ಕನಕಪುರ: ನಶಮುಕ್ತ ಭಾರತ ನಿರ್ಮಾಣ ಮಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ ಎಂದು ಅಪರ ಸಿವಿಲ್ ನ್ಯಾಯಾಧೀಶ ಹಾಗು ಜೆಎಂಎಫ್ ನ್ಯಾಯಾಲಯದ ನ್ಯಾಯಾಧೀಶರಾದ ವಿನಯ್ ವಿಠಲ್ ಕುಂದಾಪುರ ಹೇಳಿದರು
ಕನಕಪುರ: ನಶಮುಕ್ತ ಭಾರತ ನಿರ್ಮಾಣ ಮಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ ಎಂದು ಅಪರ ಸಿವಿಲ್ ನ್ಯಾಯಾಧೀಶ ಹಾಗು ಜೆಎಂಎಫ್ ನ್ಯಾಯಾಲಯದ ನ್ಯಾಯಾಧೀಶರಾದ ವಿನಯ್ ವಿಠಲ್ ಕುಂದಾಪುರ ಹೇಳಿದರು.
ತಾಲೂಕು ಕಾನೂನು ಸೇವೆಗಳ ಸಮಿತಿ, ಕನಕಪುರ ವಕೀಲರ ಸಂಘ, ಕೋಡಿಹಳ್ಳಿ ಪೊಲೀಸ್ ಠಾಣೆ ಸಂಯುಕ್ತ ಆಶ್ರಯದಲ್ಲಿ ಕೋಡಿಹಳ್ಳಿಯ ಸರ್ಕಾರಿ ಪದವಿ ಕಾಲೇಜು ಸಭಾಂಗಣದಲ್ಲಿ ನಶಮುಕ್ತ ಭಾರತ ಹಾಗೂ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಾದಕ ವಸ್ತುಗಳಿಂದ ವಿದ್ಯಾರ್ಥಿಗಳು ದೂರವಿದ್ದು, ಉತ್ತಮ ಶಿಕ್ಷಣ ಮತ್ತು ಸತ್ಪ್ರವೃತ್ತಿ ಗಳನ್ನು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ಜಾಗೃತರಾದಾಗ ಮಾತ್ರ ಸದೃಢ, ಆರೋಗ್ಯಕರ ಮತ್ತು ಸ್ವಚ್ಛ ಭಾರತ ನಿರ್ಮಾಣ ಸಾಧ್ಯ ಎಂದರು.ಪ್ರಾಂಶುಪಾಲ ಡಾ.ಕೆ.ಟಿ.ವೆಂಕಟೇಶ್ ಮಾತನಾಡಿ, ಮಾದಕ ವ್ಯಸನ ಕೇವಲ ಒಬ್ಬ ವ್ಯಕ್ತಿಯ ಸಮಸ್ಯೆಯಲ್ಲ, ಅದು ಕುಟುಂಬ ಮತ್ತು ಸಮಾಜದ ಸಮಸ್ಯೆಯೂ ಆಗಿದೆ. ಮಾದಕ ವಸ್ತುಗಳ ಸೇವನೆಯಿಂದ ವಿದ್ಯಾರ್ಥಿಗಳ ಏಕಾಗ್ರತೆ, ನೆನಪಿನ ಶಕ್ತಿ ಮತ್ತು ಆಲೋಚನಾ ಸಾಮರ್ಥ್ಯ ಕಡಿಮೆಯಾಗುತ್ತದೆ. ಕುಟುಂಬದಲ್ಲಿ ನೆಮ್ಮದಿ ಹಾಳಾಗುತ್ತದೆ. ಕೆಲವೊಮ್ಮೆ ವ್ಯಕ್ತಿ ಅಪರಾಧ ಚಟುವಟಿಕೆಗಳಿಗೂ ತೊಡಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಮಾದಕ ವ್ಯಸನ ತಡೆಗಟ್ಟುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ ಎಂದರು.
ಕನಕಪುರ ವಕೀಲರ ಸಂಘದ ಅಧ್ಯಕ್ಷ ಸಿ.ಎಂ.ಜಗದೀಶ್, ಉಪಾಧ್ಯಕ್ಷ ಮಹೇಶ್, ಕಾರ್ಯದರ್ಶಿ ಕೆ.ಎನ್.ಮಂಜುನಾಥ್, ಖಜಾಂಚಿ ವಿಮಲ, ಹಿರಿಯ ವಕೀಲ ರಾಮಚಂದ್ರ, ಪ್ರಾಂಶುಪಾಲರಾದ ಲೀಲಾವತಿ, ಸಾರ್ವಜನಿಕ ಆರೋಗ್ಯ ಇಲಾಖೆ ಡಾ.ಸುಪ್ರೀತ್, ಪಿಎಸ್ಐ ಪ್ರದೀಪ್ ಕುಮಾರ್, ಐಕ್ಯೂಎಸಿ ಸಂಚಾಲಕಿ ನಳಿನಾದೇವಿ, ಕೆ.ಎಂ.ಪರಮೇಶ್, ಗೀರ್ವಾಣಿ, ನಾಗರಾಜು, ಲಿಂಗರಾಜು ಉಪಸ್ಥಿತರಿದ್ದರು.ಕೆ ಕೆ ಪಿ ಸುದ್ದಿ 01:
ಕನಕಪುರ ತಾಲೂಕಿನ ಕೋಡಿಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಕ್ರಮಕ್ಕೆ ಸಿವಿಲ್ ನ್ಯಾಯಾಧೀಶ ವಿನಯ್ ವಿಠಲ್ ಕುಂದಾಪುರ ಚಾಲನೆ ನೀಡಿದರು.