ರಾಮನಗರ: ನಗರದ ಎಲ್ಲಾ ವಾರ್ಡುಗಳಲ್ಲಿ ಮೂಲಸೌಕರ್ಯಗಳ ಸಮಸ್ಯೆ ಇದೆ. ಹಂತಹಂತವಾಗಿ ಎಲ್ಲಾ ಕೊರತೆಗಳನ್ನು ನೀಗಿಸುವ ಮೂಲಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಶಯದಂತೆ ರಾಮನಗರವನ್ನು ಮಾದರಿ ನಗರವನ್ನಾಗಿ ರೂಪಿಸಲಾಗುವುದು ಎಂದು ನಗರಸಭಾಧ್ಯಕ್ಷ ಕೆ.ಶೇಷಾದ್ರಿ ಹೇಳಿದರು
ರಾಮನಗರ: ನಗರದ ಎಲ್ಲಾ ವಾರ್ಡುಗಳಲ್ಲಿ ಮೂಲಸೌಕರ್ಯಗಳ ಸಮಸ್ಯೆ ಇದೆ. ಹಂತಹಂತವಾಗಿ ಎಲ್ಲಾ ಕೊರತೆಗಳನ್ನು ನೀಗಿಸುವ ಮೂಲಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಶಯದಂತೆ ರಾಮನಗರವನ್ನು ಮಾದರಿ ನಗರವನ್ನಾಗಿ ರೂಪಿಸಲಾಗುವುದು ಎಂದು ನಗರಸಭಾಧ್ಯಕ್ಷ ಕೆ.ಶೇಷಾದ್ರಿ ಹೇಳಿದರು.
ನಗರದ 31ನೇ ವಾರ್ಡಿನ ಅರ್ಚಕರಹಳ್ಳಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಂದು ವಾರ್ಡಿನಲ್ಲಿ ಒಂದಲ್ಲ ಒಂದು ಸಮಸ್ಯೆ ಇದೆ. ಹೀಗಾಗಿ ನಗರದ ಸರ್ವಾಂಗೀಣ ಅಭಿವೃದ್ದಿಗಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮರ್ ಅವರನ್ನು ಭೇಟಿ ಮಾಡಿ ಅವರ ಗಮನ ಸೆಳೆದಿದ್ದೇವೆ. ಅವರು ಸಹ ಅಭಿವೃದ್ದಿಯ ವಿಚಾರದಲ್ಲಿ ಆಸಕ್ತಿ ವಹಿಸಿದ್ದಾರೆ ಎಂದರು.ನಗರದಲ್ಲಿ 1, 22, 23, 24, 25 ಮತ್ತು 31ನೇ ವಾರ್ಡುಗಳು ಅತಿ ದೊಡ್ಡ ವಿಸ್ತೀರ್ಣವನ್ನು ಹೊಂದಿವೆ. ಈ ವಾರ್ಡಿನಲ್ಲಿ ಹೊಸ ಹೊಸ ಬಡಾವಣೆಗಳು ತಲೆ ಎತ್ತುತ್ತಿದ್ದು, ಮೂಲ ಸೌಕರ್ಯಗಳ ಕೊರತೆ ಇದೆ. ಆ ಕೊರತೆಗಳನ್ನು ನೀಗಿಸಲು ಪ್ರತಿ ವಾರ್ಡಿಗೆ 25 ಕೋಟಿ ರು. ಅನುದಾನವೂ ಸಾಕಾಗುವುದಿಲ್ಲ. ಆದರೂ ಅತ್ಯಗತ್ಯವಾಗಿ ಆಗಬೇಕಾಗಿರುವ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದೇವೆ ಎಂದು ಹೇಳಿದರು.
ನಗರದ ಎಲ್ಲಾ ವಾರ್ಡುಗಳಲ್ಲಿ ನಗರೋತ್ಥಾನ, ಯುಡಿಎಫ್, ಅಲ್ಪಸಂಖ್ಯಾತರ ಕಲ್ಯಾಣ ನಿಧಿ ಮತ್ತು ನಗರಸಭಾ ನಿಧಿಯನ್ನು ಬಳಸಿಕೊಂಡು ಅಭಿವೃದ್ದಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಜನರ ಬೇಡಿಕೆಗಳನ್ನು ಆಧರಿಸಿ, ಅವಶ್ಯಕವಿರುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಹಂತ ಹಂತವಾಗಿ ಎಲ್ಲಾ ಮೂಲ ಸೌಕರ್ಯಗಳ ಕೊರತೆಯನ್ನು ನೀಗಿಸಲಾಗುವುದು. ಡಿಕೆಶಿ ಅವರ ಆಶಯದಂತೆ ಮಾದರಿ ನಗರವನ್ನಾಗಿ ರೂಪಿಸಲು ಸಾರ್ವಜನಿಕರ ಸಹಕಾರವೂ ಅತ್ಯಗತ್ಯವಾಗಿ ಬೇಕಾಗಿದೆ ಎಂದು ತಿಳಿಸಿದರು.ಮಾದರಿ ನಗರವನ್ನಾಗಿ ರೂಪಿಸಲು ಸಂಕಲ್ಪ ಮಾಡಿದ್ದೇವೆ. ಈ ವಿಚಾರದಲ್ಲಿ ಮುಂದಿಟ್ಟ ಹೆಜ್ಜೆಯನ್ನು ಹಿಂತೆಗೆಯುವುದಿಲ್ಲ. ಜನರು ನಿರಾಶರಾಗಬಾರದು ಎಂದು ಕೆ.ಶೇಷಾದ್ರಿ ಹೇಳಿದರು.
ಅರ್ಚಕರಹಳ್ಳಿಯ ಟ್ರಾಕ್ಟರ್ ಶೋರೂಂನಿಂದ ಸರ್ಕಾರಿ ಶಾಲೆಯವರೆಗಿನ 230 ಅಡಿ ಉದ್ದದ ಆಸ್ಫಾಲ್ಟ್ ರಸ್ತೆಯನ್ನು ನಗರೋತ್ಥಾನ ಅನುದಾನದಲ್ಲಿ 1.17 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ದಿ ಪಡಿಸಲಾಗುತ್ತಿದೆ. ಅರ್ಚಕರಹಳ್ಳಿಯಲ್ಲಿ ನಾಗರಿಕರು ಹಲವಾರು ಸಮಸ್ಯೆಗಳ ಬಗ್ಗೆ ಗಮನ ಸೆಳೆದಿದ್ದಾರೆ. ಹಂತ ಹಂತವಾಗಿ ಎಲ್ಲ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದರು.ನಗರಸಭೆ ಸದಸ್ಯೆ ವಿಜಯ ಕುಮಾರಿ, ಮುಖಂಡರಾದ ವೇದ ಮೂರ್ತಿ, ದೀಪು, ವಿಜಯ್ ಕುಮಾರ್, ರಂಗಸ್ವಾಮಿ, ಎಇ ವಿಶ್ವನಾಥ್, ನಿರ್ಮಲಾ, ಗುತ್ತಿಗೆದಾರ ಗೋವಿಂದ ಮತ್ತಿತರರು ಹಾಜರಿದ್ದರು.
16ಕೆಆರ್ ಎಂಎನ್ 3.ಜೆಪಿಜಿರಾಮನಗರದ ಅರ್ಚಕರಹಳ್ಳಿಯಲ್ಲಿ ರಸ್ತೆ ನಿರ್ಮಾಣಕ್ಕೆ ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಭೂಮಿ ಪೂಜೆ ನೆರವೇರಿಸಿದರು.