ಸಾರಾಂಶ
ದೇಶವನ್ನು ರೋಗಮುಕ್ತಗೊಳಿಸಿ, ಆರೋಗ್ಯಕರ ವಾತಾವರಣ ನಿರ್ಮಿಸಿ, ಎಲ್ಲರಿಗೂ ಆರೋಗ್ಯ ಎಲ್ಲೆಡೆಯೂ ಆರೋಗ್ಯ ಎಂಬ ಮಂತ್ರದೊಂದಿಗೆ ವಿದ್ಯಾರ್ಥಿಗಳು ಗ್ರಾಮಗಳಲ್ಲಿ ಆರೋಗ್ಯಕರ ಮಾಹಿತಿ ಕುರಿತು ಅರಿವು ಮೂಡಿಸಬೇಕು.
ಕುಕನೂರು:
ಆರೋಗ್ಯಕರ ಸಮಾಜ ನಿರ್ಮಾಣದ ಅಗತ್ಯತೆ ಇದೆ ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವ್ಹಿ.ಪಿ. ಹೇಳಿದರು.ತಾಲೂಕಿನ ತಳಬಾಳ-ತಳಕಲ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರುಗಿದ ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರೋಗ್ಯಕರ ಆರಂಭಗಳು ಮತ್ತು ಭರವಸೆಯ ಭವಿಷಕ್ಕಾಗಿ ಘೋಷವಾಕ್ಯದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಇಲಾಖೆಯ ಯೋಜನೆ ಸದುಪಯೋಗ ಪಡೆದುಕೊಂಡು ದೇಶವನ್ನು ರೋಗಮುಕ್ತಗೊಳಿಸಿ, ಆರೋಗ್ಯಕರ ವಾತಾವರಣ ನಿರ್ಮಿಸಿ, ಎಲ್ಲರಿಗೂ ಆರೋಗ್ಯ ಎಲ್ಲೆಡೆಯೂ ಆರೋಗ್ಯ ಎಂಬ ಮಂತ್ರದೊಂದಿಗೆ ವಿದ್ಯಾರ್ಥಿಗಳು ಗ್ರಾಮಗಳಲ್ಲಿ ಆರೋಗ್ಯಕರ ಮಾಹಿತಿ ಕುರಿತು ಅರಿವು ಮೂಡಿಸಬೇಕು ಎಂದರು.ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಸವಿತಾ ಮಾತನಾಡಿ, ಹದಿ-ಹರೆಯದವರು ಪೌಷ್ಟಿಕ ಆಹಾರ ಸೇವಿಸಬೇಕು. ತರಕಾರಿ, ಮೊಳಕೆಕಾಲು, ಹಾಲು, ಹಣ್ಣು-ಹಂಪಲು, ಹಸಿರು ಸೊಪ್ಪು ಹೆಚ್ಚಾಗಿ ದಿನನಿತ್ಯದ ಆಹಾರಗಳಲ್ಲಿ ಬಳಸಬೇಕು ಎಂದು ತಿಳಿಸಿದರು.
ಸಮುದಾಯ ಆರೋಗ್ಯಾಧಿಕಾರಿ ಮಹೇಶ, ಸಾಂಕ್ರಾಮಿಕ, ಅಸಾಂಕ್ರಾಮಿಕ ರೋಗಗಳ ನಿಯಂತ್ರಣ ಕುರಿತು ಮಾತನಾಡಿದರು.ಪ್ರಾಂಶುಪಾಲರಾದ ಡಾ. ಶುಭಾ, ಅಧಿಕಾರಿ ಸರಸ್ವತಿ, ಆರೋಗ್ಯ ನಿರೀಕ್ಷಣಾಧಿಕಾರಿ ಪ್ರದೀಪಕುಮಾರ, ಸಹಾಯಕ ಪ್ರಾಧ್ಯಾಪಕ ಈ.ಆರ್. ಲಗಳೂರು, ಸುರೇಶಕುಮಾರ, ಪುಷ್ಪಾವತಿ ಕೊನಸಾರಿ, ಉಪನ್ಯಾಸಕರಾದ ಸಂತೋಷ ಕುಮಾರ ಜಾವಿ, ಮಲ್ಲಪ್ಪ ಸತ್ತೂರು, ಗ್ರಂಥಪಾಲಕ ವಸುಧಾ ಬಿ.ಎಚ್., ದೈಹಿಕ ನಿರ್ದೇಶಕರಾದ ಲಕ್ಷ್ಮೀದೇವಿ ಡಿ., ಆಶಾ ಕಾರ್ಯಕರ್ತೆಯರು ಹಾಗೂ ಇತರೆ ಸಿಬ್ಬಂದಿ ಇದ್ದರು.