ಸಾರಾಂಶ
Build a Kannada literature hall modeled after a theater
-ಅಂಬೇಡ್ಕರ್ ಜಾನಪದ ಕಲಾ ಸಂಘದಿಂದ ಕಸಾಪ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್‌ಗೆ ಮನವಿ
-----ಕನ್ನಡಪ್ರಭ ವಾರ್ತೆ ಭದ್ರಾವತಿ
ನಗರದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕನ್ನಡ ಸಾಹಿತ್ಯ ಭವನದ ಸಭಾಮಂಟಪ ರಂಗಮಂದಿರದ ಮಾದರಿಯಲ್ಲಿ ನಿರ್ಮಾಣಗೊಳಿಸುವಂತೆ ಅಂಬೇಡ್ಕರ್ ಜಾನಪದ ಕಲಾ ಸಂಘದಿಂದ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಅವರಿಗೆ ಮನವಿ ಸಲ್ಲಿಸಲಾಯಿತು.ನ್ಯೂಟೌನ್ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ನೂತನ ಕನ್ನಡ ಸಾಹಿತ್ಯ ಭವನ ನಿರ್ಮಾಣ ಸಂಬಂಧ ಏರ್ಪಡಿಸಲಾಗಿದ್ದ ಸಭೆಯಲ್ಲಿ ಮನವಿ ಸಲ್ಲಿಸಲಾಯಿತು.
ನಗರದಲ್ಲಿ ರಂಗಮಂದಿರದ ಕೊರತೆ ಇದ್ದು, ಈ ಹಿನ್ನಲೆಯಲ್ಲಿ ನಾಟಕಗಳು ಹೆಚ್ಚು ಪ್ರದರ್ಶನಗೊಳ್ಳುತ್ತಿಲ್ಲ. ಬಾಡಿಗೆಗೆ ಕಲ್ಯಾಣ ಮಂಟಪಗಳಿಗೆ ಹಣ ಕೊಟ್ಟು ನಾಟಕ ಪ್ರದರ್ಶನ ಮಾಡುವುದು ಅಸಾಧ್ಯವಾಗಿದೆ. ಕೆಲವು ರಂಗ ತಂಡಗಳು ಮತ್ತು ರಂಗ ಕಲಾವಿದರು ನಾಟಕ ಪ್ರದರ್ಶನ ಮಾಡಲು ಉತ್ಸುಕರಾಗಿದ್ದಾರೆ. ಅಲ್ಲದೆ ಪ್ರಸ್ತುತ ರಂಗ ಚಟುವಟಿಕೆಗಳು ಕಣ್ಮರೆಯಾಗುತ್ತಿದ್ದು, ಇವುಗಳನ್ನು ಉಳಿಸಿಕೊಳ್ಳುವುದು ಅಗತ್ಯವಾಗಿದೆ. ಈ ಹಿನ್ನಲೆಯಲ್ಲಿ ನೂತನ ಕನ್ನಡ ಸಾಹಿತ್ಯ ಭವನದ ಸಭಾಮಂಟಪ ರಂಗಮಂದಿರದ ಮಾದರಿಯಲ್ಲಿ ನಿರ್ಮಾಣ ಮಾಡಬೇಕೆಂದು ಮನವಿಯಲ್ಲಿ ಕೋರಲಾಗಿದೆ.ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೋಡ್ಲು ಯಜ್ಞಯ್ಯ, ಕಸಾಪ ಭವನ ನಿರ್ಮಾಣ ಸಮಿತಿ ಅಧ್ಯಕ್ಷೆ, ಎಮರಿಟಸ್ ಪ್ರಾಧ್ಯಾಪಕಿ ಡಾ. ವಿಜಯದೇವಿ, ಸಮಿತಿ ಪ್ರಮುಖರಾದ ಡಿ. ಪ್ರಭಾಕರ ಬೀರಯ್ಯ, ಜಾನಪದ ಪರಿಷತ್ ಹಿರಿಯೂರು ಹೋಬಳಿ ಘಟಕದ ಅಧ್ಯಕ್ಷ ಜಯರಾಂ ಗೊಂದಿ, ಅಂಬೇಡ್ಕರ್ ಜಾನಪದ ಕಲಾ ಸಂಘದ ತಮಟೆ ಜಗದೀಶ್, ದಿವಾಕರ್, ರವಿಕುಮಾರ್ ಉಪಸ್ಥಿತರಿದ್ದರು. ----
ಡಿ೨೮-ಬಿಡಿವಿಟಿ೨ಭದ್ರಾವತಿ ನಗರದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕನ್ನಡ ಸಾಹಿತ್ಯ ಭವನದ ಸಭಾಮಂಟಪ ರಂಗಮಂದಿರದ ಮಾದರಿಯಲ್ಲಿ ನಿರ್ಮಾಣಗೊಳಿಸುವಂತೆ ಅಂಬೇಡ್ಕರ್ ಜಾನಪದ ಕಲಾ ಸಂಘದಿಂದ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಅವರಿಗೆ ಮನವಿ ಸಲ್ಲಿಸಲಾಯಿತು.