ಲಾರಿಗೆ ಬಸ್‌ ಡಿಕ್ಕಿ: 25 ಮಂದಿ ಗಾರ್ಮೆಂಟ್ಸ್ ನೌಕರರಿಗೆ ಗಾಯ

| Published : Dec 22 2024, 01:30 AM IST

ಲಾರಿಗೆ ಬಸ್‌ ಡಿಕ್ಕಿ: 25 ಮಂದಿ ಗಾರ್ಮೆಂಟ್ಸ್ ನೌಕರರಿಗೆ ಗಾಯ
Share this Article
  • FB
  • TW
  • Linkdin
  • Email

ಸಾರಾಂಶ

ಉಳಿದವರು ಮದ್ದೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಹೊರ ರೋಗಿಗಳಾಗಿ ಚಿಕಿತ್ಸೆ ಪಡೆದಿದ್ದಾರೆ. ಗಾಯಾಳುಗಳೆಲ್ಲರೂ ಮದ್ದೂರು ತಾಲೂಕು ಸೋಮನಹಳ್ಳಿ ಗಿಲ್ ವುಡ್ ಗಾರ್ಮೆಂಟ್ಸ್ ಕಾರ್ಖಾನೆಯ ಕಾರ್ಮಿಕರಾಗಿದ್ದಾರೆ. ಕೆಲಸ ಮುಗಿದ ನಂತರ ತಮ್ಮ ತಮ್ಮ ಗ್ರಾಮಗಳಿಗೆ ತೆರಳಲು ತಿಮ್ಮ ದಾಸ್ ಟ್ರಾವೆಲ್ಸ್ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು.

ಮದ್ದೂರು: ಪಟ್ಟಣದ ಶಿವಪುರದ ಧ್ವಜ ಸತ್ಯಾಗ್ರಹ ಸೌಧದ ಬಳಿ ಶುಕ್ರವಾರ ಸಂಜೆ ಗಾರ್ಮೆಂಟ್ಸ್ ನೌಕರರನ್ನು ಕರದೊಯ್ಯುತ್ತಿದ್ದ ಬಸ್ ಲಾರಿಗೆ ಡಿಕ್ಕಿ ಹೊಡೆದು 25 ಮಂದಿ ಗಾಯಗೊಂಡಿರುವ ಘಟನೆ ಜರುಗಿದೆ.

ತಾಲೂಕು ರಾಗಿಬೊಮ್ಮನಹಳ್ಳಿಯ ನಾಗೇಶ್ (38) ಹಾಗೂ ಆಲೂರು ಗ್ರಾಮದ ಉದಯ ಶಂಕರ್ (31) ತೀವ್ರವಾಗಿ ಗಾಯಗೊಂಡಿದ್ದಾರೆ. ಇವರಿಗೆ ಮದ್ದೂರು, ಮಂಡ್ಯ ಆಸ್ಪತ್ರೆ ಪ್ರಥಮ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಾಗೇಶನ ಸ್ಥಿತಿ ಗಂಭೀರವಾಗಿದೆ.

ಉಳಿದವರು ಮದ್ದೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಹೊರ ರೋಗಿಗಳಾಗಿ ಚಿಕಿತ್ಸೆ ಪಡೆದಿದ್ದಾರೆ. ಗಾಯಾಳುಗಳೆಲ್ಲರೂ ಮದ್ದೂರು ತಾಲೂಕು ಸೋಮನಹಳ್ಳಿ ಗಿಲ್ ವುಡ್ ಗಾರ್ಮೆಂಟ್ಸ್ ಕಾರ್ಖಾನೆಯ ಕಾರ್ಮಿಕರಾಗಿದ್ದಾರೆ. ಕೆಲಸ ಮುಗಿದ ನಂತರ ತಮ್ಮ ತಮ್ಮ ಗ್ರಾಮಗಳಿಗೆ ತೆರಳಲು ತಿಮ್ಮ ದಾಸ್ ಟ್ರಾವೆಲ್ಸ್ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು.

ಶಿವಪುರ ಸತ್ಯಾಗ್ರಹ ಸೌಧದ ಬಳಿಯ ಬೆಂಗಳೂರು- ಮೈಸೂರು ಹಳೆ ರಸ್ತೆಯಲ್ಲಿ ವೇಗವಾಗಿ ಬಂದ ಬಸ್‌ ಲಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಈ ಸಂಬಂಧ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲ ಮಾಡಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.