ಸಾರಾಂಶ
ಗದಗ: ಬಸ್ ನಿಲ್ದಾಣದ ಸ್ವಚ್ಛತೆ ಕಾಪಾಡುವುದು ಹಾಗೂ ಪ್ರಯಾಣಿಕರು, ವಿದ್ಯಾರ್ಥಿಗಳಿಗೆ ನಿಗದಿತ ಸಮಯಕ್ಕೆ ಸೂಕ್ತ ಸಾರಿಗೆ ಸೌಲಭ್ಯ ಕಲ್ಪಿಸುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ.ಸೂಚನೆ ನೀಡಿದರು.ಅವರು ಬುಧವಾರ ಜಿಲ್ಲೆಯ ಲಕ್ಷ್ಮೇಶ್ವರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಬಸ್ ನಿಲ್ದಾಣದ ಸ್ವಚ್ಛತೆ ಹಾಗೂ ಕಂಟ್ರೋಲ್ ಚಾರ್ಟ ಪರಿಶೀಲಿಸಿ ಬಸ್ ನಿಲ್ದಾಣದ ಸ್ವಚ್ಛತೆ ಕಾಪಾಡುವಂತೆ ಹಾಗೂ ಪ್ರಯಾಣಿಕರು, ವಿದ್ಯಾರ್ಥಿಗಳಿಗೆ ನಿಗದಿತ ಸಮಯಕ್ಕೆ ಸೂಕ್ತ ಸಾರಿಗೆ ಸೌಲಭ್ಯ ಕಲ್ಪಿಸುವಂತೆ ಸೂಚನೆ ನೀಡಿದರು.
ಶುದ್ಧ ಕುಡಿಯುವ ನೀರಿನ ಘಟಕ ತಕ್ಷಣ ಸರಿಪಡಿಸಿ ಪ್ರಯಾಣಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಸೂಚಿಸಿದರು.ಲಕ್ಷ್ಮೇಶ್ವರ ಘಟಕಕ್ಕೆ ಭೇಟಿ ನೀಡಿ ಇಪಿಕೆಎಂ 54.99 ಇರುವ ಬಗ್ಗೆ ಹರ್ಷ ವ್ಯಕ್ತಪಡಿಸಿ, ಜನಸಾಂದ್ರತೆಗೆ ಅನುಗುಣವಾಗಿ ಇನ್ನು 25 ಅನುಸೂಚಿ ಹೆಚ್ಚಿಸುವಂತೆ ಸೂಚಿಸಿದರು. ಸಿಬ್ಬಂದಿಗಳ ವಸತಿ ಗೃಹಗಳಿಗೆ ಭೇಟಿ ನೀಡಿ ವಸತಿ ಗೃಹಗಳು ಚೆನ್ನಾಗಿರುವ ಬಗ್ಗೆ ಹರ್ಷ ವ್ಯಕ್ತಪಡಿಸಿದರು.
ಶಿರಹಟ್ಟಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಬಸ್ ನಿಲ್ದಾಣದ ಶುಚಿತ್ವ, ಬಸ್‌ಗಳ ಕಾರ್ಯಾಚರಣೆ ಹಾಗೂ ವಾಣಿಜ್ಯ ಮಳಿಗೆ ಪರಿಶೀಲಿಸಿದರು ಹಾಗೂ ಚಾಲನಾ ಸಿಬ್ಬಂದಿಗಳ ಕುಂದುಕೊರತೆ ಆಲಿಸಿ ಬಗೆ ಹರಿಸುವದಾಗಿ ತಿಳಿಸಿದರು.ಶಿರಹಟ್ಟಿ ಘಟಕಕ್ಕೆ ಭೇಟಿ ನೀಡಿ ನಿಗದಿತ ಸಮಯಕ್ಕೆ ಅನುಸೂಚಿ ಕಾರ್ಯಾಚರಣೆ ಮಾಡುವಂತೆ ತಿಳಿಸಿದರು, ತಡವಾಗಿ ಕಾರ್ಯಾಚರಣೆ ಮಾಡದಂತೆ ಕಟ್ಟುನಿಟ್ಟಿನ ಆದೇಶ ನೀಡಿದರು.
ಮುಂಬರುವ ದಿನಗಳಲ್ಲಿ ಸವದತ್ತಿ ಯಲ್ಲಮ್ಮ ಹಾಗೂ ಮೈಲಾರ ಜಾತ್ರೆ ಇರುವ ಹಿನ್ನೆಲೆಯಲ್ಲಿ ಚಾಲನಾ ಸಿಬ್ಬಂದಿ ಗೈರು ಹಾಜರಿ ಕಡಿಮೆಗೊಳಿಸಿ ಹೆಚ್ಚುವರಿ ವಾಹನಗಳ ಕಾರ್ಯಾಚರಣೆ ಮಾಡಿ ಹೆಚ್ಚಿನ ಆದಾಯ ಸಂಗ್ರಹಿಸಿ ಘಟಕದ ಧನಾತ್ಮಕ ಬೆಳವಣಿಗೆಗೆ ಶ್ರಮಿಸುವಂತೆ ಸೂಚಿಸಿದರು.ಫೆಬ್ರುವರಿ ಕೊನೆ ವಾರದಲ್ಲಿ ಜರಗುವ ವಿಭಾಗಗಳ ಪರಿಶೀಲನೆ ಸಭೆಗೆ ಧನಾತ್ಮಕ ಬೆಳವಣಿಗೆಯೊಂದಿಗೆ ಹಾಜರಾಗಲು ಸೂಚಿಸಿದರು. ಈ ಸಂದರ್ಭದಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿ ಡಿ.ಎಂ. ದೇವರಾಜ, ವಿಭಾಗೀಯ ಸಾರಿಗೆ ಅಧಿಕಾರಿ ಪಿ.ವಿ. ಮೇತ್ರಿ ಘಟಕ ವ್ಯವಸ್ಥಾಪಕಿ ಸವಿತಾ ಆದಿ ಉಪಸ್ಥಿತರಿದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))