ಎಕ್ಸೆಲ್ ಪದವಿಪೂರ್ವ ಕಾಲೇಜು ರಾಜ್ಯದ ಪ್ರತಿಷ್ಠಿತ ಕಾಲೇಜುಗಳ ಪಟ್ಟಿಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದು, ಈ ಕಾಲೇಜಿನಿಂದ ವಿದ್ಯಾರ್ಜನೆ ಪಡೆದು ಹೊರಹೊಮ್ಮುತ್ತಿರುವ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಬಲ್ಲರು. ಆರೋಗ್ಯವಂತ ಸಮಾಜ ನಿರ್ಮಾಣ ಎಕ್ಸೆಲ್ ನಂತಹ ಶಿಕ್ಷಣ ಸಂಸ್ಥೆಯಿಂದ ಸಾಧ್ಯ ಎಂದು ದ.ಕ. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮರೆಡ್ಡಿ ಹೇಳಿದ್ದಾರೆ.
ಬೆಳ್ತಂಗಡಿ: ಎಕ್ಸೆಲ್ ಪದವಿಪೂರ್ವ ಕಾಲೇಜು ರಾಜ್ಯದ ಪ್ರತಿಷ್ಠಿತ ಕಾಲೇಜುಗಳ ಪಟ್ಟಿಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದು, ಈ ಕಾಲೇಜಿನಿಂದ ವಿದ್ಯಾರ್ಜನೆ ಪಡೆದು ಹೊರಹೊಮ್ಮುತ್ತಿರುವ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಬಲ್ಲರು. ಆರೋಗ್ಯವಂತ ಸಮಾಜ ನಿರ್ಮಾಣ ಎಕ್ಸೆಲ್ ನಂತಹ ಶಿಕ್ಷಣ ಸಂಸ್ಥೆಯಿಂದ ಸಾಧ್ಯ ಎಂದು ದ.ಕ. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮರೆಡ್ಡಿ ಹೇಳಿದ್ದಾರೆ.
ಗುರುವಾಯನಕೆರೆ ಎಕ್ಸೆಲ್ ಪಿ ಯು ಕಾಲೇಜು, ಪ್ರಥಮ ವರ್ಷದ ಪದವಿ ಪೂರ್ವ ವಿದ್ಯಾರ್ಥಿಗಳ ನೇತೃತ್ವದಿಂದ ಹಮ್ಮಿಕೊಂಡಿದ್ದ ‘ಶೃಂಗ ಶೈಕ್ಷಣಿಕ ಸಾಧಕರ ಅಭಿನಂದನಾ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿಕ್ಷಣದ ಉದ್ದೇಶ ಭವಿಷ್ಯದ ಸಮಾಜ ನಿರ್ಮಾಣ ಎಂದರು.ಮುಖ್ಯ ಸಂಪನ್ಮೂಲ ವ್ಯಕ್ತಿ, ನ್ಯೂಯಾರ್ಕ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ರಮೇಶ್ ಮಯ್ಯ ಮಾತನಾಡಿ, ಎಕ್ಸೆಲ್ ವಿದ್ಯಾಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರನ್ನು ಆದರ್ಶವಾಗಿಸಿಕೊಂಡು ಭವಿಷ್ಯ ಸುಭದ್ರವಾಗಿ ನಿರ್ಮಾಣ ಮಾಡಿಕೊಳ್ಳಬೇಕು ಎಂದರು.ಮಂಗಳೂರು ಎಸ್ ವಿ ಪಿ ಕನ್ನಡ ಅಧ್ಯಯನ ಸಂಸ್ಥೆ ಪ್ರಾಧ್ಯಾಪಕ ಡಾ. ಧನಂಜಯ ಕುಂಬ್ಳೆ ಶೈಕ್ಷಣಿಕ ಸಾಧಕರನ್ನು ಸನ್ಮಾನಿಸಿದರು.ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಶೈಕ್ಷಣಿಕ ಸಾಧಕರಿಗೆ ಸನ್ಮಾನವನ್ನು ಮಾಡಿ ಅಭಿನಂದಿಸಿದರು. ಶ್ರೀ ಸತ್ಯ ದೇವತಾ ದೇವಸ್ಥಾನ ಅಳದಂಗಡಿಯ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.
‘ಸಾಧನೆ ವ್ಯಕ್ತಿಯ ಹೊಣೆಗಾರಿಕೆಯನ್ನು ವಿಶಾಲಗೊಳಿಸುತ್ತದೆ'''''''''''''''' ಸಾಧನೆ ಎಂಬುದು ನಿರಂತರ ಪ್ರಕ್ರಿಯೆಯಾಗಿದ್ದು, ವಿದ್ಯಾರ್ಥಿಗಳಲ್ಲಿ ಸಾಧಿಸಬೇಕೆನ್ನುವ ಛಲ ಇನ್ನಷ್ಟು ವೃದ್ಧಿಯಾಗಲಿ ಎಂದು ಸುಮಂತ್ ಕುಮಾರ್ ಜೈನ್ ಅಧ್ಯಕ್ಷೀಯ ಭಾಷಣದಲ್ಲಿ ಹೇಳಿದರು.ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಪ್ರಾಚಾರ್ಯ ಡಾ.ನವೀನ್ ಕುಮಾರ್ ಮರಿಕೆ ಸ್ವಾಗತಿಸಿದರು. ಉಪ ಪ್ರಾಚಾರ್ಯ ರೋಹಿತ್ ವಂದಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕ ಪ್ರಸನ್ನ ಭೋಜ, ಅರುಣ್ ಕ್ರಾಸ್ಟೋಲಿನ್, ಅನನ್ಯ ಜೈನ್ ಮತ್ತು ಕನ್ನಡ ಉಪನ್ಯಾಸಕ ಮೊಹಮ್ಮದ್ ಮುನೀರ್ ಇಂಗ್ಲೀಷ್ ಉಪನ್ಯಾಸಕಿ ಅಂಜನಿ ರಾವ್ ನಿರೂಪಿಸಿದರು.ಪ್ರಾಚಾರ್ಯ ಡಾ. ಪ್ರಜ್ವಲ್ ಕಜೆ, ಎಕ್ಸೆಲ್ ಟೆಕ್ನೊ ಸ್ಕೂಲ್ ಮುಖ್ಯೋಪಾಧ್ಯಾಯ ಸುಮಿತ್ರಾ, ಆಡಳಿತಾಧಿಕಾರಿ ಕೀರ್ತಿನಿಧಿ ಜೈನ್, ಸಂಯೋಜಕ ನಿಶಾ ಪೂಜಾರಿ, ಶ್ರೀನಿಧಿ, ವೇಣೂರು ಎಕ್ಸೆಲ್ ಸ್ಕೂಲ್ ಮುಖ್ಯೋಪಾಧ್ಯಾಯ ಶಾಂತಿರಾಜ್ ಜೈನ್, ನಿಲಯ ಮೇಲ್ವಿಚಾರಕರಾದ ಮಲ್ಲೇಶ್ ಜೈನ್ ಮತ್ತಿತರರಿದ್ದರು.