ಡಾ.ಬಿ.ಆರ್. ಅಂಬೇಡ್ಕರ್ ಅವರ ತತ್ವಗಳು ವಿಕಸಿತ ಭಾರತದ ಗುರಿಗಳಿಗೆ ದಾರಿದೀಪವಾಗಿವೆ

ಹೊಸಪೇಟೆ:ಡಾ.ಬಿ.ಆರ್. ಅಂಬೇಡ್ಕರ್ ಅವರ ತತ್ವಗಳು ವಿಕಸಿತ ಭಾರತದ ಗುರಿಗಳಿಗೆ ದಾರಿದೀಪವಾಗಿವೆ ಎಂದು ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು.

ನಗರದ ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನಾಚರಣೆಯಲ್ಲಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಶನಿವಾರ ಮಾತನಾಡಿದರು.

ಭಾರತ ದೇಶದ ಸಮಗ್ರ ಅಭಿವೃದ್ದಿ ಮತ್ತು ಸಮ ಸಮಾಜ ನಿರ್ಮಾಣದ ಕನಸು ಹೊತ್ತಿದ್ದ ಬಾಬಾ ಸಾಹೇಬರು ದೇಶಕ್ಕೆ ದೊಡ್ಡ ಸಂವಿಧಾನವನ್ನು ಕೊಡುಗೆ ನೀಡಿದ್ದಾರೆ.

ಅಂಬೇಡ್ಕರ್ ಅವರ ಪುಣ್ಯ ತಿಥಿಯಂದು ಸ್ಮರಿಸುವ ನಿಟ್ಟಿನಲ್ಲಿ ಮಹಾಪರಿನಿರ್ವಾಣ ದಿನವನ್ನು ವಿಶೇಷವಾಗಿ ಆಚರಿಸಲಾಗುತ್ತದೆ. ಭಾರತದ ಕಾನೂನು ಸುವ್ಯವಸ್ಥೆ, ಅಸ್ಪೃಶ್ಯತೆ ನಿವಾರಣೆ, ಪ್ರಜೆಗಳ ಮೂಲಭೂತ ಕರ್ತವ್ಯ, ಸಮಾನತೆ, ಶಿಕ್ಷಣ ಕ್ಷೇತ್ರ, ಇತರೆ ಹಲವು ಕ್ಷೇತ್ರಗಳಿಗೆ ಅವರು ನೀಡಿದ ಕೊಡುಗೆಗಳು ಇಂದಿಗೂ ಜೀವಂತವಾಗಿವೆ. ಭಾರತೀಯ ನ್ಯಾಯಶಾಸ್ತ್ರಜ್ಞ, ಅರ್ಥಶಾಸ್ತ್ರಜ್ಞ, ಸಮಾಜ ಸುಧಾರಕ ಮತ್ತು ರಾಜಕಾರಣಿಯಾಗಿ ಅವರು ಗುರುತಿಸಿಕೊಳ್ಳುವ ಮೂಲಕ ಸಮ ಸಮಾಜಕ್ಕಾಗಿ ಹೋರಾಡಿದ ಒಬ್ಬ ಧೀಮಂತ ನಾಯಕರು ಆಗಿದ್ದಾರೆ ಎಂದರು. ಡಾ.ಬಿ.ಆರ್.ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನಾಚರಣೆಯಲ್ಲಿ ಅವರನ್ನು ಸ್ಮರಿಸುತ್ತ ಒಂದು ನಿಮಿಷ ಮೌನಚಾರಣೆ ಮಾಡಲಾಯಿತು.

ಜಿಪಂ ಸಿಇಒ ಅಕ್ರಮ್ ಷಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ವೈ.ಎ.ಕಾಳೆ, ಮುಖಂಡರಾದ ಉಮಾಪತಿ, ಸೋಮಶೇಖರ ಬಣ್ಣದಮನೆ,

ಸೇರಿದಂತೆ ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಮುಖಂಡರು ಭಾಗವಹಿಸಿದ್ದರು.

ಹೊಸಪೇಟೆಯ ಅಂಬೇಡ್ಕರ್‌ ವೃತ್ತದಲ್ಲಿ ಶನಿವಾರ ಡಾ.ಬಿ.ಆರ್. ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನಾಚರಣೆಯಲ್ಲಿ ಅವರನ್ನು ಸ್ಮರಿಸುತ್ತ ಒಂದು ನಿಮಿಷ ಮೌನಚಾರಣೆ ಮಾಡಲಾಯಿತು. ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ, ಜಿಪಂ ಸಿಇಒ ಅಕ್ರಮ್ ಷಾ, ಎಸ್ಪಿ ಎಸ್‌. ಜಾಹ್ನವಿ ಮತ್ತಿತರರಿದ್ದರು.