ರಾಜ್ಯದಲ್ಲಿ ಹೆಚ್ಚಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಿ

| Published : Mar 21 2024, 01:45 AM IST

ರಾಜ್ಯದಲ್ಲಿ ಹೆಚ್ಚಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ಬಿಜೆಪಿಯ ಸಂಕಲ್ಪ ಪತ್ರಕ್ಕೆ ಉದ್ಯಮಿಗಳು ಸಲಹೆ ನೀಡಿದ್ದು, ರಾಜ್ಯದಲ್ಲಿ ಹೆಚ್ಚು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವಂತೆ ಸಲಹೆ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ರಾಜ್ಯದಲ್ಲಿ ಹೆಚ್ಚಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳ ಅಗತ್ಯತೆ ಮತ್ತು ಪ್ರವಾಸೋದ್ಯಮಕ್ಕೆ ಹೆಚ್ಚಿನ ಗಮನ ನೀಡಬೇಕು ಎಂದು ಬಿಜೆಪಿಯ ಸಂಕಲ್ಪ ಪತ್ರಕ್ಕೆ ಸಲಹೆಗಳನ್ನು ನೀಡಲಾಗಿದೆ.

ಬುಧವಾರ ಎಫ್‍ಕೆಸಿಸಿಐ ಮತ್ತು ಬಿಜೆಪಿ ಆರ್ಥಿಕ ಪ್ರಕೋಷ್ಠದ ಸಹಯೋಗದಲ್ಲಿ ವ್ಯಾಪಾರ, ಉದ್ಯಮ ಮತ್ತು ವೃತ್ತಿಪರರಿಂದ ಲೋಕಸಭೆ ಚುನಾವಣೆಗೆ ಬಿಜೆಪಿಯ ಸಂಕಲ್ಪ ಪತ್ರಕ್ಕಾಗಿ ಸಲಹೆಗಳನ್ನು ಆಹ್ವಾನಿಸುವ ಸಂವಾದ ಸಭೆ ನಡೆಸಲಾಯಿತು.

ಸಭೆಯಲ್ಲಿ ವ್ಯವಹಾರವನ್ನು ಸುಲಭಗೊಳಿಸಲು ಮತ್ತು ಸಣ್ಣ ಮತ್ತು ಅತಿಸಣ್ಣ ಉದ್ಯಮ ವಲಯಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಪ್ರಮುಖವಾಗಿ ಸಲಹೆಗಳನ್ನು ಉದ್ಯಮಿಗಳು ನೀಡಿದರು. ಅಲ್ಲದೇ, ಎಂಎಸ್‍ಎಂಇಗಳಿಗೆ ನಿರ್ಗಮನ ನೀತಿ ಮತ್ತು ಬೆಳವಣಿಗೆಗೆ ತಂತ್ರಜ್ಞಾನದ ಮಧ್ಯಸ್ಥಿಕೆಯ ಅಗತ್ಯತೆ ಕುರಿತು ಪ್ರತಿಪಾದಿಸಲಾಯಿತು.

ಆದಾಯ ತೆರಿಗೆ ಮತ್ತು ಜಿಎಸ್‍ಟಿ, ಜಿಎಸ್‍ಟಿ ಸ್ಲ್ಯಾಬ್‍ಗಳ ತರ್ಕಬದ್ಧಗೊಳಿಸುವಿಕೆ, ಜಿಎಸ್‍ಟಿಯಲ್ಲಿ ಮರುಪಾವತಿಯ ಯಾಂತ್ರೀಕೃತಗೊಳಿಸುವಿಕೆ ಮತ್ತು ಪೆಟ್ರೋಲ್, ಡೀಸೆಲ್‍ಗಳನ್ನು ಜಿಎಸ್‍ಟಿಯ ವ್ಯಾಪ್ತಿಯಲ್ಲಿ ತರಬೇಕಾದ ಅಗತ್ಯತೆಗಳ ಕುರಿತು ಚರ್ಚೆ ನಡೆಸಲಾಯಿತು. ಇದೇ ವೇಳೆ ವ್ಯಾಪಾರಿಗಳಿಗೆ ಕೆಲವು ನಿಯಮಗಳಿಂದ ಆಗುತ್ತಿರುವ ಸಮಸ್ಯೆಗಳ ಕುರಿತು ಬಿಜೆಪಿ ನಾಯಕರ ಗಮನ ಸೆಳೆಯಲಾಯಿತು.

ಸಭೆಯಲ್ಲಿ ಎಫ್‍ಕೆಸಿಸಿಐ ಅಧ್ಯಕ್ಷ ರಮೇಶ್ ಚಂದ್ರ ಲಾಹೋಟಿ, ಸಂಸದ ಪಿ.ಸಿ.ಮೋಹನ್, ವಿಧಾನಪರಿಷತ್‌ ಸದಸ್ಯ ಗೋಪಿನಾಥ್ ರೆಡ್ಡಿ, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್ ಸೇರಿದಂತೆ ಹಲವು ಉದ್ಯಮಿಗಳು ಭಾಗವಹಿಸಿದ್ದರು.