ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ಮಾನವ ಸರಪಳಿ ನಿರ್ಮಾಣ

| Published : Sep 11 2024, 01:08 AM IST

ಸಾರಾಂಶ

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಪ್ರಜಾಪ್ರಭುತ್ವ ಗಟ್ಟಿಗೊಳಿಸುವ ಮಾನವ ಸರಪಳಿ ಕಾರ್ಯಕ್ರಮವು ಸೆ.15ರ ಭಾನುವಾರ ನಡೆಯಲಿದ್ದು, ತಾಲೂಕಿನ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ವರ್ಗ ಹಾಗೂ ವಿವಿಧ ಯೋಜನೆಗಳ ಎಲ್ಲಾ ಫಲಾನುಭವಿಗಳು ಮಾನವ ಸರಪಳಿ ಕಾರ್ಯಕ್ರಮದಲ್ಲಿ ತಪ್ಪದೇ ಭಾಗವಹಿಸಬೇಕು ಎಂದು ತಹಸೀಲ್ದಾರ್ ರೇಹಾನ್‌ಪಾಷ ತಿಳಿಸಿದರು.

ಕನ್ನಡಪ್ರಭವಾರ್ತೆ ಚಳ್ಳಕೆರೆ

ಅವರು ತಾಲೂಕು ಕಚೇರಿ ಆವರಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಎರಡನೇ ಸುತ್ತಿನ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್, ಕ್ಷೇತ್ರದ ಶಾಸಕ ಟಿ. ರಘುಮೂರ್ತಿ, ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಸವಿಸ್ತಾರವಾದ ಮಾಹಿತಿ ನೀಡಿದ್ದಾರೆ. ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವುದು ಎಲ್ಲರ ಜವಾಬ್ದಾರಿ ಎಂದರು.

ವಿಶೇಷವಾಗಿ ತಾಲೂಕು ಪಂಚಾಯಿತಿ, ಶಿಕ್ಷಣ ಇಲಾಖೆ, ಸಿಡಿಪಿಒ, ಕಾರ್ಮಿಕ ಇಲಾಖೆ, ಆರೋಗ್ಯ ಇಲಾಖೆ, ಕೃಷಿ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಗಳು ತಮ್ಮ, ತಮ್ಮ ವ್ಯಾಪ್ತಿಯಲ್ಲಿ ಬರುವ ಸಂಸ್ಥೆಗಳು ಪ್ರತಿನಿಧಿಗಳು, ಸಾರ್ವಜನಿಕರಿಗೆ ಕಾರ್ಯಕ್ರಮದ ಬಗ್ಗೆ ಸ್ವಷ್ಟ ಮಾಹಿತಿ ನೀಡಿ ಅವರೂ ಸಹ ಭಾಗವಹಿಸುವಂತೆ ಮನವಿ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಸಭೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಚ್. ಶಶಿಧರ, ಬಿಇಒ ಕೆ.ಎಸ್. ಸುರೇಶ್, ಕೃಷಿ ಅಧಿಕಾರಿ ಅಶೋಕ್, ಸಿಡಿಪಿಒ ಹರಿಪ್ರಸಾದ್, ತೋಟಗಾರಿಕೆ ಅಧಿಕಾರಿ ವಿರೂಪಾಕ್ಷಪ್ಪ, ಕಾರ್ಮಿಕ ಅಧಿಕಾರಿ ಕುಸುಮ, ಆರೋಗ್ಯ ಇಲಾಖೆಯ ಎಸ್.ಬಿ. ತಿಪ್ಪೇಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.