ಸಾರಾಂಶ
ಕೆಎಸ್‌ಆರ್‌ಟಿಸಿ ಬಸ್ಸಿಗೆ ಹಿಂಭಾಗದಿಂದ ವೇಗವಾಗಿ ಬಂದ ಮಾರುತಿ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರಿಗೆ ಗಂಭೀರವಾದ ಗಾಯಗಳಾದ ಘಟನೆ ತಾಲೂಕಿನ ನಿಟ್ಟೂರು ಹೋಬಳಿ ಎಚ್ಎಎಲ್ ಘಟಕದ ಮುಂಭಾಗ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಶುಕ್ರವಾರ ನಡೆದಿದೆ.
ಕನ್ನಡಪ್ರಭ ವಾರ್ತೆ ಗುಬ್ಬಿ
ಕೆಎಸ್‌ಆರ್‌ಟಿಸಿ ಬಸ್ಸಿಗೆ ಹಿಂಭಾಗದಿಂದ ವೇಗವಾಗಿ ಬಂದ ಮಾರುತಿ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರಿಗೆ ಗಂಭೀರವಾದ ಗಾಯಗಳಾದ ಘಟನೆ ತಾಲೂಕಿನ ನಿಟ್ಟೂರು ಹೋಬಳಿ ಎಚ್ಎಎಲ್ ಘಟಕದ ಮುಂಭಾಗ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಶುಕ್ರವಾರ ನಡೆದಿದೆ.ವ್ಯಾನ್‌ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರಿಗೆ ಗಂಭೀರವಾದ ಗಾಯಗಳಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ಒಟ್ಟು 6 ಜನರಿದ್ದು ಉಳಿದ ನಾಲ್ವರಿಗೂ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆ ಸೇರಿಸಲಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ತೊಂದರೆ ಆಗಿಲ್ಲವಾದರೂ, ಈ ಘಟನೆಯಿಂದ ಹಲವರು ಆಘಾತಕ್ಕೆ ಒಳಗಾಗಿದ್ದರು. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಬೇರೆ ಬಸ್ಸಿನಲ್ಲಿ ಪ್ರಯಾಣಿಸಲು ಅನುವು ಮಾಡಿಕೊಡಲಾಯಿತು.
ತಿಪಟೂರಿನಿಂದ ತುಮಕೂರಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಎಚ್ಎಎಲ್ ಬಳಿ ಹಿಂಭಾಗದಿಂದ ವೇಗವಾಗಿ ಬಂದ ಮಾರುತಿ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.ವ್ಯಾನ್‌ನಲ್ಲಿ ಒಟ್ಟು 6 ಜನ ಪ್ರಯಾಣಿಕರಿದ್ದು ಎಲ್ಲರೂ ಬೆಂಗಳೂರು ಮೂಲದವರಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ. ಗುಬ್ಬಿ ಪೊಲೀಸರು ಸ್ಥಳಕ್ಕೆ ಆಗಮಿಸಿ ತುರ್ತು ಕ್ರಮಕೈಗೊಂಡು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ, ಹೆದ್ದಾರಿಯಲ್ಲಿ ವಾಹನ ದಟ್ಟಣೆಯಾಗದಂತೆ ಕ್ರಮವಹಿಸಿದರು.