ಬಸ್ ದರ ಏರಿಕೆ: ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ

| Published : Jan 14 2025, 01:05 AM IST

ಸಾರಾಂಶ

ರಾಜ್ಯ ಸರ್ಕಾರ ಬಸ್ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸೋಮವಾರ ನಗರದಲ್ಲಿ ಪ್ರತಿಭಟಿಸಿ ತಹಸೀಲ್ದಾರ್ ಹಾಗೂ ವಾಯವ್ಯ ಕರ್ನಾಟಕ ಸಾರಿಗೆ ಇಲಾಖೆ ಅಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ರಾಣಿಬೆನ್ನೂರು: ರಾಜ್ಯ ಸರ್ಕಾರ ಬಸ್ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸೋಮವಾರ ನಗರದಲ್ಲಿ ಪ್ರತಿಭಟಿಸಿ ತಹಸೀಲ್ದಾರ್ ಹಾಗೂ ವಾಯವ್ಯ ಕರ್ನಾಟಕ ಸಾರಿಗೆ ಇಲಾಖೆ ಅಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಈ ಸಮಯದಲ್ಲಿ ಸಂಘಟನೆಯ ತಾಲೂಕು ಅಧ್ಯಕ್ಷ ಚಂದ್ರಪ್ಪ ಬಣಕಾರ ಮಾತನಾಡಿ, ಇಂಧನ ಬೆಲೆ, ದೈನಂದಿನ ಗೃಹ ಬಳಕೆ ವಸ್ತುಗಳ ಬೆಲೆ ಹೆಚ್ಚಳದಿಂದ ಸಾಮಾನ್ಯ ಜನರು ಹೈರಾಣಾಗಿದ್ದು, ಇದೀಗ ಶೇ. 15ರಷ್ಟು ಬಸ್ ದರ ಏರಿಕೆ ಮಾಡಿರುವುದರಿಂದ ಗಾಯದ ಮೇಲೆ ಬರೆ ಎಳೆದಂತಾಗಿದೆ. ರಾಜ್ಯ ಸರ್ಕಾರದಿಂದ ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಹಾಗೂ ಕೇಂದ್ರ ಸರ್ಕಾರದಿಂದ ತೆರಿಗೆ ಹೆಚ್ಚಳ ಕ್ರಮದಿಂದ ಬಡ ಹಾಗೂ ಮಧ್ಯಮ ವರ್ಗದ ಜನರು ಕುಟುಂಬ ನಿರ್ವಹಣೆ ಮಾಡುವುದು ದುಸ್ತರವಾಗಿದೆ. ರಾಜ್ಯ ಸರ್ಕಾರ ಕೂಡಲೇ ಬಸ್ ದರ ಹೆಚ್ಚಳ ಹಿಂದಕ್ಕೆ ಪಡೆದು ಹಿಂದಿನ ದರ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ಸಂಘಟನೆಯ ರಾಜ್ಯಾಧ್ಯಕ್ಷ ನಿತ್ಯಾನಂದ ಕುಂದಾಪುರ, ಕೊಟ್ರೇಶಪ್ಪ ಎಮ್ಮಿ, ಮಲ್ಲಿಕಾರ್ಜುನ ಸಾವಕ್ಕಳವರ, ಪರಶುರಾಮ ಕುರುವತ್ತಿ, ಶ್ರೀಧರ ಛಲವಾದಿ, ಬಾಷಾಸಾಬ್ ಹಂಪಾಪಟ್ಟಣ, ವಿರೂಪಾಕ್ಷ ಕೆಂಚನಗೌಡ್ರ, ರಿಯಾಜ್‌ಅಹ್ಮದ ದೊಡ್ಡಮನಿ, ನಾಗರಾಜ ದಾವಣಗೆರಿ, ಅಣ್ಣಪ್ಪ ಛಲವಾದಿ, ಮೃತ್ಯುಂಜಯ ಕರಿಯಜ್ಜಿ, ಪರಶುರಾಮ ಕೋಲ್ಕಾರ, ಬಸವರಾಜ ದಳವಾಯಿ ಉಪಸ್ಥಿತರಿದ್ದರು.