಿಕರು ಈ ರಾಷ್ಟ್ರೀಯ ಹಬ್ಬದಲ್ಲಿ ಪಾಲ್ಗೊಂಡಿದ್ದರು.ಕಾರ್ಯಕ್ರಮದ ನಂತರ ಸಿಹಿ ವಿತರಿಸಿ ಶುಭ ಕೋರಲಾಯಿತು. ಬಳಿಕ ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನ ರಥಬೀದಿಯಿಂದ ಮುಖ್ಯಕಡಲತೀರದವರೆಗೆ ಸಾಗಿ ಮರಳಿತು.
ಜೊತೆಗೆ ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರ, ಪೊಲೀಸ್ ಠಾಣೆ, ಬಸ್ ನಿಲ್ದಾಣ, ಖಾಸಗಿ ಸಂಸ್ಥೆ, ಸರಕಾರಿ, ಖಾಸಗಿ ಶಾಲಾ ಕಾಲೇಜುಗಳಲ್ಲಿ ಸಹ ಗಣರಾಜ್ಯೋತ್ಸವ ಆಚರಿಸಲಾಯಿತು.ಇನ್ನು ಗ್ರಾಮೀಣ ಪ್ರದೇಶವಾದ ನಾಡುಮಾಸ್ಕೇರಿ, ಗಂಗಾವಳಿ, ಕಿಕೊಡ್ಲ, ತದಡಿ, ಹೊಸ್ಕಟ್ಟ, ತೋರ್ಕೆ, ಮಾದನಗೇರಿ ಹಿರೇಗುತ್ತಿ, ಬರ್ಗಿ ಮತ್ತಿತರ ಕಡೆಗಳಲ್ಲಿನ ಶಾಲಾ, ಕಾಲೇಜು, ಸರಕಾರಿ ಕಚೇರಿ, ಬ್ಯಾಂಕ್ ಖಾಸಗಿ ಸಂಘ-ಸಂಸ್ಥೆಗಳಲ್ಲಿ ಧ್ವಜಾರೋಹಣ ನೆರವೇರಿಸಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸ್ಮರಿಸಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.