ಸಾರಾಂಶ
ದಾಬಸ್‍ಪೇಟೆ: ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವವಾದುದು ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಪುಟ್ಟರುದ್ರಾರಾಧ್ಯ ತಿಳಿಸಿದರು.
ದಾಬಸ್‍ಪೇಟೆ: ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವವಾದುದು ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಪುಟ್ಟರುದ್ರಾರಾಧ್ಯ ತಿಳಿಸಿದರು.
ಸೋಂಪುರ ಹೋಬಳಿಯ ದಾಸೇನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿವೃತ್ತ ಮುಖ್ಯಶಿಕ್ಷಕ ಚಿಕ್ಕಎಲ್ಲಯ್ಯ ಅವರಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.ಶಿಕ್ಷಕ ಈಶ್ವರಯ್ಯ ಮಾತನಾಡಿ, ಕಳೆದ 18 ವರ್ಷಗಳಿಂದ ಈ ಶಾಲೆಯಲ್ಲಿ ತಮ್ಮ ಬೋಧನಾ ಕೌಶಲ್ಯದಿಂದ ಶಿಕ್ಷಣ ರಂಗದಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಸರ್ವರೊಂದಿಗೆ ಉತ್ತಮ ಬಾಂಧವ್ಯದೊಂದಿಗೆ ಸಾರ್ಥಕ ಸೇವೆ ಸಲ್ಲಿಸಿದ್ದಾರೆ ಎಂದರು.ನಿವೃತ್ತ ಶಿಕ್ಷಕ ಚಿಕ್ಕ ಎಲ್ಲಯ್ಯ ಸನ್ಮಾನ ಸ್ವೀಕರಿಸಿ ಮಾತನಾಡಿದ ಶಿಕ್ಷಕ ವೃತ್ತಿ ಜೀವನದಲ್ಲಿ ಮಕ್ಕಳೊಂದಿಗೆ ಕಳೆದ ದಿನಗಳು, ಅವರನ್ನು ಶೈಕ್ಷಣಿಕವಾಗಿ ಸಾಮಾಜಿಕವಾಗಿ ತಿದ್ದಿ ಬೆಳೆಸಿದ ಸಾರ್ಥಕ ಸೇವೆ ಸಲ್ಲಿಸಿದ ತೃಪ್ತಿ ನನಗಿದೆ. ಕೆಲಸ ಮಾಡಲು ಅವಕಾಶ ನೀಡಿದ ಶಿಕ್ಷಣ ಇಲಾಖೆಗೆ, ಅಧಿಕಾರಿ ವೃಂದದವರಿಗೆ, ಸಹೋದ್ಯೋಗಿ ಮಿತ್ರರಿಗೆ, ಗ್ರಾಮಸ್ಥರಿಗೆ ಆಭಾರಿಯಾಗಿದ್ದೇನೆ ಎಂದರು.
ಇದೇ ಸಂದರ್ಭದಲ್ಲಿ ನಿವೃತ್ತ ಮುಖ್ಯಶಿಕ್ಷಕರನ್ನು ಎಸ್ ಡಿಎಂಸಿ ಸದಸ್ಯರು, ಹಳೆ ವಿದ್ಯಾರ್ಥಿಗಳು, ಗ್ರಾಮಸ್ಥರು ಸನ್ಮಾನಿಸಿ ಬೀಳ್ಕೊಟ್ಟರು.ಪೋಟೋ 1 :ಸೋಂಪುರ ಹೋಬಳಿಯ ದಾಸೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿವೃತ್ತ ಮುಖ್ಯಶಿಕ್ಷಕ ಚಿಕ್ಕಎಲ್ಲಯ್ಯ ಅವರನ್ನು ಹಳೆ ವಿದ್ಯಾರ್ಥಿಗಳು ಸನ್ಮಾನಿಸಿ ಬೀಳ್ಕೊಟ್ಟರು.