ಹಿರಿಯರಲ್ಲಿ ಆತ್ಮವಿಶ್ವಾಸ ಮೂಡಿಸುವುದು ಪ್ರತಿಯೊಬ್ಬರ ಜವಾಬ್ಧಾರಿ: ನ್ಯಾ. ಕು. ಶೋಭಾ

| Published : Oct 27 2024, 02:09 AM IST

ಹಿರಿಯರಲ್ಲಿ ಆತ್ಮವಿಶ್ವಾಸ ಮೂಡಿಸುವುದು ಪ್ರತಿಯೊಬ್ಬರ ಜವಾಬ್ಧಾರಿ: ನ್ಯಾ. ಕು. ಶೋಭಾ
Share this Article
  • FB
  • TW
  • Linkdin
  • Email

ಸಾರಾಂಶ

Building confidence in seniors is everyone's responsibility: Shobha

-ಹಿರಿಯ ನಾಗರಿಕರ ದಿನಾಚರಣೆ ಕುರಿತು ಕಾನೂನು ಅರಿವು-ನೆರವು ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ ಶಹಾಪುರಹಿರಿಯರಿಲ್ಲದ ಮನೆ ಇಲ್ಲ ಗುರುವಿಲ್ಲದ ಮಠವಿಲ್ಲ. ಎನ್ನುವಂತೆ ಹಿರಿಯ ನಾಗರಿಕರು ಸಮಾಜದಲ್ಲಿ ಗೌರವಯುತವಾಗಿ ಉತ್ತಮ ಗುಣಮಟ್ಟದ ಜೀವನ ನಡೆಸಲು ಅನುವು ಮಾಡಿಕೊಡುವುದು ಪ್ರತಿಯೊಬ್ಬ ನಾಗರಿಕರ ಜವಾಬ್ಧಾರಿ. ಅವರಿಗೆ ಸಾಂತ್ವನದ ಮಾತುಗಳನ್ನಾಡಿ ಅವರೊಂದಿಗೆ ನಾವಿದ್ದೇವೆ ಎಂಬ ಆತ್ಮವಿಶ್ವಾಸವನ್ನು ಮೂಡಿಸಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶೆ ಹಾಗೂ ಸದಸ್ಯ ಕಾರ್ಯದರ್ಶಿ ತಾಲೂಕು ಕಾನೂನು ಸೇವೆಗಳ ಸಮಿತಿಯ ನ್ಯಾ. ಕು. ಶೋಭಾ ತಿಳಿಸಿದರು.

ನಗರದ ಪೊಲೀಸ್ ಠಾಣೆ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು. ತಾಲೂಕು ಕಾನೂನು ಸೇವೆಗಳ ಸಮಿತಿ, ಶಹಾಪುರ, ತಾಲೂಕ ವಕೀಲರ ಸಂಘ, ಪೊಲೀಸ್‌ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಹಿರಿಯ ನಾಗರಿಕರ ದಿನಾಚರಣೆ ಕುರಿತು ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಸಸಿಗೆ ನೀರು ಎರೆದು ಉದ್ಘಾಟಿಸಿ ಮಾತನಾಡಿದ ಅವರು, ಹಿರಿಯ ನಾಗರಿಕರು ಕೆಲಸದ ನಿಮಿತ್ತ ಯಾವುದೇ ಕಚೇರಿಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ಅವರನ್ನು ಗೌರವದಿಂದ ಕಾಣುವುದರೊಂದಿಗೆ ಅವರಿಗೆ ಮೊದಲ ಆದ್ಯತೆ ನೀಡಬೇಕು ಎಂದರು.

ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ಯಾನಲ್ ವಕೀಲೆ ಸತ್ಯಮ್ಮ ಅವರು, ಇತ್ತೀಚೆಗೆ ಬದಲಾದ ದಿನಮಾನಗಳಲ್ಲಿ ಅವಿಭಕ್ತ ಕುಟುಂಬಗಳು ಕಣ್ಮರೆಯಾಗುತ್ತಿದ್ದು, ವಿಭಕ್ತ ಕುಟುಂಬಗಳೇ ಜಾಸ್ತಿ ಆಗುತ್ತಿವೆ. ಪತಿ- ಪತ್ನಿ, ಮಕ್ಕಳು ಮಾತ್ರ ಕುಟುಂಬ ಎಂದು ಭಾವಿಸುವ ಈಗಿನ ಯುವಪೀಳಿಗೆಯ ಮನಸ್ಥಿತಿಯಿಂದಾಗಿ ಆ ಮನೆಯಲ್ಲಿರಬೇಕಾದ ಹಿರಿಯರಿಗೆ ಜಾಗ ಇಲ್ಲದಂತಾಗುತ್ತಿದೆ. ಇದ್ದರೂ ಆ ಹಿರಿ ಜೀವಿಗಳಿಗೆ ಸಿಗಬೇಕಾದ ಗೌರವ, ಸ್ಥಾನಮಾನಕ್ಕೆ ಧಕ್ಕೆ ಉಂಟಾಗುತ್ತಿರುವ ಪರಿಣಾಮ ಅವರು ಖಿನ್ನತೆಗೆ ಒಳಾಗುತ್ತಿದ್ದಾರೆ ಎಂದರು.

ಹಿರಿಯರನ್ನು ಕಡೆಗಣಿಸಿದರೆ ಮುಂದಿನ ದಿನಗಳಲ್ಲಿ ನಮ್ಮ ಮಕ್ಕಳು ನಮ್ಮನ್ನು ಕಡೆಗಣಿಸುವುದರಲ್ಲಿ ತಪ್ಪೇನಿಲ್ಲ. ನಾವು ಹಿರಿಯರನ್ನು ಗೌರವದಿಂದ ನೋಡಿಕೊಂಡರೆ ನಮ್ಮ ಮಕ್ಕಳು ನಮ್ಮನ್ನು ಗೌರವರಿಂದ ಕಾಣುತ್ತಾರೆ. ಪ್ರತಿಯೊಬ್ಬರು ಹಿರಿಯರನ್ನು ಗೌರವದಿಂದ ಕಾಣುವಂತಹ ಸಮಾಜ ನಿರ್ಮಾಣ ಮಾಡೋಣ ಎಂದರು.

ಈ ಕಾರ್ಯಕ್ರಮದಲ್ಲಿ, ಪಿಎಸ್ಐ ಶಾಮ್ ಸುಂದರ್ ನಾಯಕ್, ಸಹಾಯಕ ಸರ್ಕಾರಿ ಅಭಿಯೋಜಕರು ದಿವ್ಯಾರಾಣಿ, ತಾಲೂಕು ವಕೀಲರ ಸಂಘದ ಅಧ್ಯಕ್ಷ ಸಂತೋಷ್ ದೇಶಮುಖ್, ಕಾರ್ಯದರ್ಶಿ ಅಂಬರೀಶ್ ಹಬ್ಬಳಿ, ಜಯಲಾಲ್ ತೋಟದ್ಮನಿ, ಎಸ್.ಎಸ್.ಕಂಚಿ ಸೇರಿದಂತೆ ಪೊಲೀಸರು, ಹಿರಿಯ ನಾಗರಿಕರು, ನಾನು ಸೇವಾ ಸಮಿತಿಯ ಸಿಬ್ಬಂದಿ ಇದ್ದರು.

------

26ವೈಡಿಆರ್‌5 : ಶಹಾಪುರ ಪೊಲೀಸ್ ಠಾಣೆ ಸಭಾಂಗಣದಲ್ಲಿ ತಾಲೂಕಾ ಕಾನೂನು ಸೇವೆಗಳ ಸಮಿತಿ, ಶಹಾಪುರ, ತಾಲೂಕ ವಕೀಲರ ಸಂಘ, ಪೊಲೀಸ್‌ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮ ನಡೆಯಿತು.