ಸಾರಾಂಶ
ಪೊಲೀಸರು ಈ ವಸ್ತುಗಳನ್ನು ಸ್ವಾಧೀನಪಡೆಸಿಕೊಂಡು, ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆ, ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಆಕ್ಟ್, ವನ್ಯಜೀವಿ ಸಂರಕ್ಷಣಾ ಕಾಯ್ದೆ, ಕರ್ನಾಟಕ ಅಬಕಾರಿ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಉಡುಪಿ
ಹಿರಿಯಡ್ಕದ ರೌಡಿ ಶೀಟರ್ ದಿವಾಕರ್ ಆಚಾರ್ಯ ಎಂಬಾತನ ಮನೆ ಮೇಲೆ ಪೊಲೀಸರು ದಾಳಿ ನಡೆಸಿ ಸಜೀವ ಗುಂಡುಗಳು ಸೇರಿದಂತೆ ಅಕ್ರಮ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.ಬ್ರಹ್ಮಾವರ ಪೊಲೀಸ್ ಠಾಣೆಯ ಉಪನಿರೀಕ್ಷಕ ಮಧು ಬಿ.ಇ. ಅವರಿಗೆ ರೌಡಿ ದಿವಾಕರ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ಬಗ್ಗೆ ಮಾಹಿತಿ ಬಂದಿದ್ದು, ಅದರಂತೆ ತಮ್ಮ ಸಿಬ್ಬಂದಿಯೊಂದಿಗೆ ಆತನ ಮನೆಗೆ ತೆರಳಿ ಪರಿಶೀಲಿಸಿದಾಗ ಪ್ಲಾಸ್ಟಿಕ್ ಪೌಚ್‌ನಲ್ಲಿ ಪಿಸ್ತೂಲ್‌ಗೆ ಬಳಸುವ 7.65 ಎಂಎಂ ಸಜೀವ ಗುಂಡುಗಳು, ಬಟ್ಟೆ ಪೌಚ್‌ನಲ್ಲಿ ಮಸಿ ಕೋವಿಗೆ ಬಳಸುವ ಮದ್ದುಗುಂಡು, ಪ್ರತ್ಯೇಕ ಪ್ಲಾಸ್ಟಿಕ್ ಪೌಚ್‌ನಲ್ಲಿ ಡೆಟೋನೇಟರ್‌ಗಳು, ಪ್ರಾಣಿಯ ಹಲ್ಲು ಮತ್ತು ಉಗುರು, 15 ಇಂಚು ಉದ್ದದ ಹಳೆಯ ಕೋವಿಯ ಮರದ ಬಟ್, ಹಾಕಿ ಸ್ಟಿಕ್, ಸ್ಟೀಲ್ ಚಾಕುಗಳು, ಸ್ಟೀಲಿನ ದೊಡ್ಡ ಗಾತ್ರದ ಮಚ್ಚು, ಪ್ಲಾಸ್ಟಿಕ್ ಚೀಲದಲ್ಲಿದ್ದ ಒಣಗಿಸಿದ ಗಾಂಜಾ, ಪ್ಲಾಸ್ಟಿಕ್ ಕ್ಯಾನ್ನಲ್ಲಿ ತುಂಬಿಸಿಟ್ಟಿರುವ ಸ್ಪಿರೀಟ್ ಪತ್ತೆಯಾಗಿದೆ.