ಸಾರಾಂಶ
ಬೆಳಗಾವಿ: ರಸ್ತೆ ಪಕ್ಕ ನಡೆದುಕೊಂಡು ಬರುತ್ತಿದ್ದ ವೃದ್ಧನಿಗೆ ಡಿಕ್ಕಿ ಹೊಡೆದು ನೆಲಕ್ಕೆ ಉರುಳಿ ಬಿದ್ದ ದ್ವಿಚಕ್ರ ವಾಹನ ಸವಾರರ ಮೇಲೆ ಸಾರಿಗೆ ಸಂಸ್ಥೆ ಬಸ್ ಹರಿದು ಮಹಿಳೆಯೋರ್ವಳು ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ. ಧಾರವಾಡ ತಾಲೂಕಿನ ಬೆನಕನಕಟ್ಟಿ ಗ್ರಾಮದ ನಿವಾಸಿ ವಿದ್ಯಾಶ್ರೀ ಸಂಗಯ್ಯ ಯರಗಂಬಳಿಮಠ (33) ಮೃತ ಮಹಿಳೆ. ಬೆಳಗಾವಿ ತಾಲೂಕಿನ ಮುತ್ಯಾನಟ್ಟಿ ಗ್ರಾಮದ ಸಾಗರ ಬಸವಣ್ಣಿ ಬೋರಕನವರ (28) ಗಾಯಗೊಂಡ ದ್ವಿಚಕ್ರ ವಾಹನ ಚಾಲಕ. ನಗರದ ಕೇಂದ್ರ ಬಸ್ ನಿಲ್ದಾಣದ ಮುಂಭಾಗದಲ್ಲಿ ನ.27 ರಂದು ನಡೆದಿದ್ದು, ಈ ದುರ್ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೃತ ವಿದ್ಯಾಶ್ರೀ ಸಂಬಂಧಿಕರ ಮನೆಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದರು. ಬಸ್ ನಿಲ್ದಾಣ ಮುಂಭಾಗದಲ್ಲಿ ತಲೆ ಮೇಲೆ ದಿನಸಿ ಹೊತ್ತು ಸಾಗುತ್ತಿದ್ದ ವೃದ್ಧನಿಗೆ ಇವರು ಪ್ರಯಾಣಿಸುತ್ತಿದ್ದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ರಸ್ತೆ ಮೇಲೆ ಉರುಳಿದೆ. ಇದೇ ಸಮಯಕ್ಕೆ ಹಿಂದಿನಿಂದ ಬರುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಇವರ ಮೇಲೆ ಹರಿದಿದೆ. ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ದ್ವಿಚಕ್ರ ವಾಹನ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಸವಾರ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಕುರಿತು ಸಂಚಾರಿ ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
;Resize=(128,128))
;Resize=(128,128))
;Resize=(128,128))